ಭಾರತಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್

Date:

ಭಾರತ-ರಷ್ಯಾ 23ನೇ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಇಂದು (ಗುರುವಾರ) ಸಂಜೆ ದೆಹಲಿಗೆ ಆಗಮಿಸಿದರು.

ಇಲ್ಲಿನ ಪಾಲಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವ್ಲಾದಿಮಿರ್ ಪುಟಿನ್‌ರನ್ನು ಪ್ರಧಾನಿ ನರೇಂದ್ರ ಮೋದಿ ಬರಮಾಡಿಕೊಂಡರು. ಈ ವೇಳೆ ಉಭಯ ದೇಶಗಳ ರಾಜತಾಂತ್ರಿಕರು ಉಪಸ್ಥಿತರಿದ್ದರು.

ಭಾರತಕ್ಕೆ ಆಗಮಿಸಿರುವ ಪುಟಿನ್‌ರ ನಿಯೋಗದಲ್ಲಿ ರಕ್ಷಣಾ ಸಚಿವ ಆ್ಯಂಡ್ರೆ ಬೆಲೊಸೊವ್ ಸೇರಿದಂತೆ ರಷ್ಯಾ ಅಧಿಕಾರಿಗಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಕೆಟ್ ‘ದೇವರ’ ದಾಖಲೆ ಮುರಿದು ಮುನ್ನುಗ್ಗುತ್ತಿರುವ ಕೊಹ್ಲಿ

ಇಂದು ರಾತ್ರಿ ಪ್ರಧಾನಿಯ ಅಧಿಕೃತ ನಿವಾಸದಲ್ಲಿ ಆಯೋಜಿಸಲಾಗಿರುವ ಭೋಜನ ಕೂಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವ್ಲಾದಿಮಿರ್ ಪುಟಿನ್ ಪಾಲ್ಗೊಳ್ಳಲಿದ್ದಾರೆ. ಬಳಿಕ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಷ್ಯಾದ ರಕ್ಷಣಾ ಸಚಿವ ಆ್ಯಂಡ್ರೆ ಬೆಲೊಸೊವ್ ಅವರು ಗುರುವಾರ ರಾತ್ರಿ ಮಾತುಕತೆ ನಡೆಸಲಿದ್ದಾರೆ.

ಈ ಮಾತುಕತೆಯ ವೇಳೆ ಉಭಯ ನಾಯಕರು ಎಸ್-400 ಕ್ಷಿಪಣಿ ವ್ಯವಸ್ಥೆಗಳ ಖರೀದಿ, ಸುಖೋಯ್-30 ಎಂಕೆಐ ಯುದ್ಧ ವಿಮಾನಗಳನ್ನು ಮೇಲ್ದರ್ಜೆಗೇರಿಸುವುದು ಹಾಗೂ ರಷ್ಯಾದಿಂದ ಇತರ ಸೇನಾ ಸಾಮಗ್ರಿಗಳನ್ನು ಖರೀದಿಸುವುದರಲ್ಲಿ ಭಾರತಕ್ಕಿರುವ ಆಸಕ್ತಿಯ ಕುರಿತು ಚರ್ಚಿಸಲಿದ್ದಾರೆ.

ಇದೇ ವೇಳೆ ನಾಗರಿಕ ಅಣು ಶಕ್ತಿ ಕ್ಷೇತ್ರದಲ್ಲಿ ಭಾರತದ ಜೊತೆಗಿನ ಸಹಕಾರವನ್ನು ಮತ್ತಷ್ಟು ವೃದ್ಧಿಸುವ ಒಡಂಬಡಿಕೆಗೆ ಉಭಯ ದೇಶಗಳು ಸಹಿ ಹಾಕುವ ನಿರೀಕ್ಷೆ ಇದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...