ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

Date:

ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 1ರಿಂದ 19ರವರೆಗೆ ನಡೆಸಲು ಸರ್ಕಾರ ನೀಡಿದ ಪ್ರಸ್ತಾವನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.

ಇಂದು ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಿರಣ್ ರಿಜಿಜು ಅವರು, “ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುವ ಹಾಗೂ ಜನರ ಆಕಾಂಕ್ಷೆಗಳನ್ನು ಈಡೇರಿಸುವ ರಚನಾತ್ಮಕ ಮತ್ತು ಫಲಪ್ರದ ಅಧಿವೇಶನವಾಗುವುದನ್ನು ಎದುರು ನೋಡುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

ಈ ಚಳಿಗಾಲದ ಅಧಿವೇಶನವು ಡಿಸೆಂಬರ್ 1 ರಿಂದ 19ರವರೆಗೆ ನಡೆಯಲಿದ್ದು, ಅಗತ್ಯವಿದ್ದರೆ ಸಂಸತ್ತಿನ ವ್ಯವಹಾರಗಳ ಪ್ರಕಾರ ದಿನಾಂಕಗಳಲ್ಲಿ ಬದಲಾವಣೆ ಮಾಡಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಜನ ಗಣ ಮನ’ಕ್ಕೆ ಬಿಜೆಪಿ ತಿರಸ್ಕಾರ; ರವೀಂದ್ರನಾಥ ಟ್ಯಾಗೋರ್‌ಗೆ ಅಪಚಾರ!

ಇದಕ್ಕೂ ಮುನ್ನ ನಡೆದ ಸಂಸತ್ತಿನ ಮಳೆಗಾಲದ ಅಧಿವೇಶನವನ್ನು ಆಗಸ್ಟ್ 21ರಿಂದ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ಆ ಅಧಿವೇಶನದಲ್ಲಿ ಲೋಕಸಭೆಯಲ್ಲಿ 12 ಮಸೂದೆಗಳು ಮತ್ತು ರಾಜ್ಯಸಭೆಯಲ್ಲಿ 14 ಮಸೂದೆಗಳು ಅಂಗೀಕರಿಸಲಾಗಿತ್ತು.

ಮಳೆಗಾಲದ ಅಧಿವೇಶನದಲ್ಲಿ ಸಂವಿಧಾನದ 75ನೇ ವಾರ್ಷಿಕೋತ್ಸವ ಚರ್ಚೆ, ಉಪರಾಷ್ಟ್ರಪತಿ ಜಗದೀಪ್ ಧನಕರ್ ವಿರುದ್ಧ ಅವಿಶ್ವಾಸ ನಿರ್ಣಯ, ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ಮಹಾಭಿಯೋಗ ಪ್ರಕ್ರಿಯೆ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸಿದ ಪ್ರಕರಣಗಳು ಸಂಸತ್ತಿನಲ್ಲಿ ಹೆಚ್ಚು ಚರ್ಚೆಯಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...