ಜಮ್ಮು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ: ಸಮಗ್ರ ತನಿಖೆಗೆ ಆಗ್ರಹ

Date:

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಗುಂಡಿನ ದಾಳಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಉಪ ಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರೂ ಜತೆಗಿದ್ದು ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ದಾಳಿಯನ್ನು ಹಲವು ನಾಯಕರುಗಳು ಖಂಡಿಸಿದ್ದು, Z+ ಭದ್ರತಾ ರಕ್ಷಣೆ ಹೊಂದಿರುವ ಮಾಜಿ ಸಿಎಂ ಬಳಿ ದಾಳಿಕೋರರು ಬರಲು ಸಾಧ್ಯವಾಗಿದ್ದು ಹೇಗೆ ಎಂದು ವಿಪಕ್ಷಗಳು ಪ್ರಶ್ನಿಸಿದೆ. ಹಾಗೆಯೇ ಸಮಗ್ರ ತನಿಖೆ ನಡೆಸಬೇಕೆಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕರು ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಒಮರ್ ಅಬ್ದುಲ್ಲಾ ಜಮ್ಮು ಕಾಶ್ಮೀರದ ಮುಂದಿನ ಸಿಎಂ: ಫಾರೂಕ್ ಅಬ್ದುಲ್ಲಾ ಘೋಷಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಮ್ಮುವಿನ ಹೊರವಲಯದ ‘ಗ್ರೇಟರ್ ಕೈಲಾಶ್’ ಪ್ರದೇಶದಲ್ಲಿ ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಈ ದಾಳಿ ನಡೆದಿದೆ.

ಸರ್ಕಾರವು ಅಬ್ದುಲ್ಲಾ ಅವರ ಭದ್ರತಾ ವ್ಯಾಪ್ತಿಯನ್ನು ಹೆಚ್ಚಿಸಬೇಕು. ಭದ್ರತಾ ಪ್ರೋಟೋಕಾಲ್‌ಗಳ ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಒತ್ತಾಯ ವ್ಯಕ್ತವಾಗಿದೆ. ಕೇಂದ್ರ ರಕ್ಷಣಾ ಪಟ್ಟಿಯಡಿಯಲ್ಲಿ, ವಿಐಪಿ ಭದ್ರತಾ ವ್ಯಾಪ್ತಿ ಅತ್ಯುನ್ನತ ಮಟ್ಟದ Z-ಪ್ಲಸ್ (ASL) ನಿಂದ Z-ಪ್ಲಸ್ ವರೆಗೆ ಪ್ರಾರಂಭವಾಗುತ್ತದೆ, ನಂತರ Z, Y, Y-ಪ್ಲಸ್ ಮತ್ತು X ವರೆಗೆ ಇರುತ್ತದೆ.

ಜಮ್ಮುವಿನ ಪುರಾಣಿ ಮಂಡಿಯ ನಿವಾಸಿ 63 ವರ್ಷದ ಕಮಲ್ ಸಿಂಗ್ ಜಮ್ವಾಲ್ ಎಂದು ಗುರುತಿಸಲಾದ ಆರೋಪಿಯನ್ನು ಸದ್ಯ ಬಂಧಿಸಲಾಗಿದೆ. ಕಳೆದ 20 ವರ್ಷಗಳಿಂದ ಅಬ್ದುಲ್ಲಾ ಅವರನ್ನು ಕೊಲ್ಲಲು ಅವಕಾಶಕ್ಕಾಗಿ ಕಾಯುತ್ತಿದ್ದೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ.

ದಾಳಿಯನ್ನು ತೀವ್ರವಾಗಿ ಖಂಡಿಸಿದ ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್, “ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿಯನ್ನು ಹೊಂದಿರುವವರನ್ನು ಹೊಣೆಗಾರರನ್ನಾಗಿ ಮಾಡಬೇಕು” ಎಂದು ಹೇಳಿದೆ. ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ ಈ ಘಟನೆಯನ್ನು ಆಘಾತಕಾರಿ ಎಂದು ಹೇಳಿದ್ದಾರೆ.

“ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮತ್ತು ಇತರ ಹಿರಿಯ ನಾಯಕರ ಮೇಲಿನ ಗುಂಡಿನ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ. ಇಂತಹ ಹಿಂಸಾಚಾರಗಳು ಪ್ರದೇಶದಲ್ಲಿನ ಪ್ರಸ್ತುತ ಭದ್ರತಾ ಸನ್ನಿವೇಶದ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕುತ್ತವೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುಲಾಮ್ ಅಹ್ಮದ್ ಮಿರ್ ಕೂಡಾ ಈ ಘಟನೆಯನ್ನು ಖಂಡಿಸಿದ್ದಾರೆ. “ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಘಟನೆಗಳು ದುರದೃಷ್ಟಕರ. ಇದು ಹೇಗೆ ಸಂಭವಿಸಿತು ಎಂಬುದರ ಬಗ್ಗೆ ತನಿಖೆಯಾಗಬೇಕು” ಎಂದಿದ್ದಾರೆ.

ಇನ್ನು ಬಿಜೆಪಿ “ಹಿಂಸಾಚಾರದ ಮೂಲಕ ರಾಜಕೀಯ ನಾಯಕರನ್ನು ಗುರಿಯಾಗಿಸುವುದು ಸ್ವೀಕಾರಾರ್ಹವಲ್ಲ. ಈ ಬಗ್ಗೆ ಸಂಪೂರ್ಣ ತನಿಖೆ ನಡೆಯಬೇಕು” ಎಂದು ಆಗ್ರಹಿಸಿದೆ. ಬಿಜೆಪಿ ನಾಯಕ ವಕೀಲ ಸುನಿಲ್ ಸೇಥಿ ಬಿಜೆಪಿ ವಕ್ತಾರರ ಸಭೆಯಲ್ಲಿ ಮಾತನಾಡಿ, “ಪ್ರಜಾಪ್ರಭುತ್ವ ಸಮಾಜದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಸಂವಾದ ಮತ್ತು ಸಾಂವಿಧಾನಿಕ ವಿಧಾನಗಳ ಮೂಲಕ ಪರಿಹರಿಸಬೇಕು” ಎಂದು ಹೇಳಿದ್ದಾರೆ.

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕೂಡ ಕಳವಳ ವ್ಯಕ್ತಪಡಿಸಿದ್ದು, ಈ ಕೃತ್ಯ ಖಂಡನಾರ್ಹ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...