ಪಶ್ಚಿಮ ಬಂಗಾಳ | ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

Date:

ಶನಿವಾರ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ 10 ವರ್ಷದ ಬಾಲಕಿಯ ಶವ ಪತ್ತೆಯಾಗಿದ್ದು, ಗ್ರಾಮಸ್ಥರು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ದೂರು ನೀಡಿದರೂ ಪೊಲೀಸರು ತಕ್ಷಣ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿ ಪ್ರತಿಭಟನೆ ನಡೆಸಿದ್ದು, ಗ್ರಾಮದಲ್ಲಿ ಉದ್ವಿಘ್ನತೆ ಉಂಟಾಗಿದೆ.

ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು ಮಹಿಸ್ಮರಿ ಪೊಲೀಸ್ ಔಟ್‌ಪೋಸ್ಟ್‌ಗೆ ಸ್ಥಳೀಯರು ಬೆಂಕಿ ಹಚ್ಚಿದ್ದಾರೆ. ಜೊತೆಗೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದೆ. ಹಾಗೆಯೇ ಠಾಣೆ ಹೊರಗೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಲಾಗಿದ್ದು, ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.

“ಬಾಲಕಿಯ ಕುಟುಂಬ ಸದಸ್ಯರು ಪ್ರದೇಶದ ಮಹಿಸ್ಮರಿ ಔಟ್‌ಪೋಸ್ಟ್‌ನಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಪೊಲೀಸರು ದೂರಿನ ಮೇರೆಗೆ ತಕ್ಷಣ ಕ್ರಮ ಕೈಗೊಂಡಿಲ್ಲ. ಆಗಸ್ಟ್‌ನಲ್ಲಿ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ವೈದ್ಯೆಯ ಶವ ಪತ್ತೆಯಾದ ನಂತರ ಪೊಲೀಸರು ಪ್ರತಿಕ್ರಿಯಿಸಿದ ರೀತಿಯಲ್ಲಿಯೇ ಇಲ್ಲಿಯೂ ಪ್ರತಿಕ್ರಿಯಿಸಿದ್ದಾರೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“”ನಮ್ಮ ಅಪ್ರಾಪ್ತ ಮಗಳ ಅತ್ಯಾಚಾರ ಮತ್ತು ಕೊಲೆ ಆರೋಪಿಗಳಿಗೆ ಶಿಕ್ಷೆಯಾಗುವವರೆಗೂ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ. ದೂರಿಗೆ ತಡವಾಗಿ ಪ್ರತಿಕ್ರಿಯಿಸಿದವರ ವಿರುದ್ಧವೂ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದರೆ, ಬಾಲಕಿಯನ್ನು ರಕ್ಷಿಸಬಹುದಿತ್ತು” ಎಂದು ಸ್ಥಳೀಯರಾದ ಗಣೇಶ್ ಡೋಲುಯಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ ವೈದ್ಯರ ಮುಷ್ಕರ ಅಂತ್ಯ; ಐದರಲ್ಲಿ ಮೂರು ಬೇಡಿಕೆ ಈಡೇರಿಸಲು ಸಿಎಂ ಸಮ್ಮತಿ

ಆದರೆ ಪೊಲೀಸರು ಮಾತ್ರ, “ದೂರು ಸ್ವೀಕರಿಸಿದ ತಕ್ಷಣ ಕ್ರಮ ಕೈಗೊಳ್ಳಲಾಗಿದೆ. ಬಾಲಕಿಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ” ಎಂದು ಹೇಳಿಕೊಂಡಿದ್ದಾರೆ.

“ಶುಕ್ರವಾರ ರಾತ್ರಿ 9 ಗಂಟೆಗೆ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಆರಂಭಿಕ ತನಿಖೆಯ ನಂತರ ಇಂದು ಬೆಳಿಗ್ಗೆ ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ ಮತ್ತು ಮೃತ ಬಾಲಕಿಯ ಕುಟುಂಬದೊಂದಿಗೆ ನಾವಿದ್ದೇವೆ” ಎಂದು ತಿಳಿಸಿದ್ದಾರೆ.

ಇನ್ನು ಈ ನಡುವೆ ಕುಲ್ತಾಳಿ ಟಿಎಂಸಿ ಶಾಸಕ ಗಣೇಶ್ ಮೊಂಡಲ್ ಸ್ಥಳೀಯರನ್ನು ಸಮಾಧಾನಪಡಿಸಲು ಗ್ರಾಮಕ್ಕೆ ಭೇಟಿ ನೀಡಿದ್ದು, ಸ್ಥಳೀಯರು ಹಿಂದಕ್ಕೆ ಕಳುಹಿಸಿದ್ದಾರೆ. ಪೊಲೀಸರ ಪರವಾಗಿ ಶಾಸಕರಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮೊಂಡಲ್, “ಈ ಪ್ರದೇಶದ ಜನರ ಕುಂದುಕೊರತೆ ಮತ್ತು ಕೋಪವನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಅವರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...