ಆರ್‌ಎಸ್‌ಎಸ್ ಕುರಿತು ಸುಳ್ಳು ಹೇಳಿಕೆ ವೈರಲ್: ದೂರು ದಾಖಲಿಸಿದ ಪ್ರಕಾಶ್ ರಾಜ್

Date:

ಆರ್‌ಎಸ್‌ಎಸ್‌ ಕುರಿತಾಗಿ ನಟ ಪ್ರಕಾಶ್ ರಾಜ್ ಅವರು ನೀಡಿದ ಹೇಳಿಕೆ ಎಂದು ಸುಳ್ಳು ಹೇಳಿಕೆಯ ಪೋಸ್ಟರ್ ವೈರಲ್ ಆಗುತ್ತಿದ್ದು, ಅದರ ವಿರುದ್ಧವಾಗಿ ನಟ ಪ್ರಕಾಶ್ ರಾಜ್ ದೂರು ದಾಖಲಿಸಿದ್ದಾರೆ.

“ಇಂಡೋನೇಷ್ಯಾದಲ್ಲಿ ಶೇಕಡ 90ರಷ್ಟು ಮುಸ್ಲಿಮರು ಇದ್ದಾರೆ. ಶೇಕಡ 2ರಷ್ಟು ಹಿಂದೂಗಳಿದ್ದಾರೆ. ಅಲ್ಲಿ ಒಟ್ಟಾಗಿ 11 ಸಾವಿರ ದೇವಾಲಯಗಳಿದೆ. ಅಲ್ಲಿ ಯಾವುದೇ ದಂಗೆಗಳಾದ ಬಗ್ಗೆ ನಾನು ಕೇಳಿಲ್ಲ. ಯಾಕೆಂದರೆ ಅಲ್ಲಿ ಆರ್‌ಎಸ್‌ಎಸ್‌ ಇಲ್ಲ” ಎಂದು ಪ್ರಕಾಶ್ ರಾಜ್ ಹೇಳಿರುವುದಾಗಿ ಮೇಘ್ ಅಪ್‌ಡೇಟ್ಸ್ ಎಂಬ ಎಕ್ಸ್‌ ಖಾತೆಯಲ್ಲಿ ಪೋಸ್ಟರ್ ಒಂದನ್ನು ಹಂಚಿಕೊಳ್ಳಲಾಗಿದೆ.

ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಸ್ಪಷ್ಟನೆ ನೀಡಿರುವ ಪ್ರಕಾಶ್ ರಾಜ್, “ಮೇಘ್‌ ಅಪ್‌ಡೇಟ್ಸ್‌ ಈ ಪೋಸ್ಟರ್ ಮಾಡಿರುವುದು ನೀವೇ ಆಗಿದ್ದರೆ ಅಥವಾ ಬೇರೆ ಯಾರಾದರೂ ಮಾಡಿದ್ದರೆ ಇದು ನಿಮ್ಮ ಹೇಳಿಕೆ ಎಂದು ಬರೆದುಕೊಳ್ಳಿ. ಯಾಕೆಂದರೆ ಇದು ನನ್ನ ಹೇಳಿಕೆಯಲ್ಲ. ನಿಮ್ಮ ಹೇಳಿಕೆಗೆ ನನ್ನ ಹೆಸರನ್ನು ಹಾಕಬೇಡಿ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ಅದಾದ ಬಳಿಕ ಬುಧವಾರ ಎಕ್ಸ್‌ ಪೋಸ್ಟ್ ಮಾಡಿ ಈ ಸುಳ್ಳು ಹೇಳಿಕೆಗಳ ವಿರುದ್ಧ ದೂರು ದಾಖಲಿಸಿರುವುದಾಗಿ ಪ್ರಕಾಶ್ ರಾಜ್ ಹೇಳಿದ್ದಾರೆ.

“ಕೆಲವು ಸಾಮಾಜಿಕ ಮಾಧ್ಯಮ ಖಾತೆಗಳಿಂದ ನನ್ನ ಬಗ್ಗೆ ತಪ್ಪು ಮಾಹಿತಿ ಮತ್ತು ಸುಳ್ಳು ಹೇಳಿಕೆಗಳನ್ನು ಹರಡಿರುವ ಬಗ್ಗೆ ನಾನು ಪೊಲೀಸರಿಗೆ ದೂರು ನೀಡಿದ್ದೇನೆ. ಕಾನೂನು ಈಗ ತನ್ನದೇ ಆದ ಕ್ರಮ ತೆಗೆದುಕೊಳ್ಳುತ್ತದೆ. ಈ ದ್ವೇಷದ ರಾಜಕಾರಣ ಮತ್ತು ವಾಟ್ಸಪ್ ಮತಾಂಧತೆಯು ನನ್ನ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ, ಸತ್ಯವನ್ನು ಮಾತನಾಡುವುದನ್ನು ತಡೆಯಲೂ ಸಾಧ್ಯವಿಲ್ಲ” ಎಂದು ಪ್ರಕಾಶ್ ರಾಜ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...