ಪೊಂಗಲ್ ಹಬ್ಬ | ಪ್ರತಿ ಪಡಿತರ ಚೀಟಿಗೆ 3,000 ರೂ. ಸಹಾಯಧನ ಘೋಷಿಸಿದ ತಮಿಳು ಸರ್ಕಾರ

Date:

ತಮಿಳುನಾಡಿನಲ್ಲಿ ಜನವರಿ 2ನೇ ವಾರ ಪೊಂಗಲ್ ಹಬ್ಬ ನಡೆಯಲಿದೆ. ಹಬ್ಬಕ್ಕೂ ಮುನ್ನ, ಸರ್ಕಾರವು ಎಲ್ಲ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ತಲಾ 3,000 ರೂ. ನಗದು ಉಡುಗೊರೆ ಘೋಷಿಸಿದೆ.

ಶ್ರೀಲಂಕಾದ ತಮಿಳು ಪುನರ್ವಸತಿ ಶಿಬಿರಗಳಲ್ಲಿ ವಾಸಿಸುವ ಕುಟುಂಬಗಳು ಸೇರಿದಂತೆ ಎಲ್ಲ ಪಡಿತರ ಚೀಟಿದಾರ ಕುಟುಂಬಗಳಿಗೆ 3,000 ರೂಪಾಯಿ ನಗದು ಸಹಾಯವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಿಳಿಸಿದ್ದಾರೆ.

ಅಧಿಕೃತ ಮೂಲಗಳ ಪ್ರಕಾರ, ರಾಜ್ಯದಲ್ಲಿ ಸುಮಾರು 2.23 ಕೋಟಿ ಪಡಿತರ ಚೀಟಿದಾರರು ಮತ್ತು ಪುನರ್ವಸತಿ ಶಿಬಿರಗಳಲ್ಲಿ ಸುಮಾರು 19,000 ಕುಟುಂಬಗಳು ವಾಸಿಸುತ್ತಿದ್ದಾರೆ. ಅವರೆಲ್ಲರಿಗೂ ನಗದು ಉಡುಗೊರೆ ನೀಡಲಾಗುತ್ತದೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2014ರಲ್ಲಿ ಪೊಂಗಲ್ ಹಬ್ಬದ ಸಮಯದಲ್ಲಿ ಪಡಿತರ ಚೀಟಿದಾರರಿಗೆ ನಗದು ಉಡುಗೊರೆ ನೀಡುವುದನ್ನು ಪರಿಚರಿಸಲಾಯಿತು. ಆರಂಭದಲ್ಲಿ, ಪ್ರತಿ ವರ್ಷದ ಹಬ್ಬದ ಸಮಯದಲ್ಲಿ 100 ರೂ. ನೀಡಲಾಗುತ್ತಿತ್ತು. 2019ರಲ್ಲಿ 1,000 ರೂ.ಗೆ ಹೆಚ್ಚಿಸಲಾಗಿತ್ತು. 2021ರಲ್ಲಿ ಅಧಿಕಾರಕ್ಕೆ ಬಂದ ಡಿಎಂಕೆ ಸರ್ಕಾರ, ನಗದು ಹಣವನ್ನು 3,000 ರೂ.ಗೆ ಏರಿಕೆ ಮಾಡಿತು.

ಈ ವರ್ಷ, ರಾಜ್ಯ ಸರ್ಕಾರವು ಪೊಂಗಲ್ ಉಡುಗೊರೆ ಯೋಜನೆಯ ಅನುಷ್ಠಾನಕ್ಕಾಗಿ 6,936.18 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. ಪಡಿತರ ಅಂಗಡಿ ನೌಕರರ ಮೂಲಕ ನಗದು ಸಹಾಯವನ್ನು ವಿತರಿಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.

ಈ ಲೇಖನ ಓದಿದ್ದೀರಾ?:2025ರಲ್ಲಿ ಧರ್ಮಾಧಾರಿತ ಹಿಂಸಾಚಾರ, ಗುಂಪು ದಾಳಿಗಳು ಹೆಚ್ಚಳ !- ವರದಿ

ನಗದು ಉಡುಗೊರೆಯ ಜೊತೆಗೆ, ಫಲಾನುಭವಿಗಳಿಗೆ ತಲಾ 1 ಕೆ.ಜಿ ಹಸಿ ಅಕ್ಕಿ, ಸಕ್ಕರೆ ಹಾಗೂ ಒಂದು ಕಬ್ಬನ್ನು ನೀಡಲಾಗುತ್ತದೆ. ಅಲ್ಲದೆ, 1.76 ಕೋಟಿ ಪಡಿತರ ಚೀಟಿದಾರರಿಗೆ ಉಚಿತ ಧೋತಿ ಮತ್ತು ಸೀರೆಗಳನ್ನು ನೀಡಲಾಗುತ್ತದೆ ಎಂದು ಸರ್ಕಾರ ಹೇಳಿದೆ.

ಮೂಲತಃ, ಪೊಂಗಲ್ ಸಮಯದಲ್ಲಿ ನಗದು ಉಡುಗೊರೆ ನೀಡುವ ಪದ್ಧತಿಯನ್ನು ಮೊದಲು 1990ರಲ್ಲಿ ಅಂದಿನ ಮುಖ್ಯಮಂತ್ರಿ ಎಂ. ಕರುಣಾನಿಧಿ ಪರಿಚಯಿಸಿದರು. ಅವರು ಪಿಂಚಣಿದಾರರಿಗೆ 100 ರೂ. ಘೋಷಿಸಿದ್ದರು. ಇದನ್ನು, 1998 ರಲ್ಲಿ 150 ರೂ.ಗೆ ಹೆಚ್ಚಿಸಲಾಯಿತು. 2014ರಲ್ಲಿ ಅಂದಿನ ಮುಖ್ಯಮಂತ್ರಿ ಜೆ ಜಯಲಲಿತಾ ಅವರು ಈ ಯೋಜನೆಯನ್ನು ಪಡಿತರದಾರರಿಗೆ ವಿಸ್ತರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...