ಆರ್‌ಬಿಐ ಕ್ರಮ; ನಾಲ್ಕನೇ ತ್ರೈಮಾಸಿಕದಲ್ಲಿ ಪೇಟಿಎಂಗೆ ಬರೋಬ್ಬರಿ 550 ಕೋಟಿ ರೂ ನಷ್ಟ

Date:

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ವಿರುದ್ಧ ಆರ್‌ಬಿಐ ಕ್ರಮದ ಪರಿಣಾಮವಾಗಿ ಭಾರತದ ಡಿಜಿಟಲ್ ಪೇಮೆಂಟ್ಸ್ ಸಂಸ್ಥೆ ಪೇಟಿಎಂ ಭಾರೀ ನಷ್ಟವನ್ನು ಕಂಡಿದೆ. ಸಂಸ್ಥೆ ಬುಧವಾರ ತನ್ನ ನಾಲ್ಕನೇ ತ್ರೈಮಾಸಿಕದ ವರದಿಯನ್ನು ಪ್ರಕಟಿಸಿದ್ದು ಜನವರಿಯಿಂದ ಮಾರ್ಚ್ 31ರವರೆಗಿನ ಮೂರು ತಿಂಗಳ ಅವಧಿಯಲ್ಲಿ ಬರೋಬ್ಬರಿ 549.6 ಕೋಟಿ ರೂಪಾಯಿ ನಷ್ಟವಾಗಿರುವುದಾಗಿ ತಿಳಿಸಿದೆ.

ಕಳೆದ ವರ್ಷ ಇದೇ ಅವಧಿಯಲ್ಲಿ ಪೇಟಿಎಂ ಸಂಸ್ಥೆಯು 219.8 ಕೋಟಿ ರೂಪಾಯಿ ನಷ್ಟವನ್ನು ದಾಖಲಿಸಿತ್ತು. ಹಾಗೆಯೇ ಕಳೆದ ತ್ರೈಮಾಸಿಕದಲ್ಲಿ ಪೇಟಿಎಂ ಸುಮಾರು 168.4 ಕೋಟಿ ರೂಪಾಯಿ ನಷ್ಟವನ್ನು ಕಂಡಿರುವುದಾಗಿ ತನ್ನ ಹಣಕಾಸು ವರದಿಯಲ್ಲಿ ಮಾಹಿತಿ ನೀಡಿತ್ತು.

ಇದನ್ನು ಓದಿದ್ದೀರಾ?  ಪೇಟಿಎಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ಭವೇಶ್ ಗುಪ್ತಾ ದಿಢೀರ್ ರಾಜೀನಾಮೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ವರ್ಷದಿಂದ ವರ್ಷಕ್ಕೆ ‘ಒಟ್ಟು ಆದಾಯ’ವೂ ಕೂಡಾ ಶೇ. 2.9ರಷ್ಟು ಅಂದರೆ 2,334.5 ಕೋಟಿ ರೂ ಇದ್ದ ಆದಾಯವು 2,267.1 ಕೋಟಿ ರೂಪಾಯಿಗೆ ಇಳಿದಿದೆ. ಇನ್ನು ‘ಆದಾಯ’ವು ಶೇಕಡ 20.5ರಷ್ಟು ಇಳಿದು 2,850.5 ಕೋಟಿ ರೂಪಾಯಿ ಆಗಿದೆ.

ಪೇಟಿಎಂನ ಆರ್ಥಿಕ ವರದಿ ಮೇಲೆ ಪ್ರಮುಖವಾಗಿ ಪೇಟಿಎಂ ಬ್ಯಾಂಕ್ ವಿರುದ್ಧ ಆರ್‌ಬಿಐ ಕೈಗೊಂಡ ಕ್ರಮವು ಪ್ರಭಾವ ಬೀರಿದೆ. “ಕೆಲವು ಅಡೆತಡೆಗಳಿಂದಾಗಿ ಸಂಸ್ಥೆಯು ನಾಲ್ಕನೇ ತ್ರೈಮಾಸಿಕದಲ್ಲಿ ಆರ್ಥಿಕ ಹಿನ್ನೆಡೆ ಕಂಡಿದೆ. ಹಣಕಾಸು ವರ್ಷ 2025ರ ಮೊದಲ ತ್ರೈಮಾಸಿಕದಲ್ಲಿ ಈ ಅಡೆತಡೆಗಳ ಪ್ರಭಾವ ಅಧಿಕವಾಗಿ ಕಾಣಿಸಿಕೊಳ್ಳಬಹುದು” ಎಂದು ಪೇಟಿಎಂ ತಿಳಿಸಿದೆ.

ಇದನ್ನು ಓದಿದ್ದೀರಾ?  ಮಾರ್ಚ್ 15ರಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸ್ಥಗಿತ

2023-24ರ ಹಣಕಾಸು ವರ್ಷದಲ್ಲಿ ಒಟ್ಟಾಗಿ ಸಂಸ್ಥೆಯು 1,422.4 ಕೋಟಿ ರೂಪಾಯಿ ನಷ್ಟವನ್ನು ದಾಖಲಿಸಿದೆ. ಹಣಕಾಸು ವರ್ಷ 2022-23ರಲ್ಲಿ ದಾಖಲಾದ 1,776.5 ಕೋಟಿ ರೂ ನಷ್ಟಕ್ಕೆ ಹೋಲಿಸಿದಾಗ ಕಳೆದ ಹಣಕಾಸು ವರ್ಷದಲ್ಲಿ ಹಲವಾರು ಅಡತಡೆಗಳ ಹೊರತಾಗಿಯೂ ಪೇಟಿಎಂ ನಷ್ಟವು ಕೊಂಚ ಕಡಿಮೆಯಾಗಿದೆ. ಇನ್ನು 2023-24ರಲ್ಲಿ ಪೇಟಿಎಂ ಆದಾಯ ಶೇ 25ರಷ್ಟು ಜಿಗಿದು 9,978 ರೂಗೆ ತಲುಪಿದೆ.

ಪದೇ ಪದೇ ಎಚ್ಚರಿಕೆ ನೀಡಿದರೂ ಪೇಮೆಂಟ್ಸ್ ಬ್ಯಾಂಕ್ ತಮ್ಮ ನಿಯಮಾವಳಿಗಳನ್ನು ಅನುಸರಿಸಲು ವಿಫಲವಾದ ಪರಿಣಾಮವಾಗಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಅನ್ನು ಆರ್‌ಬಿಐ ನಿರ್ಬಂಧಿಸಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನಲ್ಲಿ ಲಕ್ಷಾಂತರ ಖಾತೆಗಳು ಸರಿಯಾದ ಗುರುತೆ ಇಲ್ಲದೆ ಅನಧಿಕೃತವಾಗಿ ರಚಿಸಲಾಗಿದೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...