ಪೋರ್ಷೆ ಕಾರು ಅಪಘಾತ ಪ್ರಕರಣ | ರಕ್ತದ ಮಾದರಿ, ಸಾಕ್ಷ್ಯ ನಾಶ ಆರೋಪ; ಇಬ್ಬರು ವೈದ್ಯರ ಬಂಧನ

Date:

17 ವರ್ಷದ ಬಾಲಕನಿಂದ ಸಂಭವಿಸಿದ ಕಾರು ಅಪಘಾತ ಪ್ರಕರಣದಲ್ಲಿ ರಕ್ತದ ಮಾದರಿ ಮತ್ತು ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಪುಣೆಯ ಸಸೂನ್ ಜನರಲ್ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರಲ್ಲಿ ಆಸ್ಪತ್ರೆಯ ಫೋರೆನ್ಸಿಕ್ ವಿಭಾಗದ ಮುಖ್ಯಸ್ಥರೂ ಸೇರಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

“ಪ್ರಕರಣದಲ್ಲಿ ಆರೋಪಿ ಬಾಲಕನ ರಕ್ತದ ಮಾದರಿಯನ್ನು ತಿರುಚಿ ಮತ್ತು ಸಾಕ್ಷ್ಯ ನಾಶ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಡಾ. ಅಜಯ್ ತಾವರೆ ಮತ್ತು ಶ್ರೀಹರಿ ಹಾರ್ನರ್ ಬಂಧಿತ ಆರೋಪಿಗಳು” ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇ 19ರ ಮುಂಜಾನೆ ಇಬ್ಬರು ಐಟಿ ಉದ್ಯೋಗಿಗಳು ತೆರಳುತ್ತಿದ್ದ ಬೈಕ್‌ಗೆ ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಅತಿ ವೇಗದ ಪೋರ್ಷೆ ಕಾರು ಢಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಇಬ್ಬರೂ ಐಟಿ ಉದ್ಯೋಗಿಗಳು ಸಾವನ್ನಪ್ಪಿದರು. ಅಪಘಾತವಾದ ಸಮಯದಲ್ಲಿ ಬಾಲಕ ಮದ್ಯಪಾನ ಮಾಡಿದ್ದನ್ನು ಎಂದು ಪೊಲೀಸರು ಹೇಳುತ್ತಾರೆ.

ಬಾಲಕನಿಗೆ ಜುವೆನೈಲ್ ಜಸ್ಟಿಸ್ ಬೋರ್ಡ್ ಜಾಮೀನು ನೀಡಿತ್ತು. ಬಳಿಕ, ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗಿತ್ತು. ನಂತರ, ಜೂನ್ 5ರವರೆಗೆ ಆತನನ್ನು ‘ಅಬ್ಸರ್ವೇಷನ್‌ ಹೋಮ್‌’ಗೆ ಕಳಿಸಲಾಗಿದೆ.

ಅಪಘಾತಕ್ಕೆ ಸಂಬಂಧಿಸಿದಂತೆ ಆರೋಪಿ ಬಾಲಕನ ತಂದೆ ಮತ್ತು ಆತನ ಅಜ್ಜನನ್ನು ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...