ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆ ಪ್ರಶ್ನಿಸಿ ಅಲಹಾಬಾದ್‌ ಹೈಕೋರ್ಟ್‌ಗೆ ಅರ್ಜಿ

Date:

  • ಜ್ಞಾನವ್ಯಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ಆದೇಶಿಸಿದ್ದ ವಾರಾಣಸಿ ಜಿಲ್ಲಾ ನ್ಯಾಯಾಲಯ
  • ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದ್ದ ಸುಪ್ರೀಂ ಕೋರ್ಟ್

ವಾರಾಣಸಿ ನಗರದ ಜ್ಞಾನವಾಪಿ ಮಸೀದಿ ಸೇರಿದಂತೆ 22 ಮಸೀದಿಗಳ ಮೇಲ್ವಿಚಾರಣೆ ಹೊಣೆ ಹೊತ್ತಿರುವ ಅಂಜುಮಾನ್ ಇಂತೆಜಾಮಿಯಾ ಮಸೀದಿ ಸಮಿತಿಯು ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಜಿಲ್ಲಾ ನ್ಯಾಯಾಲಯ ನೀಡಿರುವ ಆದೇಶವನ್ನು ಪ್ರಶ್ನಿಸಿ ಮಂಗಳವಾರ (ಜುಲೈ 25) ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ನಡೆಸಲು ಅನುಮತಿ ನೀಡಿ ವಾರಾಣಸಿ ನ್ಯಾಯಾಲಯ ಶುಕ್ರವಾರ (ಜುಲೈ 21) ಮಹತ್ವದ ಆದೇಶ ನೀಡಿತ್ತು. ಇದಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜುಲೈ 24) ತಾತ್ಕಾಲಿಕ ತಡೆ ನೀಡಿತ್ತು. ಬಳಿಕ ಈ ಮೇಲ್ಮನವಿ ಸಲ್ಲಿಸಲಾಗಿದೆ.

ವಾರಾಣಸಿ ನ್ಯಾಯಾಲಯದ ಆದೇಶವನ್ನು ಜುಲೈ 26ರ ಸಂಜೆ 5 ಗಂಟೆಯವರೆಗೆ ಜಾರಿಗೊಳಿಸಬಾರದು, ಇದರಿಂದಾಗಿ ಜ್ಞಾನವಾಪಿ ಮಸೀದಿ ಸಮಿತಿಯು ಹೈಕೋರ್ಟ್ ಗೆ ಮನವಿ ಸಲ್ಲಿಸಲು ಸಮಯಾವಕಾಶ ಸಿಗುತ್ತದೆ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿ ಜೆ ಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ತ್ರಿಸದಸ್ಯ ಪೀಠ ಸೋಮವಾರದ ಆದೇಶದಲ್ಲಿ ಹೇಳಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನ ಮಧ್ಯಂತರ ಆದೇಶವು ಜುಲೈ 26ರಂದು ಮುಕ್ತಾಯಗೊಳ್ಳಲಿದ್ದು, ಅದಕ್ಕೂ ಮೊದಲು ಮಸೀದಿಯ ಅರ್ಜಿಯ ವಿಚಾರಣೆಗೆ ಅವಕಾಶ ನೀಡುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನು ಸುಪ್ರೀಂ ಕೋರ್ಟ್ ಪೀಠ ಕೋರಿತ್ತು.

ಜ್ಞಾನವಾಪಿ ಮಸೀದಿ 16ನೇ ಶತಮಾನದಲ್ಲಿ ನಿರ್ಮಾಣವಾಗಿದ್ದು ಈ ಸ್ಥಳದಲ್ಲಿ ಈ ಮೊದಲು ದೇವಾಲಯವಿತ್ತೇ ಎಂಬುದನ್ನು ಪತ್ತೆ ಮಾಡಲು ಉತ್ಖನನಕ್ಕೆ ವಾರಾಣಸಿ ಜಿಲ್ಲಾ ನ್ಯಾಯಾಲಯ ಅವಕಾಶ ನೀಡಿದ್ದರೂ ಸಹ ಕನಿಷ್ಠ ವಾರದ ಮಟ್ಟಿಗೆ ಉತ್ಖನನ ನಡೆಸದಿರಲು ನಿರ್ಧರಿಸಿರುವುದಾಗಿ ವಿಚಾರಣೆಯ ಸಂದರ್ಭದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಪರವಾಗಿ ನೀಡಲಾದ ಹೇಳಿಕೆಯನ್ನು ತ್ರಿಸದಸ್ಯ ಪೀಠ ಪರಿಗಣನೆಗೆ ತೆಗೆದುಕೊಂಡಿತ್ತು.

ಈ ಸುದ್ದಿ ಓದಿದ್ದೀರಾ? ವಾಟ್ಸಾಪ್ ಸ್ಟೇಟಸ್ ಹಾಕುವಾಗ ಎಚ್ಚರವಿರಲಿ: ಬಾಂಬೆ ಹೈಕೋರ್ಟ್ ಸಲಹೆ

ವಾರಾಣಸಿ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಲು ಮಸೀದಿ ಸಮಿತಿ ಮನವಿ ಸಲ್ಲಿಸಿದ ಸಂದರ್ಭ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಎಎಸ್ಐ ನಿಲುವನ್ನು ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದರು.

ಜ್ಞಾನವಾಪಿ ಮಸೀದಿ ಕಾಶಿ ವಿಶ್ವನಾಥ ದೇವಾಲಯ ಪಕ್ಕದಲ್ಲಿದೆ. ಅದಕ್ಕಾಗಿ ಇದನ್ನು ಎಎಸ್ಐಯಿಂದ ಸಮೀಕ್ಷೆ ನಡೆಸುವಂತೆ ಕೋರಿ ಜುಲೈ 21ರಂದು ನಾಲ್ವರು ಹಿಂದೂ ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ವಾರಾಣಸಿ ಜಿಲ್ಲಾ ನ್ಯಾಯಾಲಯ ಪುರಸ್ಕರಿಸಿ ವೈಜ್ಞಾನಿಕ ಸಮೀಕ್ಷೆಗೆ ಆದೇಶಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...