ವಿಮಾನ ದುರಂತ | ಭವಿಷ್ಯದಲ್ಲಿ ಸಂಭವಿಸುವ ಅನಾಹುತ ತಡೆಗೆ ಉನ್ನತ ಮಟ್ಟದ ಸಮಿತಿ ರಚನೆ

Date:

ಅಹಮದಾಬಾದ್​ ಏರ್​ ಇಂಡಿಯಾ ವಿಮಾನ ಅಪಘಾತಕ್ಕೆ ಕಾರಣ ಪರಿಶೀಲನೆಗಾಗಿ ಮತ್ತು ಭವಿಷ್ಯದಲ್ಲಿ ಇಂತಹ ಅನಾಹುತವನ್ನು ತಡೆಗೆ ಮಾರ್ಗಸೂಚಿ ರೂಪಿಸಲು ಕೇಂದ್ರ ಗೃಹ ಕಾರ್ಯದರ್ಶಿ ನೇತೃತ್ವದ ಉನ್ನತ ಮಟ್ಟದ ಬಹು ಶಿಸ್ತಿನ ಸಮಿತಿ ರಚಿಸಲಾಗಿದೆ.

ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ ಈ ಕುರಿತು ಮಾಹಿತಿ ನೀಡಿದ್ದು, “ಭವಿಷ್ಯದಲ್ಲಿ ಇಂತಹ ಅಪಘಾತಗಳನ್ನು ತಡೆಗಟ್ಟಲು ಮತ್ತು ಅವು ಸಂಭವಿಸಿದ ಸಂದರ್ಭಗಳಲ್ಲಿ ಅವುಗಳನ್ನು ನಿರ್ವಹಿಸುವ ವಿಧಾನಕ್ಕಾಗಿ ತಂಡವು ಕೆಲವು ಶಿಷ್ಟಾಚಾರಗಳನ್ನು ರೂಪಿಸುತ್ತದೆ. ಈ ಕಾರ್ಯವನ್ನು ಪೂರ್ಣಗೊಳಿಸಲು ಸಚಿವಾಲಯ ಮೂರು ತಿಂಗಳ ಗಡುವು ನೀಡಿದೆ” ಎಂದು ತಿಳಿಸಿದೆ.

ಆದೇಶದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಲ್ಲಿ ಜಂಟಿ ಕಾರ್ಯದರ್ಶಿ ಮಟ್ಟದ ಪ್ರತಿನಿಧಿಗಳನ್ನು ಸಮಿತಿಯು ಒಳಗೊಂಡಿರುತ್ತದೆ. ಸಂಬಂಧಿತ ಸಂಸ್ಥೆಗಳು ನಡೆಸುವ ಇತರ ವಿಚಾರಣೆಗಳಿಗೆ ಈ ಸಮಿತಿಯು ಪರ್ಯಾಯವಾಗಿರುವುದಿಲ್ಲ. ಆದರೆ, ಭವಿಷ್ಯದಲ್ಲಿ ಅಂತಹ ಘಟನೆಗಳನ್ನು ತಡೆಗಟ್ಟಲು ಮತ್ತು ನಿರ್ವಹಿಸಲು ಶಿಷ್ಠಾಚಾರಗಳನ್ನು ರೂಪಿಸುವತ್ತ ಗಮನಹರಿಸುತ್ತದೆ ಎಂದು ಸಚಿವಾಲಯ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವಘಡದ ಬಗ್ಗೆ ಈಗಾಗಲೇ ವಿಮಾನ ಅಪಘಾತ ತನಿಖಾ ಬ್ಯೂರೋ ತನಿಖೆ ನಡೆಸುತ್ತಿದೆ. ಉನ್ನತ ಮಟ್ಟದ ಬಹು ಶಿಸ್ತಿನ ಸಮಿತಿಯು ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ ಮೋಹನ್ ಅಧ್ಯಕ್ಷತೆಯಲ್ಲಿ ಕಾರ್ಯ ನಿರ್ವಹಿಸಲಿದೆ. ನಾಗರಿಕ ವಿಮಾನಯಾನ ಕಾರ್ಯದರ್ಶಿ ಮತ್ತು ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗಳು ಸದಸ್ಯರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಪೋಕ್ಸೊ’ ಶಿಕ್ಷೆಯಿಂದ ನುಣುಚಿಕೊಳ್ಳುವ ದಾಳವಾಗದಿರಲಿ ‘ಮದುವೆ’

ಗುಜರಾತ್ ಗೃಹ ಇಲಾಖೆ, ಗುಜರಾತ್ ವಿಪತ್ತು ಪ್ರತಿಕ್ರಿಯೆ ಪ್ರಾಧಿಕಾರ, ಅಹಮದಾಬಾದ್ ಪೊಲೀಸ್ ಆಯುಕ್ತರು, ಭಾರತೀಯ ವಾಯುಪಡೆಯ ತಪಾಸಣೆ ಮತ್ತು ಸುರಕ್ಷತೆಯ ಮಹಾನಿರ್ದೇಶಕರು, ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ ಮಹಾನಿರ್ದೇಶಕರು ಸಮಿತಿಯ ಭಾಗವಾಗಿದ್ದಾರೆ. ಅಲ್ಲದೆ, ಗುಪ್ತಚರ ಬ್ಯೂರೋದ ವಿಶೇಷ ನಿರ್ದೇಶಕರು ಮತ್ತು ವಿಧಿವಿಜ್ಞಾನ ವಿಜ್ಞಾನ ಸೇವೆಗಳ ನಿರ್ದೇಶನಾಲಯದ ನಿರ್ದೇಶಕರು ಸಮಿತಿಯಲ್ಲಿ ಇರಲಿದ್ದಾರೆ.

ಜೂನ್​ 12ರಂದು ಅಹಮದಾಬಾದ್​ನಿಂದ ಲಂಡನ್​ಗೆ ತೆರಳುತ್ತಿದ್ದ ಬೋಯಿಂಗ್ 787-8 ವಿಮಾನವು ಟೇಕ್​ಆಫ್​ ಆದ ಕೆಲವೇ ಕ್ಷಣದಲ್ಲಿ ಅಪಘಾತಕ್ಕೀಡಾಗಿ ಅದರಲ್ಲಿದ್ದ 241 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, ವಿಮಾನವು ವೈದ್ಯಕೀಯ ಕಾಲೇಜು ಹಾಸ್ಟೆಲ್​ ಕಟ್ಟಡಕ್ಕೆ ಅಪ್ಪಳಿಸಿದ ಪರಿಣಾಮ ಒಟ್ಟಾರೆ 265ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...