ಪಟಾಕಿ ಎಫೆಕ್ಟ್ | ದೆಹಲಿಯಲ್ಲಿ ಗಾಳಿ ಗುಣಮಟ್ಟ ತೀವ್ರ ಕುಸಿತ

Date:

ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಸಮಯದ ನಿಯಮಗಳನ್ನು ಉಲ್ಲಂಘಿಸಿ ದೀಪಾವಳಿ ಪ್ರಯುಕ್ತ ಜನರು ಪಟಾಕಿ ಸಿಡಿಸಿದ ಪರಿಣಾಮ ರಾಷ್ಟ್ರ ರಾಜಧಾನಿ ದೆಹಲಿಯ ಗಾಳಿಯ ಗುಣಮಟ್ಟ ತೀವ್ರವಾಗಿ ಹದೆಗೆಟ್ಟಿದೆ.

ಸೋಮವಾರ (ನಿನ್ನೆ) ರಾತ್ರಿಯಿಡೀ ಜನರು ಪಟಾಕಿಗಳನ್ನು ಸಿಡಿಸಿದ ಪರಿಣಾಮ, ಮಂಗಳವಾರ (ಇಂದು) ಬೆಳಿಗ್ಗೆ ರಾಜಧಾನಿ ನಗರದಾದ್ಯಂತ ಮೋಡ ಮುಸುಕಿದ ವಾತಾವರಣ ಸೃಷ್ಟಿಯಾಗಿದೆ. ಗಾಳಿಯ ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಬೆಳಿಗ್ಗೆ 7 ಗಂಟೆಯ ಸುಮಾರಿಗೆ 451 ತಲುಪಿತ್ತು. ಇದು ರಾಷ್ಟ್ರೀಯ ಸರಾಸರಿಗಿಂತ 1.8 ಪಟ್ಟು ಹೆಚ್ಚು ಮತ್ತು ತೀವ್ರ ವಾಯಮಾಲಿನ್ಯವನ್ನು ಸೂಚಿಸುತ್ತದೆ.

ದೀಪಾವಳಿ ರಾತ್ರಿ (ಸೋಮವಾರ ರಾತ್ರಿ) ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ‘ತೀವ್ರ ಕಳಪೆ’ ಮಟ್ಟಕ್ಕೆ ಇಳಿದಿತ್ತು. ದೆಹಲಿಯ ಸ್ಯಾಟ್‌ಲೈಟ್ ನಗರಗಳಾದ ನೋಯ್ಡಾ ಮತ್ತು ಗುರ್‌ಗಾಂವ್‌ನಲ್ಲೂ ಪರಿಸ್ಥಿತಿ ತೀವ್ರವಾಗಿ ಹದೆಗೆಟ್ಟಿದೆ. ಮಂಗಳವಾರ ಬೆಳಿಗ್ಗೆ ಈ ನಗರಗಳಲ್ಲಿ ಕ್ರಮವಾಗಿ 407 ಮತ್ತು 402 ಎಕ್ಯೂಐ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿಯ ಬಹುತೇಕ ವಾಯು ಗುಣಮಟ್ಟ ಮಾಪನ ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ‘ರೆಡ್‌ಝೋನ್‌’ ತಲುಪಿರುವುದಾಗಿ ದಾಖಲಾಗಿದೆ. ವಝೀರ್‌ಪುರ (435), ದ್ವಾರಕಾ (422), ಅಶೋಕ್ ವಿಹಾರ್ (445), ಮತ್ತು ಆನಂದ್ ವಿಹಾರ್‌ (440)ಗಳಲ್ಲಿ ಗಾಳಿಯು ತೀವ್ರ ಕಳಪೆ ಮಟ್ಟಕ್ಕೆ ಇಳಿದಿದೆ. ಇದು ವಾಯು ಮಾಲಿನ್ಯದ ಗಂಭೀರ ಸ್ಥಿತಿಯನ್ನು ಸೂಚಿಸುತ್ತದೆ ಎಂದು ವರದಿಗಳು ವಿವರಿಸಿವೆ.

0 ಯಿಂದ 50ರ ನಡುವಿನ ವಾಯುಗುಟ್ಟವನ್ನು ‘ಉತ್ತಮ’, 51 ರಿಂದ 100 ‘ತೃಪ್ತಿದಾಯಕ’, 101 ರಿಂದ 200 ‘ಮಧ್ಯಮ’, 201 ರಿಂದ 300 ‘ಕಳಪೆ’, 301 ರಿಂದ 400 ‘ಅತೀ ಕಳಪೆ’ ಮತ್ತು 401 ರಿಂದ 500 ‘ತೀವ್ರ ಕಳಪೆ’ ಅಥವಾ ಗಂಭೀರ ಪರಿಸ್ಥಿತಿ ಎಂದು ಪರಿಗಣಿಸಲಾಗುತ್ತದೆ.

2020ರಿಂದ ದೆಹಲಿಯಲ್ಲಿ ದೀಪಾವಳಿಯಂದು ಪಟಾಕಿಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...