ಎಫ್‌ಐಆರ್ ವಿರುದ್ಧ ನ್ಯೂಸ್‌ಕ್ಲಿಕ್ ಸಂಸ್ಥಾಪಕರ ಅರ್ಜಿ; ಪೊಲೀಸರ ನಿಲುವು ಕೇಳಿದ ಹೈಕೋರ್ಟ್‌

Date:

ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಅವರ ವಿರುದ್ಧ ಚೀನಾ ಪರ ಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ‘ಯುಎಪಿಎ’ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ದೆಹಲಿ ಪೊಲೀಸರು ದಾಖಲಿಸಿರುವ ಈ ಎಫ್‌ಐಆರ್‌ ವಿರುದ್ಧ ಪ್ರಬೀರ್ ಅವರು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅವರ ಅರ್ಜಿ ಕುರಿತಂತೆ ದೆಹಲಿ ಪೊಲೀಸರ ನಿಲುವನ್ನು ಹೈಕೋರ್ಟ್‌ ಕೇಳಿದೆ.

2023ರ ಅಕ್ಟೋಬರ್‌ನಲ್ಲಿ 3ರಂದು ಪ್ರಬೀರ್ ಮತ್ತು ನ್ಯೂಸ್‌ಕ್ಲಿಕ್‌ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಲಾಗಿತ್ತು. ಅವರಿಬ್ಬರೂ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ, ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಪ್ರಶ್ನಿಸಿ ಪ್ರಬೀರ್ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ದೆಹಲಿ ಪೊಲೀಸರ ಪರ ವಕೀಲರು ನೋಟಿಸ್ ನೀಡುವುದನ್ನು ವಿರೋಧಿಸಿದ್ದಾರೆ. ಅಮಿತ್ ಚಕ್ರವರ್ತಿ ಅವರು ಪ್ರಕರಣವನ್ನು ಅನುಮೋದಿಸಿದ್ದಾರೆ ಎಂದು ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ಪ್ರಬೀರ್ ಮತ್ತು ಅಮಿತ್ ಅವರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನಲ್ಲಿ, “ಭಾರತದ ಸಾರ್ವಭೌಮತ್ವಕ್ಕೆ ಅಡ್ಡಿಪಡಿಸಲು ಮತ್ತು ದೇಶದ ವಿರುದ್ಧ ಅಸಮಾಧಾನ ಸೃಷ್ಠಿಸಲು ವ್ಯಕ್ತಪಡಿಸಲು ನ್ಯೂಸ್‌ಕ್ಲಿಕ್‌ಗೆ ಚೀನಾದಿಂದ ಹೆಚ್ಚಿನ ಹಣ ಬಂದಿದೆ” ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಚುನಾವಣಾ ಪ್ರಕ್ರಿಯೆಗೆ ಅಡ್ಡಿಯುಂಟು ಮಾಡಲು ಪ್ರಬೀರ್ ಅವರು ಪೀಪಲ್ಸ್ ಅಲೈಯನ್ಸ್ ಫಾರ್ ಡೆಮಾಕ್ರಸಿ ಅಂಡ್ ಸೆಕ್ಯುಲರಿಸಂ (ಪಿಎಡಿಎಸ್‌) ಗುಂಪಿನೊಂದಿಗೆ ಪಿತೂರಿ ನಡೆಸಿದ್ದಾರೆ” ಎಂದೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿ ಓದಿದ್ದೀರಾ?: ಭೂಹಗರಣ ಪ್ರಕರಣ | ಫೆ.22ರವರೆಗೆ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ನ್ಯಾಯಾಂಗ ಬಂಧನ

ಪ್ರಬೀರ್ ಅವರು ತಮ್ಮ ಅರ್ಜಿಯಲ್ಲಿ, “ಯುಎಪಿಎ ಅಡಿ ದಾಖಲಾಗಿರುವ ಎಫ್‌ಐಆರ್‌ನಲ್ಲಿರುವ ಆರೋಪಗಳ ಸಂಬಂಧ ಈಗಲಾಗಲೇ ಒಂದು ಎಫ್‌ಐಆರ್‌ ದಾಖಲಾಗಿದೆ. ಎಕನಾಮಿಕ್ ಅಫೆನ್ಸ್ ವಿಂಗ್ (ಇಒಡಬ್ಲ್ಯು) ಆ ಎಫ್‌ಐಆರ್‌ ಆಧಾರದ ಮೇಲೆ ತನಿಖೆ ನಡೆಸುತ್ತಿದೆ. ಅದೇ ಆರೋಪಗಳ ಮೇಲೆ ಇದು ಎರಡನೇ ಎಫ್‌ಐಆರ್‌” ಎಂದು ಹೇಳಿದ್ದಾರೆ. ಈ ಎಫ್‌ಐಅರ್‌ ಅಸಮರ್ಪಕವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

“ಎಫ್‌ಐಆರ್‌ಗಳು ಕಂಪನಿಯು ನಡೆಸಿದ ಸಂಪೂರ್ಣವಾಗಿ ಪತ್ರಿಕೋದ್ಯಮದ ಕೆಲಸದ ಮೇಲೆ ಕೇಂದ್ರೀಕೃತವಾಗಿದೆ. ಪತ್ರಿಕೆಯ ಕಾರ್ಯನಿರ್ವಹಣೆಯು ಅಧಿಕಾರದಲ್ಲಿರುವ ಸರ್ಕಾರದ ಕಾರ್ಯನಿರ್ವಹಣೆಯ ಕುರಿತು ಟೀಕೆಗಳನ್ನು ಒಳಗೊಂಡಿದೆ. ನಿಷ್ಪಕ್ಷಪಾತ ಮತ್ತು ನ್ಯಾಯಯುತ ಪತ್ರಿಕೋದ್ಯಮ ಹಾಗೂ ಸರ್ಕಾರದ ಕುರಿತು ಟೀಕೆಗಳನ್ನು ದೇಶದ ಸಮಗ್ರತೆ ಮತ್ತು ಸಾರ್ವಭೌಮತ್ವದ ವಿರುದ್ಧದ ಪ್ರಶ್ನೆಯೆಂದು ಸಮೀಕರಿಸಲು ಬರುವುದಿಲ್ಲ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...