ತರಗತಿಯಲ್ಲೇ ವಿದ್ಯಾರ್ಥಿಯನ್ನು ವಿವಾಹವಾದ ಪ್ರಾಧ್ಯಾಪಕಿ; ತನಿಖೆಗೆ ಆದೇಶ

Date:

ಪ್ರಾಧ್ಯಾಪಕಿಯೊಬ್ಬರು ಕಾಲೇಜಿನ ತರಗತಿಯಲ್ಲಿಯೇ ತನ್ನ ವಿದ್ಯಾರ್ಥಿಯನ್ನು ವಿವಾಹವಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪಶ್ಚಿಮ ಬಂಗಾಳದ ನಾಡಿಯಾ ಪಟ್ಟಣದಲ್ಲಿರುವ ಹರಿಂಗತಾ ಕಾಲೇಜಿನಲ್ಲಿ ವಿದ್ಯಾರ್ಥಿಯನ್ನು ಪ್ರಾಧ್ಯಾಪಕಿ ತರಗತಿಯಲ್ಲೇ ಮದುವೆಯಾಗಿದ್ದಾರೆ ಎಂದು ವರದಿಗಳು ಪ್ರಕಟವಾಗಿವೆ. ಆದರೆ, ಇದು ನಿಜವಾದ ವಿವಾಹವಲ್ಲ ಎಂದು ಕಾಲೇಜು ಸ್ಪಷ್ಟಪಡಿಸಿದೆ. ಆದಾಗ್ಯೂ, ಘಟನೆಯ ಬಗ್ಗೆ ತನಿಖೆ ನಡೆಸಲು ಮೌಲಾನಾ ಅಬುಲ್ ಕಲಾಂ ಆಜಾದ್ ತಂತ್ರಜ್ಞಾನ ವಿಶ್ವವಿದ್ಯಾಲಯ ಆದೇಶಿಸಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಪಾಯಲ್ ಬ್ಯಾನರ್ಜಿ ಎಂದು ಹೇಳಲಾಗಿರುವ ಪ್ರಾಧ್ಯಾಪಕಿ ವಧುವಿನ ರೀತಿ ಉಡುಗೆಗಳನ್ನು ತೊಟ್ಟಿದ್ದು, ವಿದ್ಯಾರ್ಥಿಯೊಂದಿಗೆ ಹಾರ ಬದಲಿಸಿಕೊಂಡಿರುವುದು ಕಂಡುಬಂದಿದೆ. ಅಲ್ಲದೆ, ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿ ಪರಸ್ಪರ ಸಂಗಾತಿಗಳಾಗಿ ಒಪ್ಪಿಕೊಂಡು ಸಹಿ ಹಾಕಿರುವ ಕಾಲೇಜಿನ ಲೆಟರ್‌ಹೆಡ್‌ ಕೂಡ ವೈರಲ್ ಆಗಿದೆ.

ಆದರೆ, ಇದು ನಿಜವಾದ ಮದುವೆಯಲ್ಲ. ಶೈಕ್ಷಣಿಕ ಚಟುವಟಿಕೆಯ ಭಾಗವಾಗಿ, ಆಂತರಿಕ ಬಳಕೆಗಾಗಿ ನಡೆಸಲಾದ ನಾಟಕದ ಚಿತ್ರೀಕರಣವಾಗಿದೆ ಎಂದು ಕಾಲೇಜು ಆಡಳಿತ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲವು ವರ್ಷಗಳಿಂದ ಕಾಲೇಜಿನಲ್ಲಿ ಮನೋವಿಜ್ಞಾನ ಬೋಧನೆ ಮಾಡುತ್ತಿರುವ ಪಾಯಲ್ ಬ್ಯಾನರ್ಜಿ, “ಇದು ತಮ್ಮ ತರಗತಿಯಲ್ಲಿ ವಿವಾಹ ಪರಿಕಲ್ಪನೆಗಳ ಬಗ್ಗೆ ವಿವರಿಸಲು ರಚಿಸಲಾಗಿದ್ದ ‘ಮಾನಸಿಕ ನಾಟಕ’ವಾಗಿದೆ. ಆದರೆ, ಆ ವಿಡಿಯೋವನ್ನು ಹೊರಗೆ ಹರಿಬಿಟ್ಟು, ಅಪಪ್ರಚಾರ ಮಾಡಲಾಗುತ್ತಿದೆ” ಎಂದು ಹೇಳಿದ್ದಾರೆ.

ಆದಾಗ್ಯೂ, ತನಿಖೆಗೆ ಆದೇಶಿಸಿದ ಬಳಿಕ ಪ್ರಾಧ್ಯಾಪಕಿಯನ್ನು ರಜೆಯ ಮೇಲೆ ಕಳುಹಿಸಲಾಗಿದೆ. ಸರಿಯಾದ ತನಿಖೆ ನಡೆದು, ವರದಿ ಬಾರದೆ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...