ಎಸ್‌ಐಆರ್‌ ವಿರೋಧಿಸಿ ಸೋನಿಯಾ ನೇತೃತ್ವದಲ್ಲಿ ‘ಇಂಡಿಯಾ’ ಒಕ್ಕೂಟದಿಂದ ಸಂಸದರಿಂದ ಪ್ರತಿಭಟನೆ

Date:

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ‘ಇಂಡಿಯಾ’ ಒಕ್ಕೂಟದ ಸಂಸದರು ಸಂಸತ್ ಭವನದ ಆವರಣದಲ್ಲಿ ಸತತ ಎಂಟನೇ ದಿನವೂ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

ಸಂಸತ್ ಕಲಾಪ ಆರಂಭಕ್ಕೂ ಮುನ್ನ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ಅಖಿಲೇಶ್ ಯಾದವ್ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆಯಿಂದ ಹಿಂದೆ ಸರಿಯಬೇಕೆಂದು ಸಂಸದರು ಒತ್ತಾಯಿಸಿದರು. ಸಂಸತ್ತಿನ ಮಕರ ದ್ವಾರದ ಮೆಟ್ಟಿಲುಗಳ ಬಳಿ ಸಾಲುಗಟ್ಟಿ ನಿಂತ ಸಂಸದರು ‘ಎಸ್‌ಐಆರ್–ಲೋಕತಂತ್ರ ಪೇ ವಾರ್’ ಎಂಬ ಬೃಹತ್ ಬ್ಯಾನರ್ ಪ್ರದರ್ಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾನವೀಯತೆಯ ಪಸೆ ಉಳಿದಿದೆಯೇ ತುಸುವಾದರೂ?

ಚುನಾವಣಾ ಆಯೋಗ ಮತ್ತು ಸರ್ಕಾರ ಒಪ್ಪಂದ ಮಾಡಿಕೊಂಡಿರುವುದಾಗಿ ಆರೋಪಿಸಿದ ಅವರು, ‘ಸ್ಟಾಪ್ ಎಸ್‌ಐಆರ್’ ಎಂಬ ಫಲಕಗಳನ್ನು ಹಿಡಿದಿದ್ದರು. ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಸಮಾಜವಾದಿ ಪಕ್ಷ, ಆರ್‌ಜೆಡಿ ಮತ್ತು ಎಡಪಕ್ಷಗಳ ಸದಸ್ಯರು ಸೇರಿದಂತೆ ವಿರೋಧ ಪಕ್ಷದ ಹಲವಾರು ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಿ ಘೋಷಣೆಗಳನ್ನು ಕೂಗಿದರು.

ಬಿಹಾರದ ವಿಧಾನಸಭಾ ಚುನಾವಣೆಗೆ ಮುನ್ನ ಹಲವು ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಉದ್ದೇಶವನ್ನು ಚುನಾವಣಾ ಆಯೋಗ ಹೊಂದಿದೆ ಎಂದು ಆರೋಪಿಸಿ, ಎಸ್‌ಐಆರ್ ವಿರುದ್ಧ ಸಂಸತ್ತಿನ ಎರಡೂ ಸದನಗಳಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಈ ವಿಷಯದ ಕುರಿತು ಎರಡೂ ಸದನಗಳಲ್ಲಿ ಚರ್ಚೆ ನಡೆಸಬೇಕೆಂದು ಅವರು ಒತ್ತಾಯಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...