ಬಿಹಾರದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಜನ ಸುರಾಜ್ ಪಕ್ಷದ ಪ್ರಶಾಂತ್ ಕಿಶೋರ್ ಸ್ಪಷ್ಟನೆ

Date:

ಚುನಾವಣಾ ತಂತ್ರಜ್ಞನಿಂದ ರಾಜಕಾರಣಿಯಾಗಿ ಬದಲಾಗಿರುವ ಪ್ರಶಾಂತ್ ಕಿಶೋರ್ ಅವರು ಬಿಹಾರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ತಮ್ಮ ‘ಜನ ಸುರಾಜ್’ ಪಕ್ಷದ ಸಂಘಟನಾ ಕಾರ್ಯಗಳತ್ತ ಗಮನ ಹರಿಸಲು ತೀರ್ಮಾನಿಸಿರುವುದಾಗಿ ತಿಳಿಸಿದ್ದಾರೆ.

ನಿನ್ನೆ ರಾತ್ರಿ ಪ್ರಕಟವಾದ ಅಭ್ಯರ್ಥಿಗಳ ಪಟ್ಟಿಯಲ್ಲಿ ರಾಘೋಪುರ ಕ್ಷೇತ್ರದಿಂದ ಚಂಚಲ್ ಸಿಂಗ್ ಅವರನ್ನು ಹಾಗೂ ಕಾರ್ಗಹಾರ್ ಕ್ಷೇತ್ರದಿಂದ ರಿತೇಶ್ ರಂಜನ್ (ಪಾಂಡೆ) ಅವರನ್ನು ಜನ ಸುರಾಜ್ ಪಕ್ಷ ಪ್ರಕಟಿಸಿತ್ತು. ಇದರಿಂದಲೇ ಕಿಶೋರ್ ಅವರು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸದಿರುವುದು ದೃಢಪಟ್ಟಿತು.

ರಾಘೋಪುರ ಕ್ಷೇತ್ರವು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಕ್ಷೇತ್ರವಾಗಿದ್ದು, ಅಲ್ಲಿ ಕಿಶೋರ್ ಸ್ಪರ್ಧಿಸಿದ್ದರೆ ಕಠಿಣ ಹೋರಾಟ ಎದುರಿಸಬೇಕಾಗಿತ್ತು. ಪಕ್ಷದ ಪ್ರಮುಖ ಮುಖವಾಗಿರುವುದರಿಂದ ಅವರು ಒಂದು ಕ್ಷೇತ್ರಕ್ಕೆ ಸೀಮಿತವಾಗದೆ ರಾಜ್ಯದಾದ್ಯಂತ ಪ್ರಚಾರ ಮತ್ತು ಸಂಘಟನೆಗೆ ಗಮನ ಹರಿಸುವುದು ಸೂಕ್ತ ಎಂದು ಪಕ್ಷ ನಿರ್ಧರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪಟೇಲರನ್ನು ಹೈಜಾಕ್ ಮಾಡುವುದು ಆರ್‌ಎಸ್‌ಎಸ್‌ಗೆ ಸುಲಭವಲ್ಲ!

‘ಜನ ಸುರಾಜ್ ಪಕ್ಷದ ನಿರ್ಧಾರದಿಂದ ನಾನು ಸಂಘಟನಾ ಕಾರ್ಯಗಳತ್ತ ಸಂಪೂರ್ಣ ಗಮನ ಹರಿಸುತ್ತೇನೆ,’ ಎಂದು ಕಿಶೋರ್ ಹೇಳಿದರು. ಪಕ್ಷಕ್ಕೆ 150ಕ್ಕಿಂತ ಕಡಿಮೆ ಸ್ಥಾನಗಳು ಬಂದರೆ ಅದನ್ನು ‘ಸೋಲು’ ಎಂದು ಪರಿಗಣಿಸುವುದಾಗಿ ಅವರು ಘೋಷಿಸಿದರು.

ಎನ್‌ಡಿಎ ಸರ್ಕಾರ ಸೋಲುವುದು ಖಚಿತ ಎಂದು ಕಿಶೋರ್ ಇದೇ ಸಂದರ್ಭದಲ್ಲಿ ತಿಳಿಸಿದರು. ನೀತೀಶ್ ಕುಮಾರ್ ನೇತೃತ್ವದ ಜೆಡಿಯು ಈ ಬಾರಿ 25 ಸ್ಥಾನಗಳಿಗೂ ತಲುಪುವುದಿಲ್ಲ. ಎನ್‌ಡಿಎ ಸರ್ಕಾರ ಹಿನ್ನಡೆಯಲ್ಲಿದೆ ಮತ್ತು ನೀತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿ ಆಗುವ ಸಾಧ್ಯತೆ ಇಲ್ಲ ಎಂದರು.

ಬಿಹಾರ ವಿಧಾನಸಭೆಯ 243 ಸ್ಥಾನಗಳಿಗೆ ಮತದಾನ ನವೆಂಬರ್ 6 ಮತ್ತು 11ರಂದು ನಡೆಯಲಿದ್ದು, ಫಲಿತಾಂಶ ನವೆಂಬರ್ 14ರಂದು ಪ್ರಕಟವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...