ಉದ್ಯಮಿಗೆ ಲೈಂಗಿಕ ಕಿರುಕುಳ-ಹತ್ಯೆ ಆರೋಪ; ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ!

Date:

ಉದ್ಯಮಿಯೊಬ್ಬರ ಹತೈ ಪ್ರಕರಣದಲ್ಲಿ ಆರೋಪಿಯಾಗಿರುವ ಅಖಿಲ ಭಾರತ ಹಿಂದೂ ಮಹಾಸಭಾ (ABHM) ನಾಯಜಿ ಪೂಜಾ ಶಕುನ್ ಪಾಂಡೆ ವಿರುದ್ದ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಆಕೆ ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಆಕೆಯನ್ನು ರಾಜಸ್ಥಾನದ ಭರತ್‌ಪುರದಲ್ಲಿ ಬಂಧಿಸಲಾಗಿದೆ.

ಉತ್ತರ ಪ್ರದೇಶದ ಅಲಿಗಢದಲ್ಲಿ ಉದ್ಯಮಿ ಅಭಿಷೇಕ್ ಗುಪ್ತಾ ಅವರನ್ನು ಸೆಪ್ಟೆಂಬರ್ 26ರಂದು ಹತ್ಯೆ ಮಾಡಲಾಗಿತ್ತು. ಹತ್ಯೆಗೆ ಪೂಜಾ ಶಕುನ್ ಪಾಂಡೆಯೇ ರುವಾರಿ ಎಂದು ಆರೋಪಿಸಲಾಗಿದೆ. ಇದೀಗ, ಅಭಿಷೇಕ್ ಅವರಿಗೆ ಪೂಜಾ ಪಾಂಡೆ ಲೈಂಗಿಕ ಕಿರುಕುಳ ನೀಡಿದ್ದರು ಎಂಬುದು ಬೆಳಕಿಗೆ ಬಂದಿದೆ.

ದ್ವಿಚಕ್ರ ವಾಹನ ಶೋರೂಂ ಮಾಲೀಕ ಅಭಿಷೇಕ್ ಗುಪ್ತಾ ಅವರು ಹತ್ರಾಸ್‌ಗೆ ತೆರಳಲು ಅಲಿಗಢದಲ್ಲಿ ಬಸ್ ಹತ್ತುವಾಗ, ಅವರನ್ನು ರೋರಾವರ್ ಪ್ರದೇಶದಲ್ಲಿ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಈ ಹತ್ಯೆಗೆ ಪೂಜಾ ಶಕುನ್ ಪಾಂಡೆ ಮತ್ತು ಆಕೆಯ ಪತಿ, ABHM ವಕ್ತಾರ ಅಶೋಕ್ ಪಾಂಡೆ ರೂವಾರಿಗಳಾಗಿದ್ದು, ಮೊಹಮ್ಮದ್ ಫಜಲ್ ಮತ್ತು ಆಸಿಫ್ ಎಂಬ ಇಬ್ಬರು ಶೂಟರ್‌ಗಳಿಗೆ ಸುಫಾರಿ ನೀಡಿದ್ದರು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲಿಗಢದ ರೋರವರ್ ಪೊಲೀಸ್ ಠಾಣೆಯಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ಆರಂಭಿಸಿದ್ದರು.

ಆರೋಪಿ ಪೂಜಾ ಪಾಂಡೆ ಕೆಲವು ದಿನಗಳಿಂದ ಅಭಿಷೇಕ್‌ಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಆಕೆಯಿಂದ ದೂರ ಉಳಿಯಲು ಅಭಿಷೇಕ್ ಮುಂದಾಗಿದ್ದರಿಂದ, ಅವರನ್ನು ಕೊಲ್ಲಲು ಪೂಜಾ ಪಾಂಡೆ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿದೆ. ಜೊತೆಗೆ, ಇಬ್ಬರ ನಡುವಿನ ವ್ಯವಹಾರಗಳೂ ಹತ್ಯೆಗೆ ಕಾರಣ ಇರಬಹುದು ಎಂದು ಪೊಲೀಸರು ಅನುಮಾನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...