ಕೇಂದ್ರವು ಮುಸ್ಲಿಮರನ್ನು ದ್ವಿತೀಯ ದರ್ಜೆ ನಾಗರಿಕರಂತೆ ನಡೆಸಿಕೊಳ್ಳುತ್ತಿದೆ: ಕೇರಳ ಸಿಎಂ

Date:

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಕೇಂದ್ರ ಸರಕಾರದ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದರು. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಕಾನೂನುಗಳು ಮತ್ತು ನೀತಿಗಳು ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತಿದೆ ಮತ್ತು ಅವರನ್ನು ಮುಖ್ಯವಾಹಿನಿಯಿಂದ ಬೇರ್ಪಡಿಸುತ್ತಿವೆ ಎಂದು ಆರೋಪಿಸಿದ್ದಾರೆ.

ತಿರುವನಂತಪುರದಲ್ಲಿ ಕೇರಳ ಮುಸ್ಲಿಂ ಜಮಾಅತ್ ಆಯೋಜಿಸಿದ್ದ ‘ಕೇರಳ ಯಾತ್ರೆ’ಯ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಪಿಣರಾಯಿ ವಿಜಯನ್, ದೇಶಾದ್ಯಂತ ಮುಸ್ಲಿಮರು, ಕ್ರೈಸ್ತರಂತಹ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಮತ್ತು ಅವರ ಪೂಜಾ ಸ್ಥಳಗಳ ಮೇಲೆ ದಾಳಿ ನಡೆಯುತ್ತಿರುವುದರಿಂದ ದೇಶದಲ್ಲಿ ಜಾತ್ಯತೀತತೆ, ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳು ಅಪಾಯದಲ್ಲಿವೆ. ನಾವು ಜಾತ್ಯತೀತತೆಯನ್ನು ಬಲಪಡಿಸುವ ಮೂಲಕ ಕೋಮುವಾದದ ವಿರುದ್ಧ ಹೋರಾಡಬೇಕಾಗಿದೆ. ಕೋಮುವಾದದ ಬಗ್ಗೆ ಯಾವುದೇ ರೀತಿಯ ಮೃದು ನಿಲುವು ಅಥವಾ ಸೌಮ್ಯ ತಂತ್ರ ಅಳವಡಿಸಿಕೊಳ್ಳುವುದು ಅಪಾಯಕಾರಿ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳೆಯರ ಮೇಲಿನ ʼಪುರುಷಹಂಕಾರʼದ ದೌರ್ಜನ್ಯಕ್ಕೆ ಕೊನೆ ಎಂದು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇರಳವು ಹಿಂದೆ ರಾಜ್ಯದಲ್ಲಿ ಹಲವಾರು ಕ್ರೂರ ಕೋಮು ಸಂಘರ್ಷಗಳು ಮತ್ತು ಗಲಭೆಗಳನ್ನು ಕಂಡಿದೆ. ಕೋಮುವಾದದ ವಿರುದ್ಧ ಎಲ್‌ಡಿಎಫ್‌ ತೆಗೆದುಕೊಂಡ ಕಠಿಣ ನಿಲುವಿನಿಂದ ಎಲ್ಲವೂ ಕೊನೆಗೊಂಡಿದೆ ಎಂದು ಪಿಣರಾಯ್ ವಿಜಯನ್ ಹೇಳಿದರು.

ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ನೇತೃತ್ವದ ‘ಕೇರಳ ಯಾತ್ರೆ’ಯನ್ನು ಶ್ಲಾಘಿಸಿದ ಸಿಎಂ ಪಿಣರಾಯ್ ವಿಜಯನ್, ಧರ್ಮ, ಜನಾಂಗ, ಜಾತಿ ಅಥವಾ ಭಾಷೆಯ ಆಧಾರದ ಮೇಲೆ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಶಕ್ತಿಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...