ವಿಕೃತ ಘಟನೆ | ಹೊಸದಾಗಿ ಮದುವೆಯಾಗಿದ್ದ ಸೊಸೆಯ ಮೇಲೆ ಮಾವನಿಂದ ಅತ್ಯಾಚಾರ

Date:

ಮದುವೆಯಾಗಿ ಹೊಸದಾಗಿ ಮನೆಗೆ ಬಂದ ಸೊಸೆಯ ಮೇಲೆ ಕಾಮುಕ ಮಾವ ಮತ್ತು ಆತನ ಸ್ನೇಹಿತ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ನಡೆದಿದೆ. ಸಂತ್ರಸ್ತೆ ಪತಿಯ ಮನೆಯಿಂದ ತಪ್ಪಿಸಿಕೊಂಡು ಬಂದು, ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಸಂತ್ರಸ್ತೆ ಮತ್ತು ಆಕೆಯ ಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಯುವತಿ ಪತಿ ಹೊರಹೋಗಿದ್ದ ಸಂದರ್ಭದಲ್ಲಿ ಮನೆಗೆ ಬಂದ ಮಾವ, ಆಕೆಯನ್ನು ತವರು ಮನೆಗೆ ಬಿಟ್ಟು ಬರುವುದಾಗಿ ಹೇಳಿ ಕರೆದೊಯ್ದಿದ್ದಾನೆ. ಆದರೆ, ತನ್ನ ಮನೆಗೆ ಕರೆದೊಯ್ದು, ಕಟ್ಟಿ ಹಾಕಿದ್ದಾನೆ ಎಂದು ಹೇಳಲಾಗಿದೆ.

ಆರೋಪಿ ಮಾವ ಮತ್ತು ಆತನ ಸ್ನೇಹಿತ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ವಿಚಾರದ ಬಗ್ಗೆ ಯಾರಿಗಾದರೂ ಹೇಳಿದರೆ, ಆಕೆಯ ಪೋಷಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ನಿರಂತರ 15 ದಿನಗಳ ಕಾಲ ತನ್ನ ಮನೆಯಲ್ಲಿ ಕೂಡಿ ಹಾಕಿ ದೌರ್ಜನ್ಯ ಎಸಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳ ಕಣ್ತಪ್ಪಿಸಿ ಆ ಮನೆಯಿಂದ ತಪ್ಪಿಸಿಕೊಂಡ ಬಂದ ಯುವತಿ, ನಾರ್ಪೋಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ತನ್ನ ಮೇಲಾದ ದೌರ್ಜನ್ಯಗಳ ಬಗ್ಗೆ ವಿವರಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

“ಜನವರಿ 30ರಂದು ಸಂತ್ರಸ್ತೆಯನ್ನು ಆಕೆಯ ಮಾವ ಕರೆದೊಯ್ದು, ಕೂಡಿ ಹಾಕಿ, ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದೇವೆ. ತನಿಖೆ ನಡೆಯುತ್ತಿದೆ. ಆರೋಪಿಗಳು ಪರಾರಿಯಾಗಿದ್ದು, ಶೋಧ ನಡೆಯುತ್ತಿದೆ. ಆರೋಪಿಗಳ ವಿರುದ್ಧ ಬಿಎನ್‌ಎಸ್‌ ಸೆಕ್ಷನ್ 64, 127(4), 351(3), 74, ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ನಾರ್ಪೋಲಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಭರತ್ ಕಾಮತ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...