ಜನರನ್ನು ಭಯಪಡಬೇಡಿ ಎನ್ನುವ ಪ್ರಧಾನಿ ಮೋದಿ ತಾವೇ ಭಯಭೀತರಾಗಿದ್ದಾರೆ: ರಾಹುಲ್ ಗಾಂಧಿ

Date:

ಎಲ್‌ಪಿಜಿ ಕೊರತೆ ಕಾಣಿಸಿಕೊಂಡಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಪ್ರಧಾನಿ ಜನರಲ್ಲಿ ಭಯಪಡಬೇಡಿ ಎಂದು ಹೇಳುತ್ತಾರೆ. ಆದರೆ ತಾವೇ ಭಯಭೀತರಾಗಿದ್ದಾರೆ” ಎಂದು ಹೇಳಿದ್ದಾರೆ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯ ಕುರಿತು ಸರ್ಕಾರ ಉತ್ತರಿಸಬೇಕು ಎಂದು ಆಗ್ರಹಿಸಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ವಿರೋಧ ಪಕ್ಷದ ಸಂಸದರು ಸಂಸತ್ ಭವನದ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನು ಓದಿದ್ದೀರಾ? ಪ್ರಧಾನಿ ಮೋದಿ ಮಾನಸಿಕವಾಗಿ ಕುಗ್ಗಿದ್ದಾರೆ, ಅವರ ಸರ್ಕಾರ ಶೀಘ್ರವೇ ಉರುಳಲಿದೆ: ರಾಹುಲ್‌ ಗಾಂಧಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆ ನಂತರ ಮಾತನಾಡಿದ ರಾಹುಲ್ ಗಾಂಧಿ, “ಎಪ್‌ಸ್ಟೀನ್‌ ಫೈಲ್ಸ್ ವಿಷಯ ಮತ್ತು ಅಮೆರಿಕದಲ್ಲಿ ನಡೆಯುತ್ತಿರುವ ಅದಾನಿ ಪ್ರಕರಣದಿಂದಾಗಿ ಪ್ರಧಾನಿ ಭಯಭೀತರಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

ರಾಹುಲ್ ಗಾಂಧಿ

ಕಾಂಗ್ರೆಸ್, ಡಿಎಂಕೆ, ಟಿಎಂಸಿ ಮತ್ತು ಎಸ್‌ಪಿ ಸೇರಿದಂತೆ ಹಲವಾರು ವಿರೋಧ ಪಕ್ಷದ ಸಂಸದರು ಸಂಸತ್ತಿನ ಮಕರ ದ್ವಾರದ ಬಳಿ ಪ್ರತಿಭಟನೆ ನಡೆಸಿ, ‘ನಾಮ್ ನರೇಂದರ್, ಕಾಮ್ ಸರೆಂಡರ್’ – (ಹೆಸರು ನರೇಂದ್ರ, ಆದರೆ ಸರೆಂಡರ್ ಅಂದರೆ ಆಗುವುದೇ ಕೆಲಸ) ಎಂದು ಘೋಷಣೆ ಕೂಗಿದ್ದಾರೆ. ‘ಮೋದಿ ಜಿ, ಎಲ್‌ಪಿಜಿ’ ಮುಂತಾದ ಘೋಷಣೆಗಳನ್ನೂ ಕೂಗಿದರು. ಪ್ರಿಯಾಂಕಾ ಗಾಂಧಿ ಸೇರಿದಂತೆ ವಿರೋಧ ಪಕ್ಷದ ಮಹಿಳಾ ಸಂಸದರು ನಕಲಿ ಇಟ್ಟಿಗೆ ಅಡುಗೆ ಒಲೆಯ ಮುಂದೆ ಕುಳಿತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇನ್ನು ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಭಾರತದ ಮೇಲೆ ಅದರ ಪರಿಣಾಮದ ಬಗ್ಗೆ ಪೂರ್ಣ ಪ್ರಮಾಣದ ಚರ್ಚೆಗೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ. ಇತ್ತ ಯುದ್ಧದ ನಡುವೆ ದೇಶದಲ್ಲಿ ಹಲವೆಡೆ ಎಲ್‌ಪಿಜಿ ಸಮಸ್ಯೆ ಉಂಟಾಗಿದೆ. ಪ್ರಧಾನಿ ಪ್ರಧಾನಿ ಮೋದಿ ಮಾತ್ರ ಬುಧವಾರ ಜನರು ಭಯಭೀತರಾಗದಂತೆ ಮನವಿ ಮಾಡಿದ್ದಾರೆ. ಸಾರ್ವಜನಿಕ ಹಿತಾಸಕ್ತಿಯನ್ನು ರಕ್ಷಿಸಲಾಗುವುದು ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...