ಪ್ರಧಾನಿಗೆ ಅಂಬೇಡ್ಕರ್ ಬಗ್ಗೆ ಗೌರವವಿದ್ದರೆ ಅಮಿತ್ ಶಾ ಅವರನ್ನು ವಜಾ ಮಾಡಬೇಕು : ಮಲ್ಲಿಕಾರ್ಜುನ ಖರ್ಗೆ ಆಗ್ರಹ

Date:

ಬುಧವಾರ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ ಬಿ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಧ್ಯರಾತ್ರಿಯೊಳಗೆ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಖರ್ಗೆ, ಅಮಿತ್ ಶಾ ಅವರ ಹೇಳಿಕೆಗೆ ಕ್ಷಮೆಯಾಚಿಸಬೇಕು. ಪ್ರಧಾನಿ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೇಂದ್ರ ಸಂಪುಟದಿಂದ ವಜಾ ಮಾಡದಿದ್ದರೆ ಜನರು ಬೀದಿಗಿಳಿಯುತ್ತಾರೆ. ಅಮಿತ್ ಶಾ ಅವರು ಕ್ಷಮೆಯಾಚಿಸಬೇಕು. ಅವರಿಗೆ ಸಂಪುಟದಲ್ಲಿ ಮುಂದುವರಿಯುವ ಹಕ್ಕಿಲ್ಲ. ಅವರನ್ನು ವಜಾ ಮಾಡಬೇಕು. ಡಾ.ಬಿ.ಆರ್. ಅಂಬೇಡ್ಕರ್ ಅವರಿಗಾಗಿ ಜನರು ತಮ್ಮ ಪ್ರಾಣವನ್ನು ತ್ಯಾಗ ಮಾಡಲು ಸಿದ್ಧರಿದ್ದಾರೆ ಎಂದರು.

ಬಿಜೆಪಿ ಸಂವಿಧಾನವನ್ನು ಅವಮಾನಿಸಿದೆ ಎಂದು ಆರೋಪಿಸಿದ ಖರ್ಗೆ, ಆ ಪಕ್ಷವು ಸಂವಿಧಾನಕ್ಕಿಂತ ಮನುಸ್ಮೃತಿ ತತ್ವಗಳಿಗೆ ಬದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅಂಬೇಡ್ಕರ್ ಬಗ್ಗೆ ಅಮಿತ್ ಶಾ ವಿವಾದಾತ್ಮಕ ಹೇಳಿಕೆ; ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹ

ಬಿಜೆಪಿಯವರಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಅವರು ಮನುಸ್ಮೃತಿಯ ಬಗ್ಗೆ ಮಾತನಾಡುತ್ತಾರೆ. ಅಮಿತ್ ಶಾ ಅವರನ್ನು ಸಮರ್ಥಿಸಲು ಪ್ರಧಾನಿ ಮೋದಿ ಆರು ಟ್ವೀಟ್ ಮಾಡಿದ್ದಾರೆ. ಇದರ ಅಗತ್ಯ ಏನಿತ್ತು? ಬಿ ಆರ್ ಅಂಬೇಡ್ಕರ್ ಬಗ್ಗೆ ಯಾರಾದರೂ ತಪ್ಪು ಹೇಳಿದರೆ ಅವರನ್ನು ಸಂಪುಟದಿಂದ ತೆಗೆದುಹಾಕಬೇಕು. ಮೋದಿ-ಶಾ ಸ್ನೇಹಿತರಾಗಿದ್ದಾರೆ ಮತ್ತು ಪರಸ್ಪರರ ತಪ್ಪುಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಅಂಬೇಡ್ಕರ್ ಹೆಸರು ಹೇಳುವುದು ಕಾಂಗ್ರೆಸ್‌ಗೆ ಫ್ಯಾಶನ್‌ ಆಗಿಬಿಟ್ಟಿದೆ ಎಂದು ಅಮಿತ್‌ ಶಾ ರಾಜ್ಯಸಭೆಯಲ್ಲಿ ಮಾತನಾಡುವ ವೇಳೆ ಹೇಳಿದ್ದರು.ಈಗ ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್…. ಎಂದು ಹೇಳುವುದು ಫ್ಯಾಶನ್ ಆಗಿ ಬಿಟ್ಟಿದೆ.ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಅವರಿಗೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು’ ಎಂದು ಶಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...