2 ಕೋಟಿ ರೂ. ಕೊಡದಿದ್ದರೆ ಹತ್ಯೆ: ಸಲ್ಮಾನ್ ಖಾನ್‌ಗೆ ಮತ್ತೊಂದು ಜೀವ ಬೆದರಿಕೆ

Date:

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಅಪರಿಚಿತ ವ್ಯಕ್ತಿಯಿಂದ 2 ಕೋಟಿ ರೂ. ನೀಡುವಂತೆ ಕೊಲೆ ಬೆದರಿಕೆ ಬಂದಿದೆ. ಮುಂಬೈ ಸಂಚಾರಿ ಪೊಲೀಸರಿಗೆ ಮಹಾರಾಷ್ಟ್ರದ ವರ್ಲಿ ಜಿಲ್ಲೆಯಿಂದ ಸಂದೇಶ ಕಳುಹಿಸಲಾಗಿದ್ದು, ಹಣ ನೀಡದಿದ್ದರೆ ನಟನನ್ನು ಕೊಲ್ಲಲಾಗುವುದು ಎಂದು ಹೇಳಲಾಗಿದೆ.

ಬೆದರಿಕೆ ಸಂದೇಶ ಬಂದ ನಂತರ ಮಹಾರಾಷ್ಟ್ರದ ವರ್ಲಿ ಜಿಲ್ಲೆಯ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಶಾಸಕ ಮತ್ತು ದಿವಂಗತ ಬಾಬಾ ಸಿದ್ದೀಕಿ ಅವರ ಪುತ್ರ ಜೀಶಾನ್ ಸಿದ್ದೀಕಿ ಹಾಗೂ ಸಲ್ಮಾನ್‌ ಖಾನ್‌ ಅವರಿಗೆ ಕೊಲೆ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮಂಗಳವಾರ ನೋಯ್ಡಾದಲ್ಲಿ 20 ವರ್ಷದ ಯುವಕನನ್ನು ಬಂಧಿಸಿದ್ದಾರೆ. ಗುರ್ಫಾನ್ ಖಾನ್ ಎಂದು ಕರೆಯಲ್ಪಡುವ ಮೊಹಮ್ಮದ್ ತಯ್ಯಬ್ ಎಂದು ಗುರುತಿಸಲಾದ ಆರೋಪಿಯನ್ನು ನೋಯ್ಡಾದ ಸೆಕ್ಟರ್ 39 ರಲ್ಲಿ ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಟಿ20 ಪಂದ್ಯದಲ್ಲಿ 344 ರನ್ ಬಾರಿಸಿದ ಜಿಂಬಾಬ್ವೆ: ಒಂದೇ ಪಂದ್ಯದಲ್ಲಿ 7 ವಿಶ್ವದಾಖಲೆ ನಿರ್ಮಾಣ

ಅಕ್ಟೋಬರ್ 12 ರಂದು, ಬಾಬಾ ಸಿದ್ದೀಕಿ ಅವರು ದಸರಾ ಆಚರಣೆಯ ಸಂದರ್ಭದಲ್ಲಿ ಮುಂಬೈನ ಬಾಂದ್ರಾದಲ್ಲಿನ ಅವರ ಕಚೇರಿಯ ಹೊರಗೆ ಹತ್ಯೆ ಮಾಡಲಾಗಿತ್ತು. ಒಂದು ದಿನದ ನಂತರ, ಲಾರೆನ್ಸ್ ಬಿಷ್ಣೋಯ್ ತಂಡ ಬಾಬಾ ಸಿದ್ದೀಕಿ ಅವರ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿತು. ಸಲ್ಮಾನ್ ಖಾನ್ ಅವರೊಂದಿಗಿನ ನಿಕಟ ಸಂಬಂಧ ಹೊಂದಿದ್ದ ಕಾರಣ ಅವರ ಮೇಲೆ ದಾಳಿ ಮಾಡಲಾಗಿದೆ ಎಂದು ತಂಡದ ಸದಸ್ಯರು ಪೊಲೀಸರಿಗೆ ತಿಳಿಸಿದ್ದರು.

ಇದುವರೆಗೆ ಬಾಬಾ ಸಿದ್ದೀಕಿ ಹತ್ಯೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು 15 ಮಂದಿಯನ್ನು ಬಂಧಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...