ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ, ಎಎಪಿ ಸಂಸದರ ನಿವಾಸದ ಮೇಲೆ ದಾಳಿ: ಇ.ಡಿ ವಿರುದ್ಧ ಆಪ್ ಆಕ್ರೋಶ

Date:

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ, ಎಎಪಿ ರಾಜ್ಯಸಭಾ ಸದಸ್ಯ ಹಾಗೂ ಮತ್ತಿತ್ತರರ ನಾಯಕರ ನಿವಾಸಗಳು ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.

ಇ.ಡಿ ಅಧಿಕಾರಿಗಳು ದೆಹಲಿ, ಚಂಡೀಗಡ ಹಾಗೂ ವಾರಣಾಸಿಯ 12 ಸ್ಥಳಗಳ ಮೇಲೆ ಪರಿಶೋಧನೆ ನಡೆಸಲಾಗುತ್ತಿದೆ.

ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಬವ್ ಕುಮಾರ್, ರಾಜ್ಯಸಭಾ ಸದಸ್ಯ ಎನ್ ಡಿ ಗುಪ್ತ, ದೆಹಲಿಯ ಮಾಜಿ ಜಲಮಂಡಳಿಯ ಸದಸ್ಯ ಶಲಾಭ್ ಕುಮಾರ್ ದಾಳಿಗೊಳಗಾದ ನಾಯಕರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾಳಿಯ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ದೆಹಲಿ ಶಿಕ್ಷಣ ಸಚಿವೆ ಆತಿಶಿ,”ನಾವು ಎದರುವುದಿಲ್ಲ. ಅಕ್ರಮಗಳ ಬಗ್ಗೆ ಯಾವುದೇ ಪುರಾವೆಗಳು ದೊರಕಿಲ್ಲ. ತನಿಖಾ ಸಂಸ್ಥೆಯು ಅಬಕಾರಿ ನೀತಿ ಪ್ರಕರಣದ ತನಿಖೆಯಲ್ಲಿ ಕೆಲವೊಂದು ಪ್ರಕರಣಗಳಲ್ಲಿ ಸಾಕ್ಷಿಗಳ ಹೇಳಿಕೆಯ ಆಡಿಯೋ ದಾಖಲೆಗಳನ್ನು ಅಳಿಸಿಹಾಕಿದೆ. ಪ್ರಕರಣದ ಸಾಕ್ಷಿಗಳಲ್ಲಿ ಕೂಡ ಮೋಸ ನಡೆದಿರುವುದು ಕೂಡ ಬೆಳಕಿಗೆ ಬಂದಿದೆ. ತನಿಖಾ ಸಂಸ್ಥೆಯು ಸಿಸಿ ವಿಡಿಯೋಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಪ್ರಶ್ನಿಸುವುದಾಗಿ” ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

“ಎರಡು ವರ್ಷಗಳ ತನಿಖೆಯಲ್ಲಿ ಒಂದು ರೂಪಾಯಿಯನ್ನು ಕೂಡ ವಶಪಡಿಸಿಕೊಂಡಿಲ್ಲ. ಸಣ್ಣ ಪ್ರಮಾಣದ ಪುರಾವೆ ಕೂಡ ಇ.ಡಿಗೆ ದೊರಕಿಲ್ಲ. ಇವರ ಪೂರ್ಣ ತನಿಖೆ ಹೇಳಿಕೆಗಳ ಮೇಲೆ ಮಾತ್ರ ನಿಂತಿದ್ದು, ಪ್ರಕರಣದ ಸಾಕ್ಷಿಗಳಲ್ಲೂ ಕೂಡ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ವಂಚನೆಯನ್ನು ಮುಚ್ಚಿಡುವ ಸಲುವಾಗಿ ಇ.ಡಿ ಸಿಸಿ ಟಿವಿಯ ದಾಖಲೆಗಳನ್ನು ಅಳಿಸಿಹಾಕುತ್ತಿದೆ”ಎಂದು ಆತಿಶಿ ಹೇಳಿದರು.

“ಕಳೆದ 2 ವರ್ಷಗಳಲ್ಲಿ ಎಎಪಿ ನಾಯಕರನ್ನು ಬೆದರಿಸಲಾಗುತ್ತಿದೆ. ಅಬಕಾರಿ ಹಗರಣದಲ್ಲಿ ಕೆಲವೊಬ್ಬರು ಮನೆಗಳ ಮೇಲೆ ದಾಳಿ ನಡೆದಿದೆ. ಮತ್ತೂ ಕೆಲವರನ್ನು ಬಂಧಿಸಲಾಗಿದೆ.ಎರಡು ವರ್ಷಗಳ ದಾಳಿಯಲ್ಲಿ ಇ.ಡಿ ಒಂದು ರೂಪಾಯಿಯನ್ನು ವಶಪಡಿಸಿಕೊಂಡಿಲ್ಲ. ಸ್ಪಷ್ಟವಾದ ಸಾಕ್ಷ್ಯಗಳು ದೊರಕಿಲ್ಲ.ನ್ಯಾಯಾಲಯ ಕೂಡ  ಸಾಕ್ಷಿ, ಪುರಾವೆ ಒದಗಿಸಿ ಎಂದು ಇ.ಡಿಗೆ ಒತ್ತಾಯಿಸುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...