ಉತ್ತರ ಪ್ರದೇಶ | ಲಖಿಂಪುರ ಖೇರಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ

Date:

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದ ಪ್ರಮುಖ ಆರೋಪಿ, ದರೋಡೆಕೋರನನ್ನು ಸೋಮವಾರ ಮುಂಜಾನೆ ಸುಲ್ತಾನ್‌ಪುರ ಮತ್ತು ಲಖಿಂಪುರ ಖೇರಿ ಪೊಲೀಸರು ಎನ್‌ಕೌಂಟರ್‌ ನಡೆಸಿ ಹತ್ಯೆಗೈದಿದ್ದಾರೆ.

ಗ್ಯಾಂಗ್‌ಸ್ಟರ್ ತಾಲಿಬ್ ಅಲಿಯಾಸ್ ಅಜಮ್ ಖಾನ್ ಬಗ್ಗೆ ಮಾಹಿತಿ ನೀಡಿದರೆ 1 ಲಕ್ಷ ರೂ. ಬಹುಮಾನವನ್ನು ಘೋಷಿಸಲಾಗಿತ್ತು. ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 17 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ತಾಲಿಬ್ ಮತ್ತು ಆತನ ಇಬ್ಬರು ಸಹಚರರಾದ ಸಲ್ಮಾನ್ ಮತ್ತು ಮುಖ್ತಾರ್ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | 2025ರಲ್ಲಿ 2,500ಕ್ಕೂ ಹೆಚ್ಚು ಎನ್‌ಕೌಂಟರ್‌ಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಸೆಂಬರ್ 15ರಂದು ಬೆಳಿಗ್ಗೆ 6.30ರ ಸುಮಾರಿಗೆ ಇಬ್ಬರು ಬಾಲಕಿಯರು ತಮ್ಮ ಸೈಕಲ್‌ನಲ್ಲಿ ಟ್ಯೂಷನ್‌ಗೆ ಹೋಗುತ್ತಿದ್ದಾಗ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಸಂತ್ರಸ್ತ ಬಾಲಕಿಯರ ಪೋಷಕರು ಸಲ್ಲಿಸಿದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಈ ಹಿಂದೆ ಆರೋಪಿಗಳಾದ ಸಲ್ಮಾನ್ ಮತ್ತು ಮುಖ್ತಾರ್ ಕಾಲುಗಳಿಗೆ ಗುಂಡು ಹಾರಿಸಿ ಬಂಧಿಸಲಾಗಿತ್ತು.

ಇವರಿಬ್ಬರು ನೀಡಿದ ಸುಳಿವಿನ ಆಧಾರದಲ್ಲಿ ತಾಲಿಬ್ ಬಂಧನ ಕಾರ್ಯಾಚರಣೆ ನಡೆಸಲಾಗಿತ್ತು, ಈ ವೇಳೆ ಆತ ಪೊಲೀಸರ ಮೇಲೆ ಗುಂಡು ಹಾರಿಸಿದ್ದು ಈ ವೇಳೆ ಎನ್‌ಕೌಂಟರ್‌ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ಎನ್‌ಕೌಂಟರ್‌ ಪ್ರಕರಣಗಳು

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ತಜ್ಞರು ಮತ್ತು ವಿವಿಧ ಮಾನವ ಹಕ್ಕುಗಳ ಸಂಸ್ಥೆಗಳು ಭಾರತದಲ್ಲಿ ಹೆಚ್ಚುತ್ತಿರುವ ಎನ್‌ಕೌಂಟರ್ ಪ್ರಕರಣಗಳ ಬಗ್ಗೆ ಆತಂಕ ವ್ಯಕ್ತಪಡಿಸಿವೆ. ಇವು ಸಂವಿಧಾನದ 21ನೇ ವಿಧಿಯಡಿ (ಬದುಕುವ ಹಕ್ಕು) ದೊರೆಯುವ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ಭಯೋತ್ಪಾದನೆ-ನಿಗ್ರಹ ಕಾರ್ಯಾಚರಣೆ ಸೇರಿದಂತೆ ಯಾವುದೇ ಸಂದರ್ಭದಲ್ಲಿ, ಭಾರತ ಸರ್ಕಾರವು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನು ಮತ್ತು ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ವಿಶ್ವಸಂಸ್ಥೆಯು ಒತ್ತಾಯಿಸಿದೆ.

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಎನ್‌ಕೌಂಟರ್‌ ನಡೆಸಿ ಕಾಮುಕನ ಬಂಧನ

ಹಾಗೆಯೇ ಎನ್‌ಕೌಂಟರ್‌ಗಳಲ್ಲಿನ ಸಾವುಗಳ ಬಗ್ಗೆ ಸ್ವತಂತ್ರ ಮತ್ತು ಪಾರದರ್ಶಕ ತನಿಖೆ ನಡೆಸಬೇಕು ಎಂದು ವಿಶ್ವಸಂಸ್ಥೆ ಸೂಚಿಸಿದೆ. “ನಕಲಿ ಎನ್‌ಕೌಂಟರ್‌ಗಳು ನ್ಯಾಯಬಾಹಿರ ಹತ್ಯೆಗಳಾಗಿದ್ದು ಇವುಗಳನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲಾಗದು. ಅಪರಾಧದ ಸ್ವರೂಪ ಏನೇ ಇರಲಿ, ಕಾನೂನಿನ ಪ್ರಕ್ರಿಯೆಯನ್ನು ಮೀರುವುದು ಪ್ರಜಾಪ್ರಭುತ್ವದ ಅಡಿಪಾಯಕ್ಕೆ ಧಕ್ಕೆ ತರುತ್ತದೆ” ಎಂದು ಈ ಹಿಂದೆ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಪೀಠವು ಹೇಳಿತ್ತು. ಸುಪ್ರೀಂ ಕೋರ್ಟ್ ನೀಡಿದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಭಾರತ ಸರ್ಕಾರಕ್ಕೆ ವಿಶ್ವಸಂಸ್ಥೆ ಮನವಿ ಮಾಡಿದೆ.

ಇನ್ನು 2025ರಲ್ಲಿ ಉತ್ತರ ಪ್ರದೇಶದಲ್ಲಿ 2,500ಕ್ಕೂ ಹೆಚ್ಚು ಎನ್‌ಕೌಂಟರ್‌ಗಳನ್ನು ಪೊಲೀಸರು ನಡೆಸಿದ್ದಾರೆ. ಇವುಗಳಲ್ಲಿ 48 ಆರೋಪಿಗಳು ಸಾವನ್ನಪ್ಪಿದ್ದಾರೆ. 2017ರಿಂದ ಈವರೆಗೆ 266 ಆರೋಪಿಗಳು ಪೊಲೀಸ್ ಎನ್‌ಕೌಂಟರ್‌ಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಡಿಜಿಪಿ ರಾಜೀವ್ ಕೃಷ್ಣ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...