ಸಮರ್ಪಕ ಮಾಹಿತಿ ನೀಡದೆಯೇ ಎಥೆನಾಲ್‌ ಮಿಶ್ರಿತ ಪೆಟ್ರೋಲ್‌ ಮಾರಾಟ: ಗ್ರಾಹಕ ಹಕ್ಕು ಉಲ್ಲಂಘನೆ

Date:

ಪೆಟ್ರೋಲ್‌ನಲ್ಲಿ ಶೇ.20ರಷ್ಟು ಎಥೆನಾಲ್ ಬೆರೆಸಿ ಮಾರಾಟ ಮಾಡಬೇಕೆಂಬ ಕೇಂದ್ರ ಸರ್ಕಾರದ ಎಥೆನಾಲ್‌ ಮಿಶ್ರಣ ಯೋಜನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅಕ್ಷಯ್‌ ಮಲ್ಹೋತ್ರಾ ಎಂಬ ವಕೀಲ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

“ಎಥೆನಾಲ್‌ ಮಿಶ್ರಣ ಹೊಂದಿರುವ ಪೆಟ್ರೋಲ್‌ ಹೊಂದಿಕೆಯಾಗದ ವಾಹನಗಳ ಮಾಲೀಕರ ಮೂಲಭೂತ ಹಕ್ಕುಗಳನ್ನು ಈ ಯೋಜನೆಯು ಉಲ್ಲಂಘಿಸುತ್ತದೆ. ಈ ಯೋಜನೆಯು ಗ್ರಾಹಕರಿಗೆ ಎಥೆನಾಲ್‌ ಮುಕ್ತ ಪೆಟ್ರೋಲ್‌ನ ಆಯ್ಕೆಯನ್ನು ನೀಡಿಲ್ಲ ಮತ್ತು ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸದೆಯೇ ಯೋಜನೆ ಜಾರಿಗೊಳಿಸಿರುವುದು ಗ್ರಾಹಕ ಸಂರಕ್ಷಣಾ ಕಾಯ್ದೆ 20191ರ ಪ್ರಕಾರ ಗ್ರಾಹಕರ ಹಕ್ಕು ಉಲ್ಲಂಘಿಸಿದಂತೆ ಆಗುತ್ತದೆ” ಎಂದು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಅಕ್ಕಿ ಕೊಡಲು ನಿರಾಕರಿಸಿದ ಬಗ್ಗೆ ‘ಮನ್‌ ಕಿ ಬಾತ್‌’ನಲ್ಲಿ ಮಾತಾಡುವಿರಾ; ದಿನೇಶ್‌ ಗುಂಡೂರಾವ್ ಪ್ರಶ್ನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಥೆನಾಲ್‌ ಮಿಶ್ರಣ ಪೆಟ್ರೋಲ್‌ ವಾಹನಗಳ ಮೇಲೆ ಪರಿಣಾಮ ಬೀರುತ್ತದೆ. ವಾಹನ ಘಟಕಗಳ ಸವೆತಕ್ಕೂ ಇದು ಕಾರಣವಾಗಬಹುದು. ಇದರಿಂದಾಗಿ ಗ್ರಾಹಕರಿಗೆ ವಾಹನ ನಿರ್ವಹಣಾ ವೆಚ್ಚ ಹೆಚ್ಚಾಗುತ್ತದೆ ಮತ್ತು ಸುರಕ್ಷತಾ ಕಾಳಜಿಯೂ ಉಂಟಾಗುತ್ತದೆ. ಈ ಯೋಜನೆಗೆ ತಕ್ಕಂತೆ ವಾಹನಗಳನ್ನು ವಿನ್ಯಾಸಗೊಳಿಸಲು ತಯಾರಕರಿಗೆ ಸಾಕಷ್ಟು ಕಾಲಾವಕಾಶ ನೀಡದೆ ಇರುವುದು ಅಸಮಂಜಸ ಪ್ರಕ್ರಿಯೆ ಎಂದು ಅರ್ಜಿದಾರ ತಮ್ಮ ವಾದ ಮಂಡಿಸಿದ್ದಾರೆ.

