ಯುಪಿಎ ಸರ್ಕಾರದ ಹಿಂದುಳಿದ ಪ್ರದೇಶದ ಅನುದಾನ ನಿಧಿ ರದ್ದುಗೊಳಿಸಿದ್ದು ಏಕೆ: ಮೋದಿಗೆ ಕಾಂಗ್ರೆಸ್ ಪ್ರಶ್ನೆ

Date:

ಉತ್ತರ ಪ್ರದೇಶದ ಬಾರಾಬಂಕಿ ಹಾಗೂ ಫತೇಫುರ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಕೆಲವು ಪ್ರಶ್ನೆಗಳನ್ನು ಕೇಳಲು ಬಯಸಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಮೋದಿ ಸರ್ಕಾರ ಯುಪಿಎ ಸರ್ಕಾರ ಜಾರಿಗೊಳಿಸಿದ್ದ ಹಿಂದುಳಿದ ಪ್ರದೇಶಗಳ ಅನುದಾನವನ್ನು ಏಕೆ ರದ್ದುಗೊಳಿಸಿತು. ಬಿಜೆಪಿ ಏಕೆ ಮೆಂತ್ಯ ಬೆಳೆಯುವ ರೈತರನ್ನು ಕಡೆಗಣಿಸಿತು. ಅದಲ್ಲದೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಿರಂತರವಾಗಿ ಬುದ್ವಾಲ್ ಸಕ್ಕರೆ ಗಿರಣಿಯನ್ನು  ಮರು ಪ್ರಾರಂಭಿಸುವುದಾಗಿ ಸುಳ್ಳು ಹೇಳುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಭಾರತದ ಹಿಂದುಳಿದ ಪ್ರದೇಶದ ಜಿಲ್ಲೆಗಳ ಅಭಿವೃದ್ಧಿಗಾಗಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಹಿಂದುಳಿದ ಪ್ರದೇಶ ಅನುದಾನ ನಿಧಿಯನ್ನು 2006ರಲ್ಲಿ ಸ್ಥಾಪಿಸಿತ್ತು. ಈ ಯೋಜನೆಯಿಂದ ಉತ್ತರ ಪ್ರದೇಶದ ಹಿಂದುಳಿದ ಜಿಲ್ಲೆಗಳು 2013ರವರೆಗೂ 4 ಸಾವಿರ ಕೋಟಿ ರೂ. ಅನುದಾನ ಪಡೆದಿವೆ. ಆದರೆ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2015ರಲ್ಲಿ ಈ ಯೋಜನೆ ರದ್ದುಗೊಳಿಸಿ ಹಣ ನೀಡುವುದನ್ನು ನಿಲ್ಲಿಸಿತು. ಇದರಿಂದಾಗಿ ಉತ್ತರ ಪ್ರದೇಶದ ಫತೇಪುರ್‌ ರೀತಿಯ ಜಿಲ್ಲೆಗಳು ಆರ್ಥಿಕ ನೆರವು ಸಿಗದೆ ಗಮನಾರ್ಹ ಹೊಡೆತ ಅನುಭವಿಸಬೇಕಾಯಿತು. ಈ ಪ್ರಶ್ನೆಗೆ ಮೋದಿ ಸರ್ಕಾರ ಖಂಡಿತಾ ಉತ್ತರ ನೀಡಬೇಕು ಎಂದು ಜೈರಾಮ್ ರಮೇಶ್ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಹಿಂದೂ-ಮುಸ್ಲಿಮ್ ರಾಜಕಾರಣ ಮಾಡುವುದಿಲ್ಲವೇ ನಮ್ಮ ಪ್ರಧಾನಿ!

ಭಾರತವು ವಿಶ್ವದಲ್ಲಿಯೇ ಅತೀ ಹೆಚ್ಚು ಮೆಂತ್ಯ ಎಣ್ಣೆಯನ್ನು ಉತ್ಪಾದಿಸಿ ರಫ್ತು ಮಾಡುವ ದೇಶವಾಗಿದ್ದು, ಉತ್ತರ ಪ್ರದೇಶ ಭಾರತದಲ್ಲಿಯೇ ಶೇ.90 ರಷ್ಟು ಮೆಂತ್ಯ ಎಣ್ಣೆ ಉತ್ಪಾದಿಸುತ್ತದೆ. ಮೋದಿ ಸರ್ಕಾರದ ಮೆಂತ್ಯ ಎಣ್ಣೆಯ ಮೇಲೆ ಜಿಎಸ್‌ಟಿ ಹೆಚ್ಚಿನ ತೆರಿಗೆಯ ಹೇರಿಕೆಯಿಂದಾಗಿ ಉದ್ಯಮಕ್ಕೆ ಆರ್ಥಿಕ ಹೊಡೆತ ಉಂಟಾಗಿದ್ದು, ಮೆಂತ್ಯ ಬೆಳೆಯುವ ರೈತರು ಕೂಡ ಸಂಕಷ್ಟದಲ್ಲಿದ್ದಾರೆ. ಈ ರೈತರನ್ನು ಉತ್ತೇಜಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಲಿಲ್ಲ. ಇದಕ್ಕೂ ನಿರ್ಗಮಿಸುವ ಪ್ರಧಾನಿ ಮೋದಿ ಸರ್ಕಾರ ಉತ್ತರ ನೀಡಬೇಕು ಎಂದು ಜೈರಾಮ್‌ ರಮೇಶ್ ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರಂತರ ಭರವಸೆಗಳ ಹೊರತಾಗಿಯೂ ಬುಂದ್ವಾಲದ ಸಕ್ಕರೆ ಗಿರಣಿ ನಿಷ್ಕ್ರಿಯವಾಗಿದೆ. ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಗೂ ಮುನ್ನ ಬುಂದ್ವಾಲದ ಸಕ್ಕರೆ ಗಿರಣಿಯನ್ನು ಅಭಿವೃದ್ಧಿಪಡಿಸುವುದಾಗಿ ಬಿಜೆಪಿ ಸರ್ಕಾರಗಳು ನೀಡಿದ್ದ ಭರವಸೆಗಳು ಕೇವಲ ಭರವಸೆಗಳಾಗಿ ಉಳಿದಿವೆ. ಇದಕ್ಕೂ ಕೂಡ ಮೋದಿಯವರು ಉತ್ತರ ಕೊಡಬೇಕು ಎಂದು ಜೈರಾಮ್ ರಮೇಶ್ ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...