ಪೊಲೀಸ್ ದುಷ್ಕೃತ್ಯ | ಮದುವೆಯಾಗುವುದಾಗಿ ನಂಬಿಸಿ ವೈದ್ಯೆ ಮೇಲೆ ಅತ್ಯಾಚಾರ

Date:

ಮದುವೆಯಾಗುವ ಭರವಸೆ ನೀಡಿ ವೈದ್ಯ ಮೇಲೆ (ಭಾರತೀಯ ಪೊಲೀಸ್‌ ಸೇವೆ) ಐಪಿಎಸ್‌ ಅಧಿಕಾರಿ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಅಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದೆ

ಮಹಾರಾಷ್ಟ್ರದ ನಾಗ್ಪುರದಲ್ಲಿ ಪ್ರಕರಣ ನಡೆದಿದೆ. ಸಂತ್ರಸ್ತ ವೈದ್ಯೆ ನಾಗ್ಪುರದ ಇಮಾಮ್‌ವಾಡಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವೈದ್ಯೆಗೆ ಆರೋಪಿ ಐಪಿಎಸ್‌ ಅಧಿಕಾರಿ ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿ ಸಂಪರ್ಕಕ್ಕೆ ಬಂದಿದ್ದರು. ಪರಿಚಯವಾದಾಗ ಆತ ಯುಪಿಎಸ್‌ಸಿ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದ. ಇದೇ ಸಮಯದಲ್ಲಿ, ವೈದ್ಯೆಯೊಂದಿಗೆ ಸ್ನೇಹ ಬೆಳೆಸಿದ್ದ ಆರೋಪಿ ಅಧಿಕಾರಿ, ಮದುವೆಯಾಗುವ ಪ್ರಸ್ತಾಪ ಇಟ್ಟಿದ್ದರು. ಇಬ್ಬರೂ ಮದುವೆಗೆ ಒಪ್ಪಿದ್ದರು. ವಿವಾಹದ ಭರವಸೆಯ ನೀಡಿದ್ದ ಅಧಿಕಾರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ನೀಡಿದ ದೂರಿನಲ್ಲಿ ವಿವರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರದಲ್ಲಿ, ಆತ ಐಪಿಎಸ್‌ ಹುದ್ದೆಗೆ ಆಯ್ಕೆಯಾದ ಬಳಿಕ, ಮಹಿಳೆಯಿಂದ ಅಂತರ ಕಾಯ್ದುಕೊಂಡಿದ್ದು, ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತೆಯು ಆರೋಪಿಯ ಪೋಷಕರನ್ನೂ ಸಂಪರ್ಕಿಸಿದ್ದಾರೆ. ಆದರೆ, ಅವರು ಯಾವುದೇ ರೀತಿಯ ಸ್ಪಂದನೆ ನೀಡಿಲ್ಲ. ಆರೋಪಿ ಅಧಿಕಾರಿಯಿಂದ ನೊಂದ ವೈದ್ಯ ಇದೀಗ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...