ಗಂಡು ಮಗು ಬೇಕೆಂಬ ಹಪಾಹಪಿ; 7 ವರ್ಷದ ಮಗಳನ್ನು ಕಾಲುವೆಗೆ ಎಸೆದ ವಿಕೃತ ತಂದೆ

Date:

ಗುಂಡು ಮಗು ಬೇಕೆಂಬ ಪುರುಷಾಹಂಕಾರದ ಹಪಾಹಪಿಯಿಂದ ವಿಕೃತ ತಂದೆಯೊಬ್ಬ ತನ್ನ 7 ವರ್ಷದ ಮಗಳನ್ನು ಕಾಲುವೆಗೆ ಎಸೆದು ಕೊಂದಿರುವ ಹೃದಯವಿದ್ರಾವಕ, ಅಮಾನುಷ ಘಟನೆ ಗುಜರಾತ್‌ನಲ್ಲಿ ನಡೆದಿದೆ.

ಗುಜರಾತ್‌ನ ಖೇಡಾ ಜಿಲ್ಲೆಯ ಕಪಡ್ವಂಜ್ ತಾಲ್ಲೂಕಿನ ಚೆಲಾವತ್ ಗ್ರಾಮದಲ್ಲಿ ಜುಲೈ 10ರಂದು ಘಟನೆ ನಡೆದಿದ್ದು, ಇದೀಗ ಆರೋಪಿಯ ಪತ್ನಿ ಘಟನೆಯನ್ನು ಬಹಿರಂಗಪಡಿಸಿದ್ದಾರೆ. ಬಳಿಕ, ಆರೋಪಿ ವಿಜಯ್ ಸೋಲಂಕಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಜುಲೈ 10ರಂದು ರಾತ್ರಿ ದೀಪೇಶ್ವರಿ ದೇವಾಲಯಕ್ಕೆ ತೆರಳುತ್ತಿದ್ದ ಸಮಯದಲ್ಲಿ ಬಾಲಕಿ ಭೂಮಿಕಾಳನ್ನು ಆರೋಪಿ ಕೊಂದಿದ್ದಾನೆ. ಆರೋಪಿ ವಿಜಯ್ ತನಗೆ ಗಂಡು ಮಗು ಇಲ್ಲವೆಂಬ ಕಾರಣಕ್ಕೆ ಅತೃಪ್ತನಾಗಿದ್ದ. ಆದ್ದರಿಂದಲೇ, ಆಗಾಗ್ಗೆ ತನ್ನ ಮಗಳ ಮೇಲೆ ಸಿಡುಕುಗೊಳ್ಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಘಟನೆ ನಡೆದ ರಾತ್ರಿ, ಆರೋಪಿ ವಿಜಯ್ ತನ್ನ ಪತ್ನಿ ಅಂಜನಾಬೆನ್ ಮತ್ತು ಮಗಳು ಭೂಮಿಕಾಳನ್ನು ಬೈಕ್‌ನಲ್ಲಿ ದೇವಸ್ತಾನಕ್ಕೆ ಕರೆದೊಯ್ಯುತ್ತಿದ್ದನು. ನರ್ಮದಾ ಕಾಲುವೆಯ ಮೇಲಿನ ವಾಘಾವತ್ ಸೇತುವೆ ಮೇಲೆ ಆರೋಪಿ ಬೈಕ್‌ ನಲ್ಲಿಸಿದ್ದಾನೆ. ತಕ್ಷಣವೇ, ಮಗಳನ್ನು ಕಾಲುವೆಗೆ ಎಸೆದಿದ್ದಾನೆ. ಘಟನೆ ಬಗ್ಗೆ ಯಾರಿಗೂ ಹೇಳದಂತೆ ಪತ್ನಿಗೆ ಬೆದರಿಕೆ ಹಾಕಿದ್ದಾನೆ” ಎಂದು ಪೊಲೀಸರು ವಿವರಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಮತ್ತೆ ಬಂದ ನಾರಾಯಣ ಮೂರ್ತಿ; 70 ಗಂಟೆ ಆಯ್ತು, ಈಗ 100 ಗಂಟೆ ಕೆಲಸದ ಸರದಿ

ಬಾಲಕಿಯ ಮೃತದೇಹವು ಜುಲೈ 11ರಂದು ಕಾಲುವೆಯಲ್ಲಿ ಪತ್ತೆಯಾಗಿದೆ. ಮೃತದೇಹ ಪತ್ತೆಯಾದಾಗ, ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಲಾಗಿತ್ತು. ಆದರೆ, ಮಗಳನ್ನು ಕಳೆದುಕೊಂಡು ನೊಂದಿದ್ದ ತಾಯಿ ಅಂಜನಾಬೆನ ಅವರು ತನ್ನ ಮಗಳನ್ನು ಪತಿಯೇ ಕೊಂದಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾರೆ.

ಆಕೆ ನೀಡಿದ ದೂರಿನ ಮೇಲೆ ಹೊಸದಾಗಿ ಪ್ರಕರಣ ದಾಖಲಿಸಿಕೊಂಡ ಅತರ್ಸುಬಾ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆಗೆ ಒಳಪಡಿಸಿದ್ದಾರೆ. “ವಿಚಾರಣೆಯ ಸಮಯದಲ್ಲಿ ಸೋಲಂಕಿ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ತನಗೆ ಹೆಣ್ಣು ಮಕ್ಕಳು ಬೇಡ, ಗಂಡು ಮಗು ಬೇಕೆಂದು ಆತ ಹೇಳಿಕೊಂಡಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...