ವಿಕೃತ ಘಟನೆ | ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

Date:

ಬಾಲಕಿಯನ್ನು ಭೇಟಿ ಮಾಡಲು ಮನೆಗೆ ಬಂದಿದ್ದ ದಲಿತ ಯುವಕನನ್ನು ಬಾಲಕಿಯ ಕುಟುಂಬಸ್ಥರು ವಿವಸ್ತ್ರಗೊಳಿಸಿ, ಅಮಾನುಷವಾಗಿ ಹಲ್ಲೆಗೈದು ವಿಕೃತಿ ಮರೆದಿರುವ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ.

ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ಬಡೆ ರಾವೇಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಂತ್ರಸ್ತ 21 ವರ್ಷದ ದಲಿತ ಯುವಕ ರಾಹುಲ್ ಅಂಚಲ್ ಮತ್ತು ಬಡೆ ರಾವೇಲಿ ಗ್ರಾಮದ ಒಬಿಸಿ ಸಮುದಾಯದ 16 ವರ್ಷದ ಬಾಲಕಿ ಪರಸ್ಪರ ಪರಿಚಿತರಾಗಿದ್ದರು. ಬಾಲಕಿಯನ್ನು ಭೇಟಿ ಮಾಡಲು ಬಡೆ ರಾವೇಲಿ ಗ್ರಾಮದಲ್ಲಿದ್ದ ಬಾಲಕಿಯ ಮನೆಗೆ ರಾಹುಲ್ ತೆರಳಿದ್ದರು. ಈ ವೇಳೆ, ಆತನ ಮೇಲೆ ಹಲ್ಲೆ ಎಸಗಿರುವ ಬಾಲಕಿಯ ಕುಟುಂಬಸ್ಥರು, ಆತನನ್ನು ಬೀದಿಗೆ ಎಳೆದು ತಂದು, ವಿವಸ್ತ್ರಗೊಳಿಸಿ ವಿಕೃತಿ ಮರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಾಲಕಿಯ ಕುಟುಂಬವು ಯುವಕನನ್ನು ಹಿಡಿದು ಒಂದು ದಿನ ಒತ್ತೆಯಾಳಾಗಿ ಇಟ್ಟುಕೊಂಡಿತ್ತು. ರಾತ್ರಿಯಿಡೀ ಚಪ್ಪಲಿ, ವೈರ್ ಹಾಗೂ ಪೈಪ್‌ಗಳಿಂದ ಆತನನ್ನು ಥಳಿಸಿದೆ. ಮರುದಿನ ಬೀದಿಗೆ ಎಳೆದುಕೊಂಡು ಬಂದು, ಬೆತ್ತಲೆಗೊಳಿಸಿ ಹಲ್ಲೆ ಮಾಡಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ದಲಿತ ಯುವಕ ರಾಹುಲ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದಾಗ್ಯೂ, ಯುವಕ ಅಥವಾ ಆತನ ಕುಟುಂಬಸ್ಥರು ದೂರು ದಾಖಲಿಸಿಲ್ಲ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವಿಡಿಯೋವನ್ನು ಆಧರಿಸಿ ಪೊಲೀಸರೇ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...