ಕೇಂದ್ರ ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

Date:

ಈ ವಾರದ ನಂತರ ಇಬ್ಬರು ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ಪ್ರಕ್ರಿಯೆಗೆ ಹೊಸ ಸವಾಲುಗಳು ಎದುರಾಗಿದ್ದು,ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ಸಂದರ್ಭ 2023ರ ಆದೇಶವನ್ನು ಉಲ್ಲೇಖಿಸಿ ಪ್ರಸ್ತುತ ನೇಮಕಾತಿಗೆ ತಡೆ ನೀಡುವಂತೆ ಮಧ್ಯ ಪ್ರದೇಶದ ಕಾಂಗ್ರೆಸ್ ನಾಯಕರೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಆಯುಕ್ತ ಅರುಣ್ ಗೋಯಲ್‌ ಇತ್ತೀಚಿಗೆ ನೀಡಿದ ರಾಜೀನಾಮೆ ಹಾಗೂ ಕಳೆದ ತಿಂಗಳು ಅನುಪ್ ಚಂದ್ರ ಪಾಂಡೆ ನಿವೃತ್ತಿ ಒಳಗೊಂಡು ಎರಡು ಚುನಾವಣಾ ಆಯುಕ್ತರ ಹುದ್ದೆ ಖಾಲಿಯಿವೆ. ಮುಖ್ಯ ಆಯುಕ್ತ ರಾಜೀವ್ ಕುಮಾರ್ ಒಳಗೊಂಡ ಮೂವರು ಆಯುಕ್ತರು ಈ ವಾರದ ನಂತರ ಲೋಕಸಭಾ ಚುನಾವಣಾ ಘೋಷಿಸುವ ಸಾಧ್ಯತೆಯಿದೆ.

ಪ್ರಧಾನ ಮಂತ್ರಿಯ ಮೂರು ಸದಸ್ಯರ ಸಮಿತಿಯ ಶಿಫಾರಸ್ಸಿನೊಂದಿಗೆ ರಾಷ್ಟ್ರಪತಿಗಳು ಕೇಂದ್ರ ಚುನಾವಣಾ ಆಯುಕ್ತರನ್ನು ನೇಮಕ ಮಾಡುತ್ತಾರೆ. ಸಮಿತಿಯಲ್ಲಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಸಂಸದ ಅಧೀರ್ ರಂಜನ್‌ ಚೌಧರಿ ಕೂಡ ಇರಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಬಾಂಡ್ ಬಹಿರಂಗಗೊಳಿಸಲು ಎಸ್‌ಬಿಐ ಏಕೆ ಹಿಂಜರಿಯುತ್ತಿದೆ?

ಉನ್ನತ ಮಟ್ಟದ ಸಮಿತಿ ಮಾರ್ಚ್‌ 15ರೊಳಗೆ ನೇಮಕಾತಿಯನ್ನು ಅಂತಿಮಗೊಳಿಸುವ ನಿರೀಕ್ಷೆಯಿದೆ.

ಮಧ್ಯ ಪ್ರದೇಶದ ನಾಯಕಿಯಾದ ಜಯಾ ಠಾಕೂರ್ ಅವರು 2023ರ ಸಾಂವಿಧಾನಿಕ ಪೀಠದ ಆದೇಶವನ್ನು ಉಲ್ಲೇಖಿಸಿದ್ದು, ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ಸಂದರ್ಭ ಸಮಿತಿಯಲ್ಲಿ ಪ್ರಧಾನಿ, ವಿಪಕ್ಷ ನಾಯಕ ಹಾಗೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರು ಇರಬೇಕೆಂದು ತಿಳಿಸಿದ್ದಾರೆ.

ನೂತನ ಕಾನೂನು ಅಸಂವಿಧಾನಿಕ ಎಂದು ಹೇಳಿರುವ ಠಾಕೂರ್ ಅವರು, ಚುನಾವಣಾ ಆಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ 2023ರಲ್ಲಿ ನೀಡಿರುವ ತೀರ್ಪನ್ನು ಪರಿಗಣಿಸುವಂತೆ ಕೋರಿದ್ದಾರೆ. ನೇಮಕಾತಿ ಸಮಿತಿಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ಸೇರಿಸಿಕೊಳ್ಳುವುದು ಪಾರದರ್ಶಕತೆಯ ಪ್ರಕ್ರಿಯೆಯನ್ನು ಖಚಿತಪಡಿಸುತ್ತದೆ ಎಂದು ತಿಳಿಸಿದ್ದಾರೆ.

2023ರ ಆದೇಶದಂತೆ, ಸಂಸತ್ತು ಕಾನೂನನ್ನು ರಚಿಸುವವರೆಗೂ ತೀರ್ಪು ಉತ್ತಮವಾಗಿರುತ್ತದೆ ಎಂದು ಹೇಳಿದರು.

ಕೇಂದ್ರ ಸರ್ಕಾರವು ಕಳೆದ ಡಿಸೆಂಬರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ನೂತನ ಕಾನೂನನ್ನು ಜಾರಿಗೆ ತಂದಿದ್ದು, ನೂತನ ಕಾನೂನಿನ ಅನ್ವಯ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಬದಲಿದೆ ಕೇಂದ್ರ ಸಚಿವರು ಸಮಿತಿಯಲ್ಲಿ ಇರುತ್ತಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...