ಪೊಲೀಸರು ದಲಿತರ ಹಿತಾಸಕ್ತಿಗೆ ವಿರುದ್ಧವಿದ್ದಾರೆ: ಮಾಜಿ ಐಎಎಸ್‌ ಅಧಿಕಾರಿ ಆರೋಪ

Date:

ತಿರುನಲ್ವೇಲಿ ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯನ್ನು ಸರಿಯಾಗಿ ಪಾಲಿಸುತ್ತಿಲ್ಲ. ಅವರು ಸಂತ್ರಸ್ತ ದಲಿತರನ್ನು ರಾಜಿ ಮಾಡಿಕೊಳ್ಳಲು ಒತ್ತಾಯಿಸುತ್ತಿದ್ದಾರೆ ಎಂದು ಮಾಜಿ ಐಎಎಸ್ ಅಧಿಕಾರಿ ಮತ್ತು ಸಮೂಗ ಸಮತುವ ಪದೈ ಸಂಸ್ಥಾಪಕ ಪಿ ಶಿವಕಾಮಿ ಹೇಳಿದ್ದಾರೆ.

2023ರ ಆಗಸ್ಟ್‌ನಲ್ಲಿ ತಮಿಳುನಾಡಿನ ತಿರುನಲ್ವೇಲಿ ಬಳಿಯ ನಂಗುನೇರಿಯಲ್ಲಿ ಕೆಲವು ಶಾಲಾ ವಿದ್ಯಾರ್ಥಿಗಳು ದಲಿತರ ಮೇಲೆ ಹಲ್ಲೆ ನಡೆಸಿದ್ದರು. ಜಾತಿ ದೌರ್ಜನ್ಯಕ್ಕೊಳಗಾದ ಸಂತ್ರಸ್ತರನ್ನು ಭೇಟಿ ಮಾಡಿದ್ದ ಶಿವಕಾಮಿ ಅವರು ತಮ್ಮ ಶಿಫಾರಸ್ಸುಗಳನ್ನು ನ್ಯಾಯಮೂರ್ತಿ ಕೆ ಚಂದ್ರು ನೇತೃತ್ವದ ಆಯೋಗಕ್ಕೆ ನೀಡಲು ತಿರುನಲ್ವೇಲಿಗೆ ತೆರಳಿದ್ದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕಾಮಿ, “ಎಫ್‌ಐಆರ್‌ನಲ್ಲಿ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ಗಳನ್ನು ಉಲ್ಲೇಖಿಸುವುದನ್ನು ತಪ್ಪಿಸಲು ಜಿಲ್ಲೆಯ ಪೊಲೀಸರು ತಮಗೆ ಬೇಕಾದಂತೆ ದೂರುಗಳನ್ನು ಬರೆಯಲು ದಲಿತ ದೂರುದಾರರಿಗೆ ಒತ್ತಾಯಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದ 15 ಮಂದಿ ಮಧ್ಯಮ ಜಾತಿಯ ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲು ನಿರಾಕರಿಸಿದ್ದಾರೆ. ಪ್ರಕರಣದಲ್ಲಿ ರಾಜಿ ಮಾಡಿಸುವ ಉದ್ದೇಶದಿಂದ ಪೊಲೀಸರು ಕೆಲವು ದಲಿತರ ವಿರುದ್ಧ ಕೌಂಟರ್ ಕೇಸ್ ದಾಖಲಿಸಿದ್ದಾರೆ” ಎಂದು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಪರಿಸರ ಸಚಿವಾಲಯದ ಸಮಿತಿಗೆ ಅದಾನಿ ಕಂಪನಿ ಉದ್ಯೋಗಿ: ‘ದೋಸ್ತಿ ಎಂದರೆ ಹೀಗಿರಬೇಕು’ ಎಂದ ವಿಪಕ್ಷಗಳು

“ಜಿಲ್ಲೆಯಲ್ಲಿ ಜಾತಿ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ತಾತ್ಕಾಲಿಕ ವಿದ್ಯುತ್‌ ಕೆಲಸಗಾರ ಎಸಕ್ಕಿಮುತ್ತು ಅವರು ಇತ್ತೀಚೆಗೆ ವಿದ್ಯುತ್‌ ಕಂಬದ ಮೇಲೆ ಕೆಲಸ ಮಾಡುತ್ತಿದ್ದಾಗ ಮಧ್ಯಮ ಜಾತಿಯ ವ್ಯಕ್ತಿಗಳು ಉದ್ದೇಶಪೂರ್ವಕವಾಗಿ ವಿದ್ಯುತ್ ಪ್ರವಹಿಸಿ ಹತ್ಯೆಗೈದಿದ್ದರು. ಆದರೆ, ಪೊಲೀಸರು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲು ನಿರಾಕರಿಸಿದ್ದರು. ಬದಲಿಗೆ ಪ್ರಕರಣವನ್ನು ಅಪಘಾತವೆಂದು ದಾಖಲಿಸಿಕೊಂಡಿದ್ದರು” ಎಂದು ಅವರು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...