ಮಾಸ್ಕೋಗೆ ತೆರಳುವ ಪ್ರಧಾನಿಗೆ ಮಣಿಪುರ ಭೇಟಿಗೆ ಸಮಯವಿಲ್ಲ: ಕಾಂಗ್ರೆಸ್ ವಾಗ್ದಾಳಿ

Date:

ಕಳೆದ ವರ್ಷದ ಮೇ ತಿಂಗಳಿನಲ್ಲಿ ಜನಾಂಗೀಯ ಸಂಘರ್ಷ ಉಂಟಾದ ನಂತರದಿಂದ ಮಣಿಪುರಕ್ಕೆ ರಾಹುಲ್‌ ಗಾಂಧಿ ಮೂರು ಬಾರಿ ಭೇಟಿ ನೀಡಿದ್ದಾರೆ. ಆದರೆ ಪ್ರಧಾನಿ ಮಣಿಪುರಕ್ಕೆ ತೆರಳಲು ಕೆಲವು ಗಂಟೆಗಳ ಕಾಲ ಸಮಯವೂ ಮಾಡಿಕೊಳ್ಳುತ್ತಿಲ್ಲ, ಅಲ್ಲಿಗೆ ಹೋಗುವ ಆಸಕ್ತಿಯನ್ನು ಹೊಂದಿಲ್ಲ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ನಾಯಕ ಜೈರಾಮ್‌ ರಮೇಶ್, ಇಂದು ಲೋಕಸಭೆಯ ವಿಪಕ್ಷ ನಾಯಕರು ಅಸ್ಸಾಂ ಹಾಗೂ ಮಣಿಪುರಕ್ಕೆ ತೆರಳಿದರೆ, ಜೈವಿಕವಾಗಿ ಜನಿಸಿಲ್ಲ ಎಂದು ಹೇಳಿಕೊಳ್ಳುವ ಪ್ರಧಾನಿ ಮಾಸ್ಕೋಗೆ ತೆರಳುತ್ತಾರೆ. ಜೈವಿಕವಲ್ಲದ ಪ್ರಧಾನಿಯ ಹೊಗಳುಭಟ್ಟರು ಕೆಲವು ಕಾಲ ರಷ್ಯಾ- ಉಕ್ರೇನ್‌ ಯುದ್ಧವನ್ನು ನಿಲ್ಲಿಸಿದರೆಂದು ಸಮರ್ಥಿಸಿಕೊಳ್ಳುತ್ತಾರೆ. ಬಹುಶಃ ಈ ಮಾಸ್ಕೋ ಪ್ರವಾಸ ಇನ್ನಷ್ಟು ವಿಲಕ್ಷಣವಾದ ಘಟನೆಗಳಿಗೆ ಕಾರಣವಾಗಬಹುದು ಎಂದು ಪ್ರಧಾನಿಯನ್ನು ಕುಟುಕಿದ್ದಾರೆ.

ಮಣಿಪುರ ಹೊತ್ತಿ ಉರಿದ 14 ತಿಂಗಳುಗಳಲ್ಲಿ ರಾಹುಲ್‌ ಗಾಂಧಿ ಮೂರು ಬಾರಿ ಭೇಟಿ ನೀಡಿದ್ದಾರೆ.ತಾವು ಜೈವಿಕವಾಗಿ ಜನಿಸಿಲ್ಲ ಎಂದು ಹೇಳಿಕೊಳ್ಳುವ ಪ್ರಧಾನಿ ಗಲಭೆ ಶುರುವಾದ 2023, ಮೇ 3 ರಿಂದ ಮಣಿಪುರಕ್ಕೆ ತೆರಳಲು ಕೆಲವು ಗಂಟೆಗಳ ಕಾಲ ಸಮಯವೂ ಮಾಡಿಕೊಳ್ಳುತ್ತಿಲ್ಲ, ಅಲ್ಲಿಗೆ ಹೋಗುವ ಆಸಕ್ತಿಯನ್ನು ಹೊಂದಿಲ್ಲ. ಅಲ್ಲಿ ಇರುವ ತಮ್ಮ ಸ್ವಂತ ಪಕ್ಷದ ಮುಖ್ಯಮಂತ್ರಿಯನ್ನೇ ಅವರು ಭೇಟಿ ಮಾಡಿಲ್ಲ. ಹಾಗೆಯೇ ಇತರ ಪಕ್ಷದ ಶಾಸಕರು, ಸಂಸದರನ್ನು ಕೂಡ ಭೇಟಿಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಣಿ ಅವಘಡಗಳಿಂದ ಬಯಲಾದ ಮೋದಿಯವರ ‘ಅಭಿವೃದ್ಧಿ ಮತ್ತು ಆಡಳಿತ’

ಪ್ರವಾಹ ಪರಿಸ್ಥಿತಿ ಉಂಟಾಗಿರುವ ಅಸ್ಸಾಂ ಹಾಗೂ ಮಣಿಪುರ ರಾಜ್ಯಗಳಿಗೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಇಂದು ಭೇಟಿ ನೀಡಿದ್ದಾರೆ. ಅಸ್ಸಾಂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಮಣಿಪುರದ ನಿರಾಶ್ರಿತ ಪ್ರದೇಶಗಳ ಜನರನ್ನು ಭೇಟಿ ನೀಡಿಲಿದ್ದಾರೆ. ಸಂಜೆ ಮಣಿಪುರದ ರಾಜ್ಯಪಾಲರಾದ ಅನುಸೂಯ ಊಯ್ಕೆ ಅವರನ್ನು ಭೇಟಿ ಮಾಡಲಿದ್ದಾರೆ. ರಾಹುಲ್‌ ಅವರು ಉತ್ತರ ಪ್ರದೇಶ ರಾಯ್‌ಬರೇಲಿಯಿಂದ ಸಂಸದರಾಗಿ ಆಯ್ಕೆಯಾದ ನಂತರ ಮಣಿಪುರ ಮೊದಲ ಭೇಟಿ ಇದಾಗಿದೆ.

ಅಸ್ಸಾಂನಲ್ಲಿ ಪ್ರವಾಹ ಉಂಟಾಗಿ 28 ಜಿಲ್ಲೆಯ 22 ಲಕ್ಷಕ್ಕೂ ಹೆಚ್ಚು ಮಂದಿ ತೊಂದರೆಗೀಡಾಗಿದ್ದಾರೆ. ಈ ವರ್ಷದ ನೆರೆ ಪ್ರವಾಹದಿಂದ 78 ಮಂದಿ ಮೃತಪಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...