ಹಾಸ್ಯನಟ ಕುನಾಲ್ ಕಾಮ್ರಾಗೆ ಮತ್ತೊಂದು ಸಮನ್ಸ್‌ ನೀಡಿದ ಪೊಲೀಸರು

Date:

ಹಾಸ್ಯ ಕಾರ್ಯಕ್ರಮವೊಂದರಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಕುಟುಕಿ ಹಾಸ್ಯ ಮಾಡಿದ್ದ ಆರೋಪದ ಮೇಲೆ ಸ್ಟ್ಯಾಂಡ್-ಅಪ್ ಕಮೆಡಿಯನ್‌ ಕುನಾಲ್ ಕಾಮ್ರಾ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ, ಕಾಮ್ರಾ ಅವರಿಗೆ ಎರಡನೇ ಸಮನ್ಸ್‌ ನೀಡಿದ್ದಾರೆ.

ಶಿವಸೇನಾ ಶಾಸಕ ಮುರ್ಜಿ ಪಟೇಲ್ ಅವರು ನೀಡಿದ ದೂರಿನ ಮೇರೆಗೆ ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ವಿಚಾರಣೆಗಾಗಿ ತನಿಖಾಧಿಕಾರಿಗಳ ಎದುರು ಹಾಜರಾಗುವಂತೆ 2ನೇ ಸಮನ್ಸ್‌ ನೀಡಿದ್ದಾರೆ.

ಪೊಲೀಸರು ಮಂಗಳವಾರ ಕಾಮ್ರಾ ಅವರಿಗೆ ಮೊದಲ ಸಮನ್ಸ್‌ ನೀಡಿದ್ದರು. ಕಾಮ್ರಾ ವಿರುದ್ಧ ಮಾನನಷ್ಟ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ, ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿದ್ದರು. ಶಿವಸೇನಾ (ಶಿಂಧೆ ಬಣ) ಕಾರ್ಯಕರ್ತರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ. ಹೀಗಾಗಿ, ಮುಂಬೈಗೆ ಬಂದು, ವಿಚಾರಣೆಗೆ ಹಾಜರಾಗಲು ಒಂದು ವಾರದ ಸಮಯ ನೀಡಬೇಕೆಂದು ಕಾಮ್ರಾ ಕೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ಕಾರ್ಮಾ ಅವರ ಮನವಿಗೆ ಸ್ಪಂದಿಸದ ಪೊಲೀಸರು, ಇದೀಗ 2ನೇ ಸಮನ್ಸ್‌ ಜಾರಿಗೊಳಿಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ಪ್ರಕರಣದ ಹಿನ್ನೆಲೆ;

ಇತ್ತೀಚೆಗೆ, ಮುಂಬೈನ ಸ್ಟುಡಿಯೋವೊಂದರಲ್ಲಿ ನಡೆದ ಹಾಸ್ಯ ಕಾರ್ಯಕ್ರಮದಲ್ಲಿ ಶಿವಸೇನೆಯ ಮುಖ್ಯಸ್ಥ ಏಕನಾಥ್ ಶಿಂಧೆ ಅವರ ಹೆಸರನ್ನು ಉಲ್ಲೇಖಿಸದೆ ಹಾಸ್ಯ ಮಾಡಿದ್ದ ಕಾಮ್ರಾ, “ಉಪಮುಖ್ಯಮಂತ್ರಿಗಳು 2022ರಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರವನ್ನು ಉರುಳಿಸಿದ, ಶಿವಸೇನೆ ಮತ್ತು ಎನ್‌ಸಿಪಿಯ ವಿಭಜಿಸಲು ಕಾರಣವಾಗಿದ್ದರು” ಎಂಬುದನ್ನು ಇಟ್ಟುಕೊಂಡು ಹಾಸ್ಯ ಚಟಾಕಿ ಹಾರಿಸಿದ್ದರು. ಅವರೊಬ್ಬ ದ್ರೋಹಿ ಎಂದು ಜರಿದಿದ್ದರು. ಅವರ ಹಾಸ್ಯವು ಮಹಾರಾಷ್ಟ್ರದಲ್ಲಿ ರಾಜಕೀಯ ಚರ್ಚೆಯನ್ನು ಹುಟ್ಟುಹಾಕಿತ್ತು.

ಅವರ ಹಾಸ್ಯದ ವಿಡಿಯೋ ಬಿಡುಗಡೆಯಾದ ಬಳಿಕ, ಭಾನುವಾರ ರಾತ್ರಿ, ಶಿವಸೇನೆ ಕಾರ್ಯಕರ್ತರು ಕಮ್ರಾ ಅವರು ಕಾರ್ಯಕ್ರಮ ನಡೆಸಿದ್ದ ಖಾರ್‌ನಲ್ಲಿರುವ ಹ್ಯಾಬಿಟಾಟ್ ಕಾಮಿಡಿ ಕ್ಲಬ್‌ಗೆ ನುಗ್ಗಿ ದಾಂಧಲೆ ನಡೆಸಿದ್ದರು. ಶಿವಸೇನೆ ಶಾಸಕ ಮುರ್ಜಿ ಪಟೇಲ್ ಅವರು ಕಾರ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ಕಾಮ್ರಾ ವಿರುದ್ಧ ಎಫ್‌ಐಅರ್‌ ದಾಖಲಾಗಿದೆ.

ಈ ವರದಿ ಓದಿದ್ದೀರಾ?: ಶಿವಸೇನೆ ಕಾರ್ಯಕರ್ತರನ್ನು ಕುಟುಕಿದ ಕುನಾಲ್ ಕಾಮ್ರಾ ಹೊಸ ಹಾಡು

ಅಲ್ಲದೆ, ಕಾಮಿಡಿ ಕ್ಲಬ್ ಸ್ಟೂಡಿಯೋದಲ್ಲಿ ದಾಂಧಲೆ ನಡೆಸಿ, ಹಾನಿಗೊಳಿಸಿದ ಶಿವಸೇನೆಯ 40 ಕಾರ್ಯಕರ್ತರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 11 ಮಂದಿಯನ್ನು ಬಂಧಿಸಿದ್ದಾರೆ.

ಕಾಮ್ರಾ ಅವರ ಹಾಸ್ಯವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಹಲವಾರು ನಾಯಕರು ಖಂಡಿಸಿದ್ದಾರೆ. ವಿರೋಧ ಪಕ್ಷದ ನಾಯಕರು ಹಾಸ್ಯನಟನ ವಿರುದ್ಧದ ದಾಖಲಿಸಿರುವ ಪ್ರಕರಣ ಮತ್ತು ನಡೆಯುತ್ತಿರುವ ಬೆಳವಣಿಗೆಗಳು ವಿಧ್ವಂಸಕ ಕೃತ್ಯ ಮತ್ತು ಬೆದರಿಕೆಯಾಗಿವೆ ಎಂದು ಟೀಕಿಸಿವೆ. ವಾಕ್ ಸ್ವಾತಂತ್ರ್ಯದ ಮೇಲೆ ಸರ್ಕಾರ ದಾಳಿ ಮಾಡುತ್ತಿದೆ ಎಂದು ಆರೋಪಿಸಿವೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಕಾಮ್ರಾ, “ನನ್ನ ಹೇಳಿಕೆಗಾಗಿ ನಾನು ಕ್ಷಮೆಯಾಚಿಸುವುದಿಲ್ಲ. ಈ ಗುಂಪಿಗೆ (ಶಿವಸೇನೆ) ಹೆದರುವುದಿಲ್ಲ. ನಾನು ಹೆದರಿ, ಅಡಗಿ ಕೂರುವುದೂ ಇಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...