ಜೈ ಶ್ರೀರಾಮ್ ಹೇಳಿ ಉಪವಾಸವಿರಿ ಎಂದು ಬಯಸುವ ಪ್ರಧಾನಿ: ರಾಹುಲ್ ಗಾಂಧಿ

Date:

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ , ನರೇಂದ್ರ ಮೋದಿಯಿಂದ ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ. ಅವರು ದೇಶದ ಜನತೆ ಜೈ ಶ್ರೀರಾಮ್‌ ಎಂದು ಪಠಿಸುತ್ತ ಉಪವಾಸದಿಂದಿರಿ ಎಂದು ಬಯಸುತ್ತಾರೆ ಎಂದು ಹೇಳಿದ್ದಾರೆ.

ಮಧ್ಯ ಪ್ರದೇಶದ ಸರಂಗಪುರ್‌ನಿಂದ ಭಾರತ್ ಜೋಡೋ ನ್ಯಾಯ ಯಾತ್ರೆ ಆರಂಭಿಸಿ ಮಾತನಾಡಿದರು. ಪ್ರಧಾನಿಯ ನಿರುದ್ಯೋಗ ನೀತಿಯಿಂದಾಗಿ ಕೆಲಸ ಸಿಗದ ನಿರುದ್ಯೋಗ ಯುವಕರು ದಿನಪೂರ್ತಿ ಸಾಮಾಜಿಕ ಮಾಧ್ಯಮಗಳಲ್ಲಿ ರೀಲ್ಸ್‌ಗಳನ್ನು ನೋಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

“ಜೈ ಶ್ರೀರಾಮ್ ಘೋಷಣೆ ಮಾಡುತ್ತಾ ಉಪವಾಸದಿಂದ ಇದ್ದು, ದಿನವಿಡಿ ನಿಮ್ಮ ಫೋನ್‌ಗಳನ್ನು ನೋಡುತ್ತಿರಿ ಎಂಬುದನ್ನು ಪ್ರಧಾನಿ ಬಯಸುತ್ತಾರೆ” ಎಂದು ರಾಹುಲ್ ಗಾಂಧಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರಂಭದಲ್ಲಿ ಸೇನಾ ಪಡೆಗಳು ಯುವಕರಿಗೆ ಕೆಲವು ಗ್ಯಾರಂಟಿಗಳನ್ನು ನೀಡುತ್ತಿದ್ದವು. ಯುವಕರು ಪಿಂಚಣಿ ಪಡೆಯುತ್ತಿದ್ದರು ಹಾಗೂ ಒಂದು ವೇಳೆ ಹುತಾತ್ಮರಾದಾಗ ಗೌರವ ಸಿಗುತ್ತಿತ್ತು. ಈಗ ಅಗ್ನಿವೀರ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ನಾಲ್ಕು ಜನರು ಆಯ್ಕೆಯಾದರೆ ಮೂವರನ್ನು ವಾಪಸ್‌ ಕಳಿಸಲಾಗುತ್ತಿದೆ. ಆ ಮೂರು ಯುವಕರು ಎಸ್‌ಸಿ ಎಸ್‌ಟಿ ಹಾಗೂ ಒಬಿಸಿ ಸಮುದಾಯದವರಾಗಿರುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳು ಸೃಷ್ಟಿಸಿ, ಬೆಂಕಿ ಹಚ್ಚಿ, ಭಯ ಬಿತ್ತುವವರು ಯಾರು?

ನಿರುದ್ಯೋಗದ ಬಗ್ಗೆ ಕಳೆದ ಮೂರು ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದು ಇದು ಎರಡನೇ ಬಾರಿ. ಭಾರತದಲ್ಲಿ ನಿರುದ್ಯೋಗ ಪ್ರಮಾಣ ದುಪ್ಪಟ್ಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ವಾಲಿಯರ್‌ನಲ್ಲಿ ನ್ಯಾಯ ಯಾತ್ರೆಯಲ್ಲಿ ಸಾರ್ವಜನಿಕ ಭಾಷಣ ಮಾಡಿದ ರಾಹುಲ್ ಗಾಂಧಿ, “ಪಾಕಿಸ್ತಾನಕ್ಕೆ ಹೋಲಿಸಿದರೆ ಭಾರತದಲ್ಲಿ ನಿರುದ್ಯೋಗ ಪ್ರಮಾಣ ದುಪ್ಪಟ್ಟಾಗಿದೆ. ಇಲ್ಲಿ ಶೇ.23 ರಷ್ಟು ನಿರುದ್ಯೋಗವಿದ್ದರೆ ಪಾಕ್‌ನಲ್ಲಿ ಶೇ.12ರಷ್ಟು ನಿರುದ್ಯೋಗ ಪ್ರಮಾಣವಿದೆ” ಎಂದು ರಾಹುಲ್ ಹೇಳಿದರು.

ಕಳೆದ 40 ವರ್ಷಗಳಲ್ಲಿ ಭಾರತದ ನಿರುದ್ಯೋಗ ಪ್ರಮಾಣ ತೀವ್ರಗೊಂಡಿದೆ.ಬಾಂಗ್ಲಾದೇಶ ಹಾಗೂ ಭೂತಾನ್‌ಗಿಂತ ಹೆಚ್ಚಿನ ಸಂಖ್ಯೆಯ ಯುವಕರು ನಿರುದ್ಯೋಗಿಗಳಾಗಿದ್ದಾರೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...