ಛತ್ತೀಸ್‌ಗಢ| ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

Date:

ಚುನಾವಣಾ ಕರ್ತವ್ಯದಲ್ಲಿದ್ದಾಗ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಶುಕ್ರವಾರ (ಏಪ್ರಿಲ್ 26) ನಡೆದಿದೆ.

ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಮಧ್ಯಪ್ರದೇಶ ವಿಶೇಷ ಸಶಸ್ತ್ರ ಪಡೆಯ ಯೋಧರೊಬ್ಬರು ತನ್ನ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗರಿಯಾಬಂದ್ ಮಹಾಸಮುಂಡ ಲೋಕಸಭಾ ಕ್ಷೇತ್ರದಲ್ಲಿ ಎರಡನೇ ಹಂತದ ಸಾರ್ವತ್ರಿಕ ಚುನಾವಣೆಗಳಲ್ಲಿ ಮತದಾನ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಹೆಡ್ ಕಾನ್‌ಸ್ಟೆಬಲ್ ಜಿಯಾಲಾಲ್ ಪವಾರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಪಿಪಾರ್ಚೇಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಡೆದದಾರ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಜಿಯಾಲಾಲ್ ಪವಾರ್ ಅವರು ಬೆಳಿಗ್ಗೆ 9.30 ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಾಲೆಯ ಕೊಠಡಿಯೊಂದರಲ್ಲಿ ಹೆಡ್ ಕಾನ್‌ಸ್ಟೆಬಲ್ ಜಿಯಾಲಾಲ್ ಪವಾರ್ ತನ್ನ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಜಿಯಾಲಾಲ್ ಮೀಸಲು ತಂಡದಲ್ಲಿದ್ದರು ಮತ್ತು ಸಕ್ರಿಯ ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಮಾಹಿತಿ ತಿಳಿದ ಕೂಡಲೇ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದೆ. ಸ್ಥಳದಲ್ಲಿ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ, ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ?  ದೆಹಲಿ | ಇಬ್ಬರು ಮಕ್ಕಳನ್ನು ಕೊಂದು, ರೈಲ್ವೆ ಹಳಿಗೆ ಬಿದ್ದು ತಂದೆ ಆತ್ಮಹತ್ಯೆ

(ನಿಮಗೆ ಆತ್ಮಹತ್ಯೆಯ ಆಲೋಚನೆಗಳು ಬಂದರೆ, ಭಾವನಾತ್ಮಕ ಬೆಂಬಲ ಬೇಕಾದರೆ ಈ ಯಾರಲ್ಲೂ ಕೇಳಲು ಹಿಂಜರಿಯಬೇಡಿ. ಸ್ನೇಹ ಫೌಂಡೇಶನ್ – 04424640050, ಟೆಲಿ ಮನಸ್ – 14416 (ಲಭ್ಯವಿದೆ 24×7) ಅಥವಾ ಐಕಾಲ್, ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್’ ಸಹಾಯವಾಣಿ – 02225521111 ಗೆ ನೇರವಾಗಿ ಕರೆ ಮಾಡಿ. ಇದು ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 10 ರವರೆಗೆ ಲಭ್ಯವಿದೆ)

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...