ಸಮನ್ಸ್‌ಗೆ ಹಾಜರಾಗಿದ್ದರೆ ಆರೋಪಿಯನ್ನು ಇ.ಡಿ ಬಂಧಿಸುವಂತಿಲ್ಲ: ಸುಪ್ರೀಂ ಕೋರ್ಟ್

Date:

ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಅಥವಾ ಪಿಎಂಎಲ್‌ಎ ಸೆಕ್ಷನ್‌ 19ರಡಿ ದೂರಿನ ಪರಿಗಣನೆ ತೆಗೆದುಕೊಂಡಿರುವ ವಿಶೇಷ ನ್ಯಾಯಾಲಯದ ಸಮನ್ಸ್‌ನಂತೆ ಹಾಜರಾಗಿದ್ದರೆ ಆರೋಪಿಯನ್ನು ಜಾರಿ ನಿರ್ದೇಶನಾಲಯ ಬಂಧಿಸುವುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಇಂತಹ ಪ್ರಕರಣಗಳಲ್ಲಿ ತನಿಖಾ ಸಂಸ್ಥೆಯು ಮೊದಲು ಕೋರ್ಟ್‌ನ ಅನುಮತಿ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

“ಅಪರಾಧ ಎಂದು ಪರಿಗಣಿಸಿದ ನಂತರ ದೂರಿನಲ್ಲಿ ಆರೋಪಿ ಎಂದು ತೋರಿಸಲಾದ ವ್ಯಕ್ತಿಯನ್ನು ಬಂಧಿಸಲು ಜಾರಿ ನಿರ್ದೇಶನಾಲಯ ಮತ್ತು ಅದರ ಅಧಿಕಾರಿಗಳು ಸೆಕ್ಷನ್ 19ರಡಿಯಲ್ಲಿ ಅಧಿಕಾರವನ್ನು ಚಲಾಯಿಸಲು ಅಶಕ್ತರಾಗಿರುತ್ತಾರೆ” ಎಂದು ನ್ಯಾಯಾಲಯ ತಿಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಿಎಂಎಲ್‌ಎ ಸೆಕ್ಷನ್ 19 ಕಾಯ್ದೆಯು ಇ.ಡಿ ಅಧಿಕಾರಿಗಳಿಗೆ “ವ್ಯಕ್ತಿಯನ್ನು ತಪ್ಪಿತಸ್ಥನೆಂದು ನಂಬಲು ಹೊಂದಿರುವ ದಾಖಲೆಯ(ಬರಹ ರೂಪದಲ್ಲಿ ದಾಖಲಿಸಿರಬೇಕು) ಆಧಾರದ ಮೇಲೆ” ಬಂಧಿಸಲು ಅನುಮತಿಸುತ್ತದೆ. ಬಹು ಮುಖ್ಯವಾಗಿ ಜಾರಿ ನಿರ್ದೇಶನಾಲಯವು ಬಂಧನದ ಕಾರಣವನ್ನು ಸಾಧ್ಯವಾದಷ್ಟು ಬೇಗ ಬಂಧಿಸುವ ವ್ಯಕ್ತಿಗೆ ತಿಳಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಿಂದೂ-ಮುಸ್ಲಿಮ್ ರಾಜಕಾರಣ ಮಾಡುವುದಿಲ್ಲವೇ ನಮ್ಮ ಪ್ರಧಾನಿ!

“ಈ ಪ್ರಕರಣಗಳಲ್ಲಿ ಆರೋಪಿಯ ಬಂಧನವಾಗದಿದ್ದರೆ ಜಾರಿ ನಿರ್ದೇಶನಾಲಯ ದೂರನ್ನು ದಾಖಲಿಸಬೇಕು. ನಂತರ ವಿಶೇಷ ನ್ಯಾಯಾಲಯ ಮೊದಲು ಸಮನ್ಸ್ ಜಾರಿಗೊಳಿಸಬೇಕು. ಸಮನ್ಸ್‌ಗೆ ಆರೋಪಿ ಉತ್ತರ ನೀಡಿದರೆ ಅವರು ಕಸ್ಟಡಿಯಲ್ಲಿದ್ದಾರೆ ಎಂದು ತಿಳಿಯಬಾರದು. ಆರೋಪಿಯನ್ನು ಕಸ್ಟಡಿಗೆ ಪಡೆಯಲು ಅಗತ್ಯವಾದರೆ ವಿಶೇಷ ನ್ಯಾಯಾಲಯದ ಅನುಮತಿಪಡೆಯಬೇಕು” ಎಂದು ನ್ಯಾಯಮೂರ್ತಿಗಳಾದ ಅಭಯ್‌ ಎಸ್‌ ಓಕಾ ಹಾಗೂ ಉಜ್ಜಲ್‌ ಭಯಾನ್‌ ಪೀಠ ತೀರ್ಪು ನೀಡಿದೆ.

ಕಸ್ಟಡಿಯ ವಿಚಾರಣೆ ಅಗತ್ಯವಿದೆ ಎಂದು ಕೋರ್ಟ್‌ಗೆ ಮನವರಿಕೆಯಾದರೆ ಮಾತ್ರ ನ್ಯಾಯಾಲಯ ಅನುಮತಿ ನೀಡುತ್ತದೆ ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿದೆ.

ಅಪರಾಧ ಪ್ರಕ್ರಿಯೆ ಸಂಹಿತೆಯ 70ನೇ ಸೆಕ್ಷನ್‌ ಅಡಿ ಬಂಧನದ ವಾರಂಟ್‌ ನೀಡಬೇಕೆಂದರೆ ಆರೋಪಿ ಸಮನ್ಸ್‌ಗೆ ಉತ್ತರ ನೀಡಲು ವಿಫಲನಾಗಿರಬೇಕು. ನಂತರದ ಸಂದರ್ಭದಲ್ಲಿ ಜಾಮೀನು ಸಹಿತ ವಾರಂಟ್‌ ಹೊರಡಿಸಬೇಕು.

ಜಾಮೀನಿಗೆ ಸಂಬಂಧಿಸಿದಂತೆ  ಆರೋಪಿ ತಪ್ಪಿತಸ್ಥನಲ್ಲ, ಬಿಡುಗಡೆಯಾದ ಬಳಿಕವೂ ಆತ ಅಂತಹ ಅಪರಾಧ ಮಾಡುವ ಸಾಧ್ಯೆಯಿಲ್ಲ ಎಂದು ಮನವರಿಕೆಯಾದರೆ ಜಾಮೀನು ಮಂಜೂರು ಮಾಡಬಹುದು ಎಂದು ಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...