ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ; ‘ಕಾದು ನೋಡಿ’ ಎನ್ನುತ್ತಲೇ ಕೇಂದ್ರದ ವಿರುದ್ಧ ಗುಡುಗಿದ ಕಾಂಗ್ರೆಸ್

Date:

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ದನಿ ಅಡಗಿಸಲಾಗುತ್ತಿದೆ ಎಂಬ ಗಂಭೀರ ಆರೋಪಗಳ ನಡುವೆಯೇ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳು ಸಜ್ಜಾಗುತ್ತಿರುವ ಸೂಚನೆ ಲಭ್ಯವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಸದನದಲ್ಲಿ ಸ್ಪೀಕರ್ ನಡೆ ಮತ್ತು ಆಡಳಿತ ಪಕ್ಷದ ವರ್ತನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

​ಸೋಮವಾರ ಸಂಸತ್ ಭವನದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್, ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ವರದಿಗಳಿಗೆ ಸಂಬಂಧಿಸಿದಂತೆ, “ಕ್ರಮ ಕೈಗೊಳ್ಳುವವರೆಗೂ ಕಾದು ನೋಡಿ ” ಎಂದು ಉತ್ತರಿಸುವ ಮೂಲಕ ಕುತೂಹಲ ಮೂಡಿಸಿದ್ದಾರೆ.

ಸದನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ವೇಣುಗೋಪಾಲ್, “ಲೋಕಸಭೆಯಲ್ಲಿ ವಿರೋಧ ಪಕ್ಷಗಳಿಗೆ ಜಾಗವೇ ಇಲ್ಲದಂತಾಗಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಒಕ್ಕೂಟದ ಯಾವುದೇ ನಾಯಕರಿಗೆ ತಮ್ಮ ಅಭಿಪ್ರಾಯ ಮಂಡಿಸಲು ಅವಕಾಶ ನೀಡುತ್ತಿಲ್ಲ. ಆದರೆ, ಸರ್ಕಾರಿ ಪಕ್ಷದವರು ಏನು ಬೇಕಾದರೂ ಮಾತನಾಡಬಹುದು, ಯಾರ ಬಗ್ಗೆಯೂ ಅವಹೇಳನಕಾರಿ ಹೇಳಿಕೆಗಳನ್ನು ನೀಡಬಹುದು ಎಂಬಂತಾಗಿದೆ,” ಎಂದು ದೂರಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ|ಮೋದಿ ರಾಜಿ ರಾಜಕಾರಣದಿಂದ ಭಾರತದ ಸ್ವಾಭಿಮಾನ- ಸಾರ್ವಭೌಮತೆಗೆ ಧಕ್ಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​”ಸ್ಪೀಕರ್ ಅವರು ಕಾಂಗ್ರೆಸ್ ಮಹಿಳಾ ಸಂಸದರ ವಿರುದ್ಧವೇ ಆರೋಪಗಳನ್ನು ಮಾಡುತ್ತಿದ್ದಾರೆ. ವಿಪಕ್ಷಗಳ ಕಡೆಗೆ ಇಂತಹ ಧೋರಣೆ ಹಿಂದೆಂದೂ ಕಂಡುಬಂದಿರಲಿಲ್ಲ,” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಈ ಬೆಳವಣಿಗೆಗೂ ಮುನ್ನ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ವಿರೋಧ ಪಕ್ಷಗಳ ನಾಯಕರು ಸಭೆ ಸೇರಿ, ಮುಂದಿನ ದಿನಗಳಲ್ಲಿ ಅನುಸರಿಸಬೇಕಾದ ಜಂಟಿ ತಂತ್ರಗಾರಿಕೆಯ ಬಗ್ಗೆ ಚರ್ಚೆ ನಡೆಸಿದರು. ಅವಿಶ್ವಾಸ ನಿರ್ಣಯದ ಬಗ್ಗೆ ನೇರವಾಗಿ ಉತ್ತರಿಸದಿದ್ದರೂ, “ಸಮಗ್ರ ವಿರೋಧ ಪಕ್ಷ ಒಗ್ಗಟ್ಟಾಗಿದೆ, ಮುಂದಿನ ನಡೆಯನ್ನು ಕಾದು ನೋಡಿ,” ಎಂದು ವೇಣುಗೋಪಾಲ್ ಹೇಳಿದ್ದಾರೆ.

ಕಳೆದ ಗುರುವಾರ, ಪ್ರಧಾನಿ ಮೋದಿಯವರ ಉತ್ತರವಿಲ್ಲದೆಯೇ ವಂದನಾ ನಿರ್ಣಯವನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿತ್ತು. ಈ ವೇಳೆ ಮಾತನಾಡಿದ್ದ ಸ್ಪೀಕರ್ ಓಂ ಬಿರ್ಲಾ, “ಕಾಂಗ್ರೆಸ್ ಸದಸ್ಯರು ಪ್ರಧಾನಿಯವರ ಆಸನದ ಬಳಿ ತೆರಳಿ ಅನಿರೀಕ್ಷಿತ ಕೃತ್ಯ ಎಸಗುವ ಬಗ್ಗೆ ಖಚಿತ ಮಾಹಿತಿ ಇತ್ತು. ಪ್ರಜಾಪ್ರಭುತ್ವದ ಸಂಪ್ರದಾಯಗಳಿಗೆ ಧಕ್ಕೆ ಬಾರದಿರಲಿ ಎಂದು ನಾನೇ ಪ್ರಧಾನಿಯವರನ್ನು ಸದನಕ್ಕೆ ಬರದಂತೆ ಕೋರಿದ್ದೆ” ಎಂಬ ಹೇಳಿಕೆ ನೀಡಿದ್ದರು.

​ಆದರೆ, ಈ ಆರೋಪವನ್ನು ತಳ್ಳಿಹಾಕಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ, “ಇದು ಹಸಿ ಸುಳ್ಳು. ಪ್ರಧಾನಿ ಮೋದಿ ಸ್ಪೀಕರ್ ಅವರ ಹಿಂದೆ ಅವಿತುಕೊಳ್ಳುತ್ತಿದ್ದಾರೆ,” ಎಂದು ತಿರುಗೇಟು ನೀಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...