ಪಿಎಫ್ ಹಣ ಹಿಂಪಡೆಯುವಿಕೆ ಅವಧಿ 12 ತಿಂಗಳಿಗೆ, ಪಿಂಚಣಿ 36 ತಿಂಗಳಿಗೆ ವಿಸ್ತರಿಸಿದ ಕೇಂದ್ರ: ಕಾರ್ಮಿಕ ಸಂಘಟನೆಗಳ ವಿರೋಧ

Date:

ನೌಕರರ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಒ) ಭವಿಷ್ಯ ನಿಧಿ ಮತ್ತು ಪಿಂಚಣಿ ಖಾತೆಗಳಿಂದ ಹಣವನ್ನು ಹಿಂಪಡೆಯುವುದನ್ನು ಇನ್ನಷ್ಟು ಕಠಿಣಗೊಳಿಸಿದೆ. ಪಿಎಫ್ ಹಣ ಹಿಂಪಡೆಯುವಿಕೆ ಅವಧಿ 12 ತಿಂಗಳಿಗೆ, ಪಿಂಚಣಿ 36 ತಿಂಗಳಿಗೆ ಕೇಂದ್ರ ಸರ್ಕಾರವು ವಿಸ್ತರಿಸಿದೆ. ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ಹಿಂದೆ ನಿರುದ್ಯೋಗದ ಎರಡು ತಿಂಗಳುಗಳ ಬಳಿಕ ಪಿಎಫ್‌ನ ಎರಡೂ ಖಾತೆಗಳಿಂದ ಹಣವನ್ನು ಹಿಂಪಡೆಯಬಹುದಿತ್ತು. ಆದರೆ ಇದೀಗ 12 ತಿಂಗಳು ಅಂದರೆ ಒಂದು ವರ್ಷಕ್ಕೆ ಏರಿಸಲಾಗಿದೆ. “ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಖಚಿತಪಡಿಸುವುದು ಈ ಕ್ರಮದ ಗುರಿಯಾಗಿದೆ” ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ. ಆದರೆ ಉದ್ಯೋಗವಿಲ್ಲದ ಆರ್ಥಿಕ ಸಂಕಷ್ಟದ ಅವಧಿಯಲ್ಲಿ ತಮ್ಮ ಹಣವನ್ನೂ ಪಡೆಯಲು ಸಾಧ್ಯವಾಗದಂತಹ ಸ್ಥಿತಿಗೆ ಸರ್ಕಾರ ಕಾರ್ಮಿಕರನ್ನು ದೂಡುತ್ತಿದೆ ಎಂದು ಕಾರ್ಮಿಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನು ಓದಿದ್ದೀರಾ? ಜನ್ಮ ದಿನಾಂಕಕ್ಕೆ ಆಧಾರ್‌ ಕಾರ್ಡ್‌ ಪುರಾವೆಯಲ್ಲ: ಇಪಿಎಫ್‌ಒ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಷ್ಕರಣೆಯಲ್ಲಿ ಭಾಗಶಃ ಹಣವನ್ನು ಹಿಂಪಡೆಯಲು ಅವಕಾಶವಿದೆ. ಇದರಿಂದಾಗಿ ಸದಸ್ಯರು ನಿವೃತ್ತಿ ಉಳಿತಾಯ ಅಥವಾ ಪಿಂಚಣಿ ಅರ್ಹತೆಗಳ ಮೇಲೆ ಪರಿಣಾಮ ಬೀರದಂತೆ ತಕ್ಷಣದ ಹಣಕಾಸಿನ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದು ಸಚಿವಾಲಯವು ಹೇಳಿದೆ.

ಇದರ ಜೊತೆಗೆ ಸದಸ್ಯರ ಖಾತೆಗಳಲ್ಲಿ ಕನಿಷ್ಠ ಶೇಕಡ 25ರಷ್ಟು ಮೊತ್ತವನ್ನು ಕಾಯ್ದುಕೊಳ್ಳಲೇಬೇಕು ಎಂಬ ನಿಬಂಧನೆಯನ್ನೂ ಪರಿಚಯಿಸಲಾಗಿದೆ. “ಇದರಿಂದಾಗಿ ಸದಸ್ಯರು ಪ್ರಸ್ತುತ ಇಪಿಎಫ್‌ಒ ನೀಡುವ ಹೆಚ್ಚಿನ ಬಡ್ಡಿದರವಾದ ಶೇಕಡ 8.25 ಅನ್ನು ಪಡೆಯಲು ಸಾಧ್ಯವಾಗುತ್ತದೆ. ಜೊತೆಗೆ ಹೆಚ್ಚಿನ ನಿವೃತ್ತಿ ನಿಧಿಯನ್ನೂ ಪಡೆಯಬಹುದು” ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ಕೇಂದ್ರದ ನಿರ್ಧಾರಕ್ಕೆ ಕಾರ್ಮಿಕ ಸಂಘಟನೆಗಳ ವಿರೋಧ

ನಿಯಮ ಬದಲಾವಣೆಯನ್ನು ಕಾರ್ಮಿಕ ಸಂಘಟನೆಗಳು, ಕಾರ್ಮಿಕ ತಜ್ಞರು ಮತ್ತು ವಿರೋಧ ಪಕ್ಷಗಳು ಟೀಕಿಸಿದೆ. ಹೊಸ ನಿಯಮಗಳು ಆರ್ಥಿಕ ಸಂಕಷ್ಟದ ಅವಧಿಯಲ್ಲಿ ತಮ್ಮ ಹಣವನ್ನೂ ಕಾರ್ಮಿಕರು ಪಡೆಯಲು ಸಾಧ್ಯವಾಗದಂತೆ ಮಾಡುತ್ತದೆ ಎಂದು ಕಾರ್ಮಿಕ ಸಂಘಟನೆಗಳು ಹೇಳಿದೆ.

ನಿರುದ್ಯೋಗದ ವೇಳೆ ಪಿಎಫ್ ಹಣವೇ ಆರ್ಥಿಕ ಸಹಾಯವನ್ನು ಮಾಡುತ್ತದೆ. ಆದರೆ ಇದನ್ನು ಹಿಂಪಡೆಯುವ ಅವಧಿಯನ್ನು ವಿಸ್ತರಿಸುವುದು ಉದ್ಯೋಗ ಕಳೆದುಕೊಂಡಿರುವವರನ್ನು ಸಂಕಷ್ಟಕ್ಕೆ ದೂಡುತ್ತದೆ. ಆದರೆ ಶೇಕಡ 75ರಷ್ಟು ಹಣವನ್ನು ಒಂದು ತಿಂಗಳ ಬಳಿಕವೂ ಪಡೆಯಬಹುದು ಎಂದು ಸರ್ಕಾರ ಹೇಳಿಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...