ಅಯೋಧ್ಯೆ ತೀರ್ಪನ್ನು ‘ಅನೂರ್ಜಿತ’ವೆಂದು ಘೋಷಿಸಲು ಸಲ್ಲಿಸಿದ್ದ ಅರ್ಜಿ ವಜಾ: ದೆಹಲಿ ಹೈಕೋರ್ಟ್‌

Date:

ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪುನ್ನು ‘ಅನೂರ್ಜಿತ’ವೆಂದು ಘೋಷಿಸಬೇಕು. ಹೊಸದಾಗಿ ತೀರ್ಪು ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾಗೊಳಿಸಿದೆ. ಈ ಹಿಂದೆ, ಇದೇ ಅರ್ಜಿಯನ್ನು ತಿರಸ್ಕರಿಸಿ ಸಿವಿಲ್ ನ್ಯಾಯಾಲಯ ನೀಡಿದ್ದ ತೀರ್ಪನ್ನು ಎತ್ತಿಹಿಡಿದಿದೆ.

ಈ ವರ್ಷದ ಆರಂಭದಲ್ಲಿ ಪುಣೆಯಲ್ಲಿ ನಡೆಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಸಿಜೆಐ (ಬಾಬ್ರಿ ಮಸೀದಿ ತೀರ್ಪು ನೀಡಿದ ಪೀಠದ ಭಾಗವೂ ಆಗಿದ್ದರು) ಡಿ.ವೈ ಚಂದ್ರಚೂಡ್‌ ಅವರು, “ತಾವು ತೀರ್ಪು ಬರೆಯುವುದಕ್ಕೂ ಮುನ್ನ ಭಗವಾನ್ ಶ್ರೀರಾಮ್ ವಿರಾಜಮಾನ್ ಎದುರು ಕುಳಿತು ಪ್ರಾರ್ಥಿಸಿದೆ. ದೇವರು ತೋರಿಸಿದ ಪರಿಹಾರ ಮಾರ್ಗ ಮತ್ತು ಮಾರ್ಗದರ್ಶನದಿಂದ ತೀರ್ಪು ಬರೆದೆ” ಎಂದು ಹೇಳಿಕೊಂಡಿದ್ದರು.

ಅವರ ಈ ಹೇಳಿಕೆಯು ಬಾಬ್ರಿ ಮಸೀದಿ ತೀರ್ಪಿನಲ್ಲಿ ಧಾರ್ಮಿಕ ಪ್ರಭಾವ ಬೀರಿದೆ ಎಂಬುದನ್ನು ಸಾಬೀತು ಮಾಡಿದೆ ಎಂಬ ಚರ್ಚೆಗಳು ಭುಗಿಲೆದ್ದಿದ್ದವು. ಅವರ ಹೇಳಿಕೆಯನ್ನು ಆಧಾರಿಸಿ, 2019ರ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪನ್ನು ಅನೂರ್ಜಿತಗೊಳಿಸಬೇಕೆಂದು 2025ರ ಏಪ್ರಿಲ್‌ನಲ್ಲಿ ವಕೀಲ ಮೆಹಮೂದ್ ಪ್ರಾಚಾ ಅವರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಧರ್ಮೇಂದರ್ ರಾಣಾ, ಕಾನೂನಿನಲ್ಲಿ ಅಥವಾ ಯಾವುದೇ ಧರ್ಮದಲ್ಲಿ ಅನ್ಯಾಯದ ಲಾಭವನ್ನು ಪಡೆಯಲು ಸರ್ವಶಕ್ತನಿಂದ ಮಾರ್ಗದರ್ಶನ ಪಡೆದಿದ್ದಾಗಿ ಭಾವಿಸಿದರೆ, ಅದನ್ನು ವಂಚನೆಯ ಕೃತ್ಯವೆಂದು ಹೇಳಲಾಗುವುದಿಲ್ಲ” ಎಂದು ಹೇಳಿದ್ದರು. ಅರ್ಜಿಯನ್ನು ವಜಾಗೊಳಿಸಿತ್ತು. ಮಾತ್ರವಲ್ಲದೆ, 1 ಲಕ್ಷ ರೂ. ದಂಡ ವಿಧಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿವಿಲ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪ್ರಾಚಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ಆಲಿಸಿದ ನ್ಯಾಯಾಲಯವು, ಸಿವಿಲ್‌ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರ ತೀರ್ಪನ್ನು ಎತ್ತಿ ಹಿಡಿದೆ. “ಕ್ಷುಲ್ಲಕ ಮತ್ತು ಐಷಾರಾಮಿ ಮೊಕದ್ದಮೆಗಳ ಬೆದರಿಕೆಯನ್ನು ಪರಿಣಾಮಕಾರಿಯಾಗಿ ಪರಿಶೀಲಿಸಬೇಕು” ಎಂದು ಹೇಳಿರುವ ಹೈಕೋರ್ಟ್‌, ಅರ್ಜಿದಾರ ವಕೀಲರಿಗೆ ವಿಧಿಸಲಾಗಿದ್ದ ದಂಡವನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...