ಮೋದಿ ಕುರ್ಚಿ ಅಲುಗಾಡುತ್ತಿದೆ, ಅಂಬಾನಿ – ಅದಾನಿಗಳ ವಿರುದ್ಧವೇ ವಾಗ್ದಾಳಿ ಆರಂಭಿಸಿದ್ದಾರೆ: ಖರ್ಗೆ

Date:

ಮೂರು ಹಂತದ ಲೋಕಸಭಾ ಚುನಾವಣೆಗಳು ನಡೆದ ನಂತರ ಪ್ರಧಾನಿ ನರೇಂದ್ರ ಮೋದಿ ಕುರ್ಚಿ ಅಲುಗಾಡುತ್ತಿದ್ದು, ಇವರು ತಮ್ಮ ಸ್ನೇಹಿತರ ವಿರುದ್ಧವೇ ವಾಗ್ದಾಳಿ ಆರಂಭಿಸಿದ್ದಾರೆ. ಇವೆಲ್ಲವೂ ಫಲಿತಾಂಶದ ನಿಜವಾದ ದಿಕ್ಸೂಚಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಈ ಬಗ್ಗೆ ‘ಎಕ್ಸ್‌’ನಲ್ಲಿ ಟ್ವೀಟ್‌ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಕಾಲ ಬದಲಾಗುತ್ತದೆ. ಸ್ನೇಹಿತರು ಸ್ನೇಹಿತರಾಗಿರುವುದಿಲ್ಲ. ಮೂರು ಸುತ್ತಿನ ಲೋಕಸಭಾ ಚುನಾವಣೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ನೇಹಿತರ ವಿರುದ್ಧವೇ ದಾಳಿ ಆರಂಭಿಸಿದ್ದಾರೆ.ಇದು ಮೋದಿಯವರ ಕುರ್ಚಿ ಅಲುಗಾಡುತ್ತಿರುವುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಇದು ಫಲಿತಾಂಶದ ನಿಜವಾದ ದಿಕ್ಸೂಚಿಯನ್ನು ಸೂಚಿಸುತ್ತದೆ ಎಂದು  ತಿಳಿಸಿದ್ದಾರೆ.

ತೆಲಂಗಾಣದಲ್ಲಿ ಪ್ರಚಾರ ಕೈಗೊಂಡಿದ್ದ ಸಂದರ್ಭದಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸನ್ನು ಟೀಕಿಸುವ ಸಂದರ್ಭದಲ್ಲಿ ಅಂಬಾನಿ ಹಾಗೂ ಅದಾನಿ ವಿರುದ್ಧವು ವಾಗ್ದಳಿ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ

“ಚುನಾವಣೆ ಘೋಷಣೆಯಾದಗಿನಿಂದಲೂ ಕಾಂಗ್ರೆಸ್ ಅಂಬಾನಿ –ಅದಾನಿಯನ್ನು ತೆಗಳುವುದನ್ನು ಬಿಟ್ಟಿಲ್ಲ. ನಾನು ತೆಲಂಗಾಣ ಮಣ್ಣಿನ ಜನರನ್ನು ಕೇಳುತ್ತೇನೆ, ಅಂಬಾನಿ-ಅದಾನಿಯಿಂದ ಎಷ್ಟು ಪಡೆದುಕೊಂಡಿದ್ದಾರೆ ಎಂಬುದನ್ನು ಮಹಾರಾಜರು ಘೋಷಿಸಲಿ. ಟೆಂಪೋ ಲೋಡುಗಟ್ಟಲೆ ಹಣ ಕಾಂಗ್ರೆಸಿಗೆ ತಲುಪಿದೆಯಲ್ಲವೆ? ರಾತ್ರೋರಾತ್ರಿ ಒಳ ಒಪ್ಪಂದವಾದ ನಂತರ ಅದಾನಿ ವಿರುದ್ಧ ದಾಳಿ ಮಾಡುವುದನ್ನು ನಿಲ್ಲಿಸಿದ್ದಾರೆ” ಎಂದು ಪ್ರಧಾನಿ ಹೇಳಿದ್ದರು.

“ಖಂಡಿತಾ ಏನೋ ಅಕ್ರಮ ಒಳ ಒಪ್ಪಂದ ನಡೆದಿದೆ. ಐದು ವರ್ಷಗಳಲ್ಲಿ ಅದಾನಿ – ಅಂಬಾನಿಗಳನ್ನು ತೆಗಳುತ್ತಿದ್ದವರು ರಾತ್ರೋ ರಾತ್ರಿ ನಿಲ್ಲಿಸಿದ್ದಾರೆ. ಇದರ ಅರ್ಥ ನೀವು ಲೋಡುಗಟ್ಟಲೆ ಹಣವನ್ನು ಲೂಟಿ ಮಾಡಿದ್ದೀರಿ. ಇದಕ್ಕೆ ನೀವು ದೇಶಕ್ಕೆ ಉತ್ತರಿಸಬೇಕು” ಎಂದು ಪ್ರಧಾನಿ ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...