ಪುರುಷತ್ವ ಪರೀಕ್ಷೆಗೆ ರಕ್ತದ ಮಾದರಿ ಬಳಸಿ, ಸ್ತ್ರೀಯರಿಗೆ ಎರಡು ಬೆರಳ ಪರೀಕ್ಷೆ ನಿಲ್ಲಿಸಿ: ಮದ್ರಾಸ್‌ ಹೈಕೋರ್ಟ್

Date:

ವಿಜ್ಞಾನವು ಮುಂದುವರಿದಿದ್ದು, ಪುರುಷತ್ವ ಪರೀಕ್ಷೆಗೆ ವೀರ್ಯ ಮಾದರಿಗಳನ್ನು ಸಂಗ್ರಹಿಸುವ ಬದಲು ಆರೋಪಿಯ ರಕ್ತದ ಮಾದರಿಯನ್ನು ಬಳಸಿಕೊಂಡು ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು ರೂಪಿಸಿ ಪರೀಕ್ಷಿಸಬೇಕು ಎಂದು ಮದ್ರಾಸ್‌ ಹೈಕೋರ್ಟ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಅಲ್ಲದೆ ಸ್ತ್ರೀಯರಿಗೆ ಎರಡು ಬೆರಳಿನ ಪರೀಕ್ಷೆಯನ್ನು ಸ್ಥಗಿತಗೊಳಿಸುವುದನ್ನು ಖಚಿತಪಡಿಸಿಕೊಳ್ಳುವ ಅಗತ್ಯವನ್ನು ಕೋರ್ಟ್‌ ಒತ್ತಿ ಹೇಳಿತು.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಮತ್ತು ಬಾಲಾಪರಾಧಿ ನ್ಯಾಯ (ಆರೈಕೆ ಮತ್ತು ರಕ್ಷಣೆ) ಕಾಯ್ದೆಯ ಅನುಷ್ಠಾನದ ಮೇಲೆ ನಿಗಾ ವಹಿಸಲು ವಿಶೇಷವಾಗಿ ರಚಿಸಲಾಗಿದ್ದ ನ್ಯಾಯಮೂರ್ತಿಗಳಾದ ಎನ್ ಆನಂದ್ ವೆಂಕಟೇಶ್ ಮತ್ತು ಸುಂದರ್ ಮೋಹನ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಜುಲೈ 7 ರಂದು ಇತ್ತೀಚೆಗೆ ಹೊರಡಿಸಿದ ಆದೇಶದಲ್ಲಿ ನಿರ್ದೇಶನ ನೀಡಿದೆ.

ಮದ್ರಾಸ್‌ ಹೈಕೋರ್ಟ್ ಪೀಠವು ಅಪ್ರಾಪ್ತ ಬಾಲಕಿ ಮತ್ತು ಬಾಲಕನನ್ನು ಒಳಗೊಂಡ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎರಡು ಬೆರಳಿನ ಪರೀಕ್ಷೆ ಮತ್ತು ಪುರಾತನವಾದ ಪುರುಷತ್ವ ಸಾಮರ್ಥ್ಯ ಪರೀಕ್ಷೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ನಾವು ಬಯಸುತ್ತೇವೆ. ಈ ಬಗ್ಗೆ ವಿವಿಧ ವಲಯಗಳ ಪೊಲೀಸ್ ಮಹಾನಿರೀಕ್ಷಕರಿಗೆ ಸೂಚನೆ ನೀಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನವಿದೆ. ಜನವರಿ 1, 2023 ರಿಂದ ಪ್ರಾರಂಭವಾಗುವ ಎಲ್ಲ ಪ್ರಕರಣಗಳಲ್ಲಿ ಲೈಂಗಿಕ ಅಪರಾಧಗಳನ್ನು ಒಳಗೊಂಡು ವೈದ್ಯಕೀಯ ವರದಿಗಳನ್ನು ತಯಾರಿಸಲಾಗುತ್ತದೆಯೆ ಮತ್ತು ನೀಡಲಾದ ಯಾವುದೇ ವರದಿಯು ಎರಡು ಬೆರಳಿನ ಪರೀಕ್ಷೆಯನ್ನು ಉಲ್ಲೇಖಿಸುತ್ತದೆಯೇ ಎಂದು ಪರಿಶೀಲಿಸಿ” ಎಂದು ಕೋರ್ಟ್‌ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಇಡಿ ಮುಖ್ಯಸ್ಥ ಸಂಜಯ್ ಮಿಶ್ರಾ ಸೇವಾ ವಿಸ್ತರಣೆ ಕಾನೂನುಬಾಹಿರ ಎಂದ ಸುಪ್ರೀಂ ಕೋರ್ಟ್

“ಅಂತೆಯೇ, ಲೈಂಗಿಕ ಅಪರಾಧ ಪ್ರಕರಣಗಳಲ್ಲಿ ಆರೋಪಿಯ ಪುರುಷತ್ವ ಸಾಮರ್ಥ್ಯ ಪರೀಕ್ಷೆ ಮಾಡಲಾಗುತ್ತದೆ. ಇಂಥ ಪ್ರಕರಣಗಳಲ್ಲಿ ಆರೋಪಿಯಿಂದ ವೀರ್ಯವನ್ನು ಸಂಗ್ರಹಿಸಲಾಗುತ್ತದೆ. ಇದು ಹಳೆಯ ವಿಧಾನವಾಗಿದೆ. ಈಗ ವಿಜ್ಞಾನವು ಸಾಕಷ್ಟು ಪ್ರಗತಿ ಸಾಧಿಸಿದೆ. ಪುರುಷತ್ವ ಪರೀಕ್ಷೆಗಾಗಿ ರಕ್ತದ ಮಾದರಿ ಸಂಗ್ರಹಿಸಿ ಪುರುಷತ್ವ ಪರೀಕ್ಷೆ ಮಾಡಲು ಸಾಧ್ಯವಿದೆ. ಇಂತಹ ಸುಧಾರಿತ ತಂತ್ರಗಳನ್ನು ವಿಶ್ವದಾದ್ಯಂತ ಅನುಸರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ನಾವು ಕೂಡ ಈ ತಂತ್ರವನ್ನು ಅಳವಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು ರೂಪಿಸಬೇಕು’ ಎಂದು ನ್ಯಾಯಪೀಠವು ನಿರ್ದೇಶನ ನೀಡಿತು.

ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಆಗಸ್ಟ್ 11ಕ್ಕೆ ಮುಂದೂಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...