ಯುಪಿ ಬಾಲಕನ ಕಪಾಳ ಮೋಕ್ಷ ಪ್ರಕರಣ: ಆಲ್ಟ್‌ ನ್ಯೂಸ್‌ ಸಹ-ಸ್ಥಾಪಕ ಮೊಹಮ್ಮದ್‌ ಝುಬೇರ್ ವಿರುದ್ಧ ಎಫ್‌ಐಆರ್‌

Date:

ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ಶಿಕ್ಷಕಿಯ ಸೂಚನೆ ಮೇರೆಗೆ ಸಹಪಾಠಿಗಳಿಂದ ಹೊಡೆತ ತಿಂದ ಏಳು ವರ್ಷದ ಮುಸ್ಲಿಂ ಬಾಲಕನ ಗುರುತು ಬಹಿರಂಗಪಡಿಸಿದ್ದಕ್ಕಾಗಿ ಮುಜಾಫರನಗರ ಪೊಲೀಸರು ಇಂದು ಆಲ್ಟ್‌ ನ್ಯೂಸ್‌ ಸಹ-ಸ್ಥಾಪಕ ಮೊಹಮ್ಮದ್‌ ಝುಬೇರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ವಿಷ್ಣುದತ್ತ್‌ ಎಂಬ ವ್ಯಕ್ತಿ ದಾಖಲಿಸಿದ್ದ ದೂರಿನ ಅನ್ವಯ ಜುಬೇರ್‌ ಅವರ ವಿರುದ್ಧ ಬಾಲ ನ್ಯಾಯ ಕಾಯ್ದೆಯ ಸೆಕ್ಷನ್‌ 74 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗವು (ಎನ್‌ಸಿಪಿಸಿಆರ್) 2 ನೇ ತರಗತಿಯ ವಿದ್ಯಾರ್ಥಿಯ ಮೇಲಿನ ಹಲ್ಲೆಯ ವಿಡಿಯೋವನ್ನು ಹಂಚಿಕೊಳ್ಳಬಾರದೆಂದು ಹಾಗೂ ಬಾಲಕನ ಗುರುತನ್ನು ಬಹಿರಂಗಪಡಿಸುವುದರ ವಿರುದ್ಧ ಎಚ್ಚರಿಕೆ ನೀಡಿತ್ತು. ಎನ್‌ಸಿಪಿಸಿಆರ್ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಅವರು “ಮಕ್ಕಳ ಗುರುತನ್ನು ಬಹಿರಂಗಪಡಿಸುವ ಮೂಲಕ ಅಪರಾಧದ ಭಾಗವಾಗಬೇಡಿ” ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ: ಕಳ್ಳತನದ ಶಂಕೆ ಮೇಲೆ ನಾಲ್ವರು ದಲಿತ ಬಾಲಕರನ್ನು ಮರಕ್ಕೆ ನೇತುಹಾಕಿ ಅಮಾನು‍ಷ ಹಲ್ಲೆ

ಈ ಘಟನೆಯ ವಿಡಿಯೋವನ್ನು ಶೇರ್‌ ಮಾಡದಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಸೂಚಿಸಿದ ನಂತರ ತಾವು ಈ ವೀಡಿಯೋ ತೆಗೆದುಹಾಕಿದ್ದಾಗಿ ಜುಬೇರ್‌ ಹೇಳಿದ್ದಾರೆ.

ಕಾನೂನಿನ ಪ್ರಕಾರ ಯಾವುದೇ ಸಂತ್ರಸ್ತ ಮಕ್ಕಳು ಅಥವಾ ಅಪರಾಧಗಳಿಗೆ ಸಾಕ್ಷಿಯಾದ ಮಕ್ಕಳ ಹೆಸರುಗಳನ್ನು ಬಹಿರಂಗಪಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಅಪರಾಧ ಸಾಬೀತಾದವರಿಗೆ ಆರು ತಿಂಗಳ ತನಕ ಜೈಲು ಶಿಕ್ಷೆ ಅಥವಾ ರೂ 2 ಲಕ್ಷ ತನಕ ದಂಡ ವಿಧಿಸಬಹುದಾಗಿದೆ.

ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಜುಬೇರ್‌ ಅವರು ಬಾಲಕನ ಗುರುತು ಬಹಿರಂಗಪಡಿಸಿದ್ದಾರೆಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ತಮ್ಮನ್ನು ಉದ್ದೇಶಪೂರ್ವಕವಾಗಿ ಗುರಿ ಮಾಡಲಾಗುತ್ತಿದೆ ಎಂದು ಝುಬೇರ್ ಆರೋಪಿಸಿದ್ದಾರೆ. “ಈ ನಿರ್ದಿಷ್ಟ ವಿಡಿಯೋವನ್ನು ಹಲವು ಸುದ್ದಿ ಸಂಸ್ಥೆಗಳ ಸಹಿತ ಹಲವರು ಪೋಸ್ಟ್‌ ಮಾಡಿದ್ದರೂ ನನ್ನ ಹೆಸರು ಮಾತ್ರ ಎಫ್‌ಐಆರ್‌ನಲ್ಲಿದೆ” ಎಂದು ಜುಬೇರ್‌ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...