ಪೆಟ್ರೋಲ್‌ ಬಳಸುತ್ತಿರುವ ಗ್ರಾಹಕರಲ್ಲಿ ಬಹುತೇಕರಿಗೆ ತಾವು ಬಳಸುತ್ತಿರುವುದು ಎಥೆನಾಲ್‌ ಮಿಶ್ರಿತ ಪೆಟ್ರೋಲ್‌ ಎಂಬುದು ತಿಳಿದಿಲ್ಲ. ಈ ಬಗ್ಗೆ ಯಾವುದೇ ವಾಸ್ತವವನ್ನು ತೆರೆದಿಡದ ಕಾರಣ ಗ್ರಾಹಕರ ಆಯ್ಕೆಯ ಮೂಲ ಅಂಶಕ್ಕೆ ಧಕ್ಕೆ ಉಂಟಾಗುತ್ತದೆ ಎದು ಕಳವಳ ವ್ಯಕ್ತಪಡಿಸಿದ್ದಾರೆ.

ಗ್ರಾಹಕರಿಗೆ ಎಥೆನಾಲ್‌ ಮಿಶ್ರಿತ ಪೆಟ್ರೋಲ್‌ ನೀಡುತ್ತಿದ್ದರೂ ಪೆಟ್ರೋಲ್‌ ಬೆಲೆ ಕಡಿಮೆಯಾಗಿಲ್ಲ. ಈ ಮೂಲಕ ಕಂಪನಿಗಳು ಗಳಿಸುವ ಲಾಭವನ್ನು ಗ್ರಾಹಕರಿಕೆ ಹಂಚಿಕೆ ಮಾಡುವಲ್ಲಿ ಪೆಟ್ರೋಲಿಯಂ ಕಂಪನಿಗಳು ವಿಫಲವಾಗಿವೆ. ಆದ್ದರಿಂದ ಗ್ರಾಹಕರು ಮೊದಲಿನ ಬೆಲೆಯನ್ನೇ ತೆರಬೇಕಾಗಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

ಯುಎಸ್‌ ಮತ್ತು ಯುರೋಪಿಯನ್‌ ಒಕ್ಕೂಟದಲ್ಲಿ ಎಥೆನಾಲ್‌ ರಹಿತ ಪೆಟ್ರೋಲ್‌ ನೀಡಲಾಗುತ್ತಿದೆ. ಜೊತೆಗೆ ಎಥೆನಾಲ್‌ ಮಿಶ್ರಿತ ಪೆಟ್ರೋಲನ್ನು ಗ್ರಾಹಕರ ಆಯ್ಕೆಗೆ ನೀಡಲಾಗುತ್ತಿದೆ. ಆದರೆ ಭಾರತದಲ್ಲಿನ ಎಥೆನಾಲ್ ಮಿತಶ್ರಿತ ಪೆಟ್ರೋಲ್‌ ಯೋಜನೆಯು ಇದಕ್ಕೆ ತದ್ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಎಲ್ಲಾ ಇಂಧನ ಕೇಂದ್ರಗಳಲ್ಲೂ ಗ್ರಾಹಕರಿಗೆ ಎಥೆನಾಲ್‌ ಮುಕ್ತ ಪೆಟ್ರೋಲ್‌ನ ಆಯ್ಕೆಯನ್ನು ನೀಡಬೇಕು. ಗ್ರಾಹಕ ಕೇಂದ್ರಿತವಾಗಿ ಯೋಜನೆಯನ್ನು ರೂಪಿಸಬೇಕು. ಎಥೆನಾಲ್‌ ಯುಕ್ತ ಪೆಟ್ರೋಲ್‌ ವಾಹನಗಳ ಸವೆತಕ್ಕೆ ಕಾರಣವಾಗುವ ಮತ್ತು ಅದರ ಪ್ರಭಾವದ ಕುರಿತು ರಾಷ್ಟ್ರವ್ಯಾಪಿ ಅಧ್ಯಯನ ನಡೆಸಬೇಕು ಎಂದು ಅಕ್ಷಯ್‌ ಮಲ್ಹೋತ್ರಾ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...