ಪ್ರಧಾನಿಗೆ ಮಣಿಪುರಕ್ಕಿಂತ ಇಸ್ರೇಲ್ –ಹಮಸ್ ಯುದ್ಧದಲ್ಲಿ ಹೆಚ್ಚು ಆಸಕ್ತಿ: ರಾಹುಲ್ ಗಾಂಧಿ ವಾಗ್ದಾಳಿ

Date:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕಿಂತ ಇಸ್ರೇಲ್-ಹಮಸ್ ಯುದ್ಧದಲ್ಲಿ ಪ್ರಧಾನಿ ಹೆಚ್ಚು ಆಸಕ್ತಿ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಮಿಜೋರಾಂನ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಪ್ರಧಾನಿ ಮತ್ತು ಭಾರತ ಸರ್ಕಾರವು ಇಸ್ರೇಲ್‌ನಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ತುಂಬಾ ಆಸಕ್ತಿ ಹೊಂದಿದ್ದಾರೆ. ಆದರೆ ಮಣಿಪುರದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಅವರಿಗೆ ಆಸಕ್ತಿ ಇಲ್ಲ ಎಂಬುದು ನನಗೆ ನಿಜವಾಗಿಯೂ ಆಶ್ಚರ್ಯಕರವಾಗಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಜೂನ್‌ನಲ್ಲಿ ತಮ್ಮ ಮಣಿಪುರ ಭೇಟಿಯನ್ನು ಪ್ರಸ್ತಾಪಿಸಿ, “ಮಣಿಪುರದ ಕಲ್ಪನೆಯನ್ನು ಬಿಜೆಪಿ ನಾಶಪಡಿಸಿದೆ. ಇದು ಇನ್ನು ಮುಂದೆ ಒಂದು ರಾಜ್ಯವಲ್ಲ, ಈಗ ಎರಡು ರಾಜ್ಯವಾಗಿದೆ. ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಸಂಘರ್ಷ ಭುಗಿಲೆದ್ದಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜನರನ್ನು ಹತ್ಯೆ ಮಾಡಲಾಗಿದೆ. ಮಹಿಳೆಯರಿಗೆ ಕಿರುಕುಳ ನೀಡಲಾಗಿದೆ ಮತ್ತು ಶಿಶುಗಳನ್ನು ಕೊಲ್ಲಲಾಗಿದೆ. ಆದರೆ ಪ್ರಧಾನಿಗೆ ಅಲ್ಲಿ ಪ್ರಯಾಣಿಸುವುದು ಮುಖ್ಯವಲ್ಲ ಎಂದು ರಾಹುಲ್  ಹೇಳಿದರು.

“ಮೇ ತಿಂಗಳಲ್ಲಿ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಪ್ರಾರಂಭವಾದಾಗಿನಿಂದ ಪ್ರಧಾನಿ ಮೋದಿ ಇನ್ನೂ ಮಣಿಪುರಕ್ಕೆ ಭೇಟಿ ನೀಡದಿರುವುದು ನಾಚಿಕೆಗೇಡಿನ ಸಂಗತಿ. ಭಾರತದ ಕಲ್ಪನೆಯು ಆಕ್ರಮಣದಲ್ಲಿದೆ ಮತ್ತು ದೇಶದ ಜನರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ ಎಂದು ರಾಹುಲ್ ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಭಾರತೀಯ ಕ್ರಿಕೆಟ್ ಪ್ರಿಯರಿಗೆ ಶುಭಸುದ್ದಿ: 2028ರ ಒಲಿಂಪಿಕ್ಸ್‌ಗೆ ಟಿ20 ಕ್ರಿಕೆಟ್ ಸೇರ್ಪಡೆ

“ಮಣಿಪುರದಲ್ಲಿ ನಡೆದಿರುವುದು ಭಾರತದ ಕಲ್ಪನೆಯ ಮೇಲಿನ ದಾಳಿಯಾಗಿದೆ. ಕಾಂಗ್ರೆಸ್ ಹಮ್ಮಿಕೊಂಡ ಭಾರತ್ ಜೋಡೋ ಯಾತ್ರೆಯು ಈ ದೇಶದ ಪ್ರತಿಯೊಂದು ಧರ್ಮ, ಸಂಸ್ಕೃತಿ, ಭಾಷೆ ಮತ್ತು ಸಂಪ್ರದಾಯವನ್ನು ರಕ್ಷಿಸುವ ಯಾತ್ರೆಯಾಗಿತ್ತು ಎಂದರು.

ಕಾಂಗ್ರೆಸ್ ನಾಯಕ ಸೋಮವಾರ ಮಿಜೋರಾಂನ ಐಜ್ವಾಲ್‌ನಲ್ಲಿ ಚನ್ಮರಿ ಜಂಕ್ಷನ್‌ನಿಂದ ರಾಜಭವನದವರೆಗೆ ಸುಮಾರು ಎರಡು ಕಿಲೋಮೀಟರ್‌ಗಳಷ್ಟು ಪಾದಯಾತ್ರೆ ನಡೆಸಿದರು.

ರಾಹುಲ್ ಎರಡು ದಿನಗಳ ಭೇಟಿಗಾಗಿ ಮಿಜೋರಾಂನಲ್ಲಿದ್ದಾರೆ. 40 ಸದಸ್ಯ ಬಲದ ಮಿಜೋರಾಂ ವಿಧಾನಸಭೆಗೆ ನವೆಂಬರ್ 7 ರಂದು ಚುನಾವಣೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...