ಎಲ್ಲ ಲೋಕಸಭಾ ಕ್ಷೇತ್ರಗಳಲ್ಲೂ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಸ್ಥಾಪನೆ: ಸಚಿವ ಸಿಂಧಿಯಾ

Date:

ಭಾರತದ ಎಲ್ಲ 543 ಲೋಕಸಭಾ ಕ್ಷೇತ್ರಗಳಲ್ಲೂ ಪಾಸ್‌ಪೋರ್ಟ್‌ ಸೇವಾ ಕೇಂದ್ರ ತೆರೆಯಲಾಗುತ್ತದೆ ಎಂದು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಘೋಷಿಸಿದ್ದಾರೆ.

ಮಧ್ಯಪ್ರದೇಶದ ಗುಣ ಲೋಕಸಭಾ ಕ್ಷೇತ್ರದಲ್ಲಿ (ಸಿಂಧಿಯಾ ಪ್ರತಿನಿಧಿಸುವ ಕ್ಷೇತ್ರ) ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಪ್ರಧಾನಿ ಮೋದಿ ಅವರು ಸೇವೆಗಳನ್ನು ವಿಸ್ತರಿಸುವ ಉದ್ದೇಶ ಹೊಂದಿದ್ದಾರೆ. ಹೀಗಾಗಿ, ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಿದ್ದಾರೆ” ಎಂದು ಹೇಳಿದ್ದಾರೆ.

ಇದೇ ವರ್ಷ ಮಧ್ಯಪ್ರದೇಶದಲ್ಲಿ ಆರು ಪಾಸ್‌ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲಾಗುತ್ತದೆ. ವಿದೇಶಾಂಗ ಸಚಿವಾಲಯದ ನೆರವು ಪಡೆದು, ದೇಶದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲೂ ಪಾಸ್‌ಪೋರ್ಟ್ ಸೇವಾ ಕೇಂದ್ರ ತೆರೆಯಲಾಗುತ್ತದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...