ರೈಲಿನಲ್ಲಿ ಸಿಗರೇಟ್ ಸೇದಿದ್ದಕ್ಕೆ ಪ್ರಯಾಣಿಕನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ; ಆರೋಪಿ ಬಂಧನ

Date:

ಚಲಿಸುತ್ತಿದ್ದ ರೈಲಿನಲ್ಲಿ ಸಿಗರೇಟ್‌ ಸೇದುತ್ತಿದ್ದ ವ್ಯಕ್ತಿಯ ಮೇಲೆ ಪ್ರಯಾಣಿಕನೊಬ್ಬ ಮಾರಕಾಸ್ತ್ರದಿಂದ ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿ ನಡೆದಿದೆ. ಹಲ್ಲೆಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಮೃತಸರ ಮತ್ತು ನಾಂದೇಡ್ ನಡುವೆ ಸಂಚರಿಸುವ ಸಚ್ಖಂಡ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಘಟನೆ ನಡೆದಿದೆ. ರೈಲಿನಲ್ಲಿ ಸಿಗರೇಟ್ ಸೇದುತ್ತಿದ್ದ ವ್ಯಕ್ತಿ ಮತ್ತು ಓರ್ವ ಪ್ರಯಾಣಿಕನ ನಡುವೆ ವಾಗ್ವಾದ ನಡೆದಿದೆ. ರೈಲು ಮಥುರಾ ಜಂಕ್ಷನ್‌ ನಿಲ್ದಾಣಕ್ಕೆ ಬಂದಾಗ ವಾಗ್ವಾದ ತೀವ್ರಗೊಂಡಿದೆ. ಧೂಮಪಾನ ಮಾಡುತ್ತಿದ್ದ ವ್ಯಕ್ತಿಗೆ ಪ್ರಯಾಣಿಕ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ ಎಂದು ವರದಿಯಾಗಿದೆ.

ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​​ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ರೈಲ್ವೆ ಸಿಒ ಸುದೇಶ್ ಗುಪ್ತಾ, “ಗಾಯಾಳವನ್ನು ಮಥುರಾದ ಉಪರ್ಕೋಟ್ ಗ್ರಾಮದ ನಿವಾಸಿ ಪವನ್ ಎಂದು ಹೆಸರಿಸಲಾಗಿದೆ. ಆರೋಪಿಯನ್ನು ನಾಂದೇಡ್‌ನ ಮೋಹನ್ ಸಿಂಗ್ ಎಂದು ಗುರುತಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈ ವರದಿ ಓದಿದ್ದೀರಾ?: ಏಪ್ರಿಲ್ – ದಲಿತ ಇತಿಹಾಸವನ್ನು ಸಂಭ್ರಮಿಸುವ ತಿಂಗಳು

“ಪವನ್‌ ಧೋಲ್ಪುರದಿಂದ ಮಥುರಾಗೆ ಮತ್ತು ಆರೋಪಿ ಮೋಹನ್ ಸಿಂಗ್ ನಾಂದೇಡ್‌ನಿಂದ ಅಮೃತಸರಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ರೈಲಿನೊಳಗೆ ಪವನ್‌ ಸಿಗರೇಟ್ ಸೇದುತ್ತಿದ್ದುದ್ದನ್ನು ಮೋಹನ್ ಸಿಂಗ್ ವಿರೋಧಿಸಿದ್ದಾರೆ. ಇದರಿಂದ ಇಬ್ಬರ ನಡುವೆ ವಾಗ್ವಾದ ನಡೆದಿದೆ. ರೈಲು ಮಥುರಾ ಜಂಕ್ಷನ್‌ಗೆ ಬರುತ್ತಿದ್ದಂತೆಯೇ ಪವನ್‌ ಮೇಲೆ ಮೋಹನ್ ಸಿಂಗ್ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ಪವನ್‌ ಕೈಗೆ ತೀವ್ರ ಗಾಯಗಳಾಗಿವೆ” ಎಂದು ವಿವರಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಮಥುರಾ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...