ಸಂಸತ್ತಿನಲ್ಲಿ ಪ್ರಧಾನಿ ಮೋದಿ ಡ್ರಾಮಾ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು

Date:

ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಡಿದ ‘ಸಂಸತ್ತಿನಲ್ಲಿ ನಾಟಕ ಬೇಡ, ಕೆಲಸ ಬೇಕು’ ಎಂಬ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ತಿರುಗೇಟು ನೀಡಿದ್ದಾರೆ.

ಸಂಸತ್ತಿನಲ್ಲಿ ಮಾತನಾಡಿದ ಅವರು, ಸಂಸತ್ತು ಇರುವುದೇ ಜನರ ಸಮಸ್ಯೆಗಳನ್ನು ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿ ಮಂಡಿಸಲು ಮತ್ತು ಚರ್ಚಿಸಲು. ಅದನ್ನು ನಾಟಕವೆಂದು ಕರೆಯುವುದು ಸರಿಯಲ್ಲ. ಸಂಸತ್ತಿನಲ್ಲಿ ಎಸ್‌ಐಆರ್‌ ಮತ್ತು ದೆಹಲಿಯ ವಾಯು ಮಾಲಿನ್ಯದಂತಹ ಗಂಭೀರ ವಿಷಯಗಳನ್ನು ಚರ್ಚಿಸುವುದು ನಾಟಕವಲ್ಲ ಎಂದು ಹೇಳಿದ್ದಾರೆ.

ಜನರ ಸಮಸ್ಯೆಗಳ ಬಗ್ಗೆ ಪ್ರಜಾಸತ್ತಾತ್ಮಕ ಚರ್ಚೆಗೆ ಅವಕಾಶ ನೀಡದೇ ತಡೆಯುವ ಕೆಲಸವೇ ನಿಜವಾದ ‘ಡ್ರಾಮಾ’ ಎಂದು ಪ್ರಧಾನಿಗೆ ತಿರುಗೇಟು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಕೊಟ್ಟ ಮಾತು’ ಗದ್ದಲ ಸೃಷ್ಟಿಸಿದ ಬಳಿಕ ಎಚ್ಚೆತ್ತ ಕಾಂಗ್ರೆಸ್

ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಧಾನಮಂತ್ರಿ ಮೋದಿ, ವಿಪಕ್ಷಗಳು ಕಳೆದ 10 ವರ್ಷಗಳಿಂದ ಸಂಸತ್ತಿನಲ್ಲಿ ಗದ್ದಲ ಸೃಷ್ಟಿಸುವ ಮೂಲಕ ಕೆಲಸಕ್ಕೆ ಅಡ್ಡಿ ಮಾಡುತ್ತಿರುವುದಾಗಿ ಆರೋಪಿಸಿದ್ದರು. ಸಂಸತ್ತು ನಾಟಕ ಪ್ರದರ್ಶಿಸುವ ಸ್ಥಳವಲ್ಲ, ನೀತಿಗಳ ಬಗ್ಗೆ ಗಂಭೀರ ಚರ್ಚೆ ನಡೆಯಬೇಕಾದ ವೇದಿಕೆ ಎಂದು ಅವರು ಹೇಳಿದರು.

ಈ ಬಾರಿ ಚಳಿಗಾಲದ ಅಧಿವೇಶನ ಕೇವಲ 15 ದಿನ ಮಾತ್ರ ನಡೆಯಲಿದ್ದು, ಸಾಮಾನ್ಯವಾಗಿ ಇರುವ 20 ದಿನಗಳ ಅವಧಿಗಿಂತ ಕಡಿಮೆ. ಸರ್ಕಾರವು 14 ಮಸೂದೆಗಳನ್ನು ಮಂಡಿಸಲು ತಯಾರಿ ನಡೆಸಿದೆ. ಇದೇ ವೇಳೆ ವಿಪಕ್ಷಗಳು ಎಸ್‌ಐಆರ್ ಪ್ರಕ್ರಿಯೆ, ಬೂತ್ ಮಟ್ಟದ ಅಧಿಕಾರಿಗಳ ಆತ್ಮಹತ್ಯೆ ಪ್ರಕರಣಗಳು ಹಾಗೂ ಇತ್ತೀಚಿನ ದೆಹಲಿ ಭಯೋತ್ಪಾದಕ ದಾಳಿಯ ಕುರಿತಂತೆ ತುರ್ತು ಚರ್ಚೆ ನಡೆಸಬೇಕು ಎಂದು ಒತ್ತಾಯಿಸುತ್ತಿವೆ.

ಈ ಮಧ್ಯೆ ಲೋಕಸಭೆಯಲ್ಲಿ ಸರ್ಕಾರ ಕೇಂದ್ರ ಸುಂಕ (ತಿದ್ದುಪಡಿ) ಮಸೂದೆ ಸೇರಿದಂತೆ ಪ್ರಮುಖ ಮಸೂದೆ ಮಂಡಿಸಲು ಸರ್ಕಾರ ಮುಂದಾಗಿದೆ. ಚಳಿಗಾಲದ ಅಧಿವೇಶನದ ಮೊದಲ ದಿನವೇ ಸರ್ಕಾರ ಹಾಗೂ ವಿಪಕ್ಷಗಳ ನಡುವೆ ಗದ್ದಲ ಉಂಟಾದ ಪರಿಣಾಮ ಲೋಕಸಭೆಯನ್ನು ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...