ಶಿವನ ದೇವಾಲಯದಲ್ಲಿ ಮಾಂಸದ ತುಂಡು ಪತ್ತೆಗೆ ಕೋಮು ಬಣ್ಣ; ಆದರೆ, ನಿಜವಾದ ಅಪರಾಧಿ ಬೆಕ್ಕು

Date:

ಹೈದರಾಬಾದ್‌ನ ತಪ್ಪಚಬುತ್ರದ ಹನುಮಾನ್ ದೇವಸ್ಥಾನದ ಆವರಣದಲ್ಲಿದ್ದ ಶಿವ ದೇವಾಲಯದಲ್ಲಿ ಬುಧವಾರ ಮಾಂಸದ ತುಂಡು ಪತ್ತೆಯಾಗಿತ್ತು. ಬಳಿಕ, ಪ್ರಕರಣಕ್ಕೆ ಕೋಮು ಬಣ್ಣ ಬಳಿದು, ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಆದರೆ, ದೇವಾಲಯದಲ್ಲಿ ಮಾಂಸದ ತುಂಡು ಹಾಕಿದ್ದು ಮನುಷ್ಯರೇ ಅಲ್ಲ. ಅಲ್ಲಿಗೆ ಮಾಂಸದ ತುಂಡು ತಂದಿದ್ದು ಬೆಕ್ಕು ಎಂದು ತನಿಖೆಯಲ್ಲಿ ಗೊತ್ತಾಗಿದೆ.

ದೇವಾಲಯದಲ್ಲಿ ಉದ್ದೇಶಪೂರ್ವಕವಾಗಿ ಮಾಂಸದ ತುಂಡು ಹಾಕಲಾಗಿದೆ ಎಂದು ಆರೋಪಿಲಾಗಿತ್ತು. ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಆರೋಪ ಮಾಡಿ, ಕೋಮುವಾದಿ ಬಣ್ಣ ಮಳಿದು, ಉದ್ವಿಗ್ನ ಪರಿಸ್ಥಿತಿ ಸೃಷ್ಟಿಮಾಡಲಾಗಿತ್ತು. ಹಿಂದುತ್ವವಾದಿಗಳು ಪ್ರತಿಭಟನೆಗಳನ್ನೂ ನಡೆಸಿದ್ದರು.

ಪ್ರಕರಣ ಸಂಬಂಧ ತಪ್ಪಚಬುತ್ರ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದರಿಂದ, ತ್ವರಿತವಾಗಿ ಪೊಲೀಸರು ತನಿಖೆ ನಡೆಸಿದ್ದಾರೆ. ತಪ್ಪಚಬುತ್ರ ಪೊಲೀಸ್ ಠಾಣಾಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಸುಮಾರು 250 ಗ್ರಾಂ ತೂಕದ ಮಾಂಸದ ತುಂಡನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ತನಿಖೆಗಾಗಿ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದರು. ಪೊಲೀಸರ ತಾಂತ್ರಿಕ ಘಟಕವು ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದೆ. ಈ ವೇಳೆ, ಬೆಕ್ಕು ಮಾಂಸದ ತುಂಡನ್ನು ತನ್ನ ಬಾಯಿಯಲ್ಲಿ ಕಚ್ಚಿಕೊಂಡು ದೇವಾಲಯದ ಆವರಣ ಪ್ರವೇಶಿಸಿರುವುದು ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ.

ದೃಶ್ಯಾವಳಿಗಳನ್ನು ಕೂಲಂಕುಶವಾಗಿ ಪರಿಶೀಲಿಸಿದ ಪೊಲೀಸರು, “ಶಿವನ ದೇವಾಲಯದಲ್ಲಿ ಮಾಂಸದ ತುಂಡನ್ನು ಬೆಕ್ಕು ಬಿಟ್ಟುಹೋಗಿದೆ. ದೇವಾಲಯದ ಬಳಿಯಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಬೆಕ್ಕು ಬಾಯಿಯಲ್ಲಿ ಮಾಂಸವನ್ನು ಕಚ್ಚಿಕೊಂಡು ಬರುವುದು ಸ್ಪಷ್ಟವಾಗಿ ದಾಖಲಾಗಿದೆ. ಹೀಗಾಗಿ, ಯಾವುದೇ ವದಂತಿಗಳು ಅಥವಾ ತಪ್ಪು ಮಾಹಿತಿಗಳನ್ನು ಹರಡಬಾರದು” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...