ಲೋಕಸಭಾ ಚುನಾವಣೆ: ವಾರಣಾಸಿಯಿಂದ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Date:

ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಸತತ ಎರಡು ಬಾರಿ ಆಯ್ಕೆಯಾಗಿರುವ ಅವರು ಮೂರನೇ ಬಾರಿ ಇಲ್ಲಿಂದ ಆಯ್ಕೆ ಬಯಸುತ್ತಿದ್ದಾರೆ.

ಪ್ರಧಾನಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್‌ ಚೌಧರಿ ಕೂಡ ಜೊತೆಗಿದ್ದರು.

ಮೋದಿ 2014 ಹಾಗೂ 2019ರಿಂದ ವಾರಣಾಸಿ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 2014ರಲ್ಲಿ ಮೊದಲ ಬಾರಿ ಸ್ಪರ್ಧಿಸಿದ್ದ ಅವರು ಗುಜರಾತ್‌ನ ವಡೋದರ ಕ್ಷೇತ್ರದಿಂದಲೂ ಕಣಕ್ಕಿಳಿದು ಆಯ್ಕೆಯಾಗಿದ್ದರು. ಆನಂತರದಲ್ಲಿ ವಡೋದರ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ವಾರಣಾಸಿ ಕ್ಷೇತ್ರವನ್ನು ಉಳಿಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೂರುಗಳಿಗೆ ಬೆಲೆ ಇಲ್ಲ, ಕ್ರಮ ಕೈಗೊಳ್ಳಲ್ಲ, ಆಯೋಗಕ್ಕೆ ಹಲ್ಲೂ ಇಲ್ಲ

ಮೋದಿ ಪ್ರತಿಸ್ಪರ್ಧಿಯಾಗಿ ವಾರಣಾಸಿ ಕ್ಷೇತ್ರದಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾದ ಅಜಯ್‌ ರೈ ಸ್ಪರ್ಧಿಸುತ್ತಿದ್ದಾರೆ. ಇದಲ್ಲದೆ ಉತ್ತರ ಪ್ರದೇಶದ ಹಾಸ್ಯ ಕಲಾವಿದ ಶ್ಯಾಮ್‌ ರಂಗೀಲ ಕೂಡ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಣಕ್ಕಿಳಿಯುವ ಸಾಧ್ಯತೆಯಿದೆ.

ವಾರಣಾಸಿಯಲ್ಲಿ ಜೂನ್‌ 1ರಂದು ಕೊನೆಯ ಹಾಗೂ 7ನೇ ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಜೂ.4 ರಂದು ಎಲ್ಲ 543 ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ.

ಪ್ರಧಾನಿ ನಾಮಪತ್ರ ಸಲ್ಲಿಸುವ ಕಾರ್ಯಕ್ರಮಕ್ಕೆ ಕೋಟ್ಯಂತರ ರೂ. ಖರ್ಚು ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ರಸ್ತೆಗಳ ಅಂದಗೊಳಿಸುವಿಕೆ, ಸಾವಿರಾರು ಜನರನ್ನು ಕರೆತಂದಿರುವುದು ಹಾಗೂ ಅಗತ್ಯಕ್ಕಿಂತಲೂ ಹೆಚ್ಚು ಜನರು ನಾಮಪತ್ರ ಸಲ್ಲಿಸುವ ವೇಳೆ ಹಾಜರಿರುವುದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದರೂ ಚುನಾವಣಾ ಆಯೋಗ ಮಾತ್ರ ಮೂಕಪ್ರೇಕ್ಷಕನಾಗಿದೆ.  ಮಾಜಿ ಚುನಾವಣಾ ಆಯುಕ್ತರಾದ ಟಿ ಎನ್‌ ಶೇಷನ್‌ ಅವರ ಆತ್ಮ ಇವೆಲ್ಲ ದೃಶ್ಯಗಳನ್ನು ನೋಡಿ ನಗುತ್ತಿರಬಹುದು ಎಂದು ಹಲವು ನೆಟ್ಟಿಗರು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೊಂಡಿದ್ದಾರೆ.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...