ನಾಟಕವನ್ನು ಬಹಳ ಹಿಂದೆಯೇ ರಚಿಸಲಾಗಿತ್ತು: ಶಿವಸೇನಾ ತೀರ್ಪಿನ ಬಗ್ಗೆ ಕಪಿಲ್ ಸಿಬಲ್ ಆಕ್ರೋಶ

Date:

ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣವನ್ನು ನಿಜವಾದ ಶಿವಸೇನೆ ಎಂದು ಮಹಾರಾಷ್ಟ್ರ ಸ್ಪೀಕರ್ ತೀರ್ಪು ನೀಡಿದ ನಂತರ ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ‘ನಾಟಕವನ್ನು ಬಹಳ ಹಿಂದೆಯೇ ರಚಿಸಲಾಗಿತ್ತು’ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ಶಿಂಧೆ ಸೇನೆ ನಿಜವಾದ ಸೇನೆ. ಬಹಳ ಹಿಂದೆಯೇ ರಚಿತವಾಗಿರುವ ನಾಟಕವಿದು. ಪ್ರಹಸನ ಯಾವುದೇ ಸಹಾಯ ಪಡೆಯದೆ ನಡೆಯಿತು ಎಂಬುದನ್ನು ಎಲ್ಲರೂ ವೀಕ್ಷಿಸಿದರು. ಇದು ಪ್ರಜಾಪ್ರಭುತ್ವದ ತಾಯಿದ ನಿಜವಾದ ದುರಂತ” ಎಂದು ಕಪಿಲ್ ಸಿಬಲ್ ಬೇಸರ ವ್ಯಕ್ತಪಡಿಸಿದ್ದಾರೆ.

2022ರಲ್ಲಿ ವಿಭಜನೆಗೊಂಡ ಶಿವಸೇನಾ ಬಣಗಳ ಅನರ್ಹತೆಯ ವಿಚಾರವಾಗಿ ಸ್ಪೀಕರ್ ರಾಹುಲ್ ನರ್ವೇಕರ್ ತಮ್ಮ 105 ನಿಮಿಷಗಳ ಸುದೀರ್ಘ ಭಾಷಣದಲ್ಲಿ ಉದ್ಧವ್ ಠಾಕ್ರೆ ಬಣದ ಅರ್ಜಿಯನ್ನು ತಿರಸ್ಕರಿಸಿ ಏಕನಾಥ್ ಶಿಂಧೆ ಒಳಗೊಂಡಂತೆ 30 ಶಾಸಕರ ಬಣವೆ ನಿಜವಾದ ಶಿವಸೇನೆ ಎಂದು ತೀರ್ಪು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಭಿಮಾನ ಅಂಧಾಭಿಮಾನವಾಗದಿರಲಿ; ಬಡವರ ಮಕ್ಕಳು ಬಲಿಯಾಗದಿರಲಿ

1999ರಲ್ಲಿ ರಚಿತಗೊಂಡ ಶಿವಸೇನೆ ಪಕ್ಷದ ಸಂವಿಧಾನವೇ ಅಧಿಕೃತ. ಉದ್ಧವ್ ಠಾಕ್ರೆಗೆ ಶಾಸಕರ ಬೆಂಬಲ ಇಲ್ಲ. 2018 ರ ಪಕ್ಷದ ಹೊಸ ಸಂವಿಧಾನ ಚುನಾವಣಾ ಆಯೋಗದಲ್ಲಿಲ್ಲ. ಹೀಗಾಗಿ ಚುನಾವಣಾ ಆಯೋಗದ ದಾಖಲೆಗಳ ಪ್ರಕಾರ 1999 ಸಂವಿಧಾನವನ್ನು ಪರಿಗಣಿಸಲಾಗಿದೆ ಎಂದು ಸ್ಪೀಕರ್ ತಮ್ಮ ತೀರ್ಪಿನಲ್ಲಿ ತಿಳಿಸಿದ್ದರು.

ಜೂನ್‌ 2022ರಲ್ಲಿ ಶಿವಸೇನೆ ಶಾಸಕರು ವಿಭಜನೆಗೊಂಡು ಎರಡು ಬಣಗಳಾದ ನಂತರ ನಿಜವಾದ ಶಿವಸೇನೆ ತಮ್ಮದು ಎಂದು ಘೋಷಿಸಬೇಕು ಎಂದು ಎರಡು ಬಣಗಳು ಚುನಾವಣಾ ಆಯೋಗದ ಕದ ತಟ್ಟಿದ್ದವು. ಆಯೋಗ ಕೂಡ ಹೆಚ್ಚು ಶಾಸಕರಿರುವ ಏಕನಾಥ್ ಶಿಂಧೆ ಬಣವನ್ನು ನಿಜವಾದ ಶಿವಸೇನೆ ಎಂದು ತೀರ್ಪು ನೀಡಿತ್ತು.

ಈಗ ಸ್ಪೀಕರ್ ಕೂಡ 18 ತಿಂಗಳ ನಂತರ ತೀರ್ಪು ನೀಡಿದ್ದು, ಶೀವಸೇನಾ ಸಂವಿಧಾನದಂತೆ ಪಕ್ಷದ ಪ್ರಮುಖ ಉದ್ಧವ್ ಠಾಕ್ರೆಯವರಿಗೆ ಏಕನಾಥ್ ಶಿಂಧೆ ಬಣವನ್ನು ಉಚ್ಚಾಟಿಸುವ ಅಧಿಕಾರ ಇಲ್ಲವೆಂದು ತಿಳಿಸಿದ್ದಾರೆ.

ಸ್ಪೀಕರ್ ತೀರ್ಪಿನಿಂದ ಅಸಮಾಧಾನಗೊಂಡಿರುವ ಉದ್ಧವ್ ಠಾಕ್ರೆ ತಾವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...