ಇಸ್ರೇಲ್ ಮತ್ತು ಅಮೆರಿಕ ದಾಳಿ ಇರಾನ್ ಮೇಲೆ ದಾಳಿ ಮಾಡಿದ್ದು, ಇರಾನ್ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ನಡೆಸಿದೆ. ಈ ಬೆನ್ನಲ್ಲೇ ವಿಶ್ವದ ಹಲವು ದೇಶಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಭಾನುವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರ, ಲಡಾಖ್‌ನಲ್ಲಿ ಹತ್ತಾರು ಸಾವಿರ ಜನರು ಬೀದಿಗಿಳಿದು ಪ್ರತಿಭಟಿಸಿದ್ದು, ತೀವ್ರ ಶೋಕಾಚರಿಸಲಾಗುತ್ತಿದೆ.
ಕಾಶ್ಮೀರ ಕಣಿವೆಯಿಂದ ಲಡಾಖ್‌ನ ಕಾರ್ಗಿಲ್‌ವರೆಗೆ, ಜನರು ಬೀದಿಗಿಳಿದು ಹುತಾತ್ಮತೆಯ ಸಂಕೇತವಾಗಿ ಕಪ್ಪು ಮತ್ತು ಕೆಂಪು ಧ್ವಜಗಳನ್ನು ಹೊತ್ತು ನಡೆದಿದ್ದಾರೆ. ಜತೆಗೆ ಖಮೇನಿ ಮತ್ತು ಇರಾನ್‌ನ ಸ್ಥಾಪಕ ಆಧ್ಯಾತ್ಮಿಕ ನಾಯಕ ಅಯತೊಲ್ಲಾ ರುಹೊಲ್ಲಾ ಖಮೇನಿ ಭಾವಚಿತ್ರಗಳು ಕಾಣಿಸಿಕೊಂಡಿದೆ.
ಇದನ್ನು ಓದಿದ್ದೀರಾ? ಇರಾನ್‌ನ ಮಿತ್ರರು ಯಾರು? ರಷ್ಯಾ-ಚೀನಾ ನಿಲುವೇನು?
ಪ್ರತಿಭಟನಾಕಾರರು ಅಮೆರಿಕ, ಇಸ್ರೇಲ್ ಮತ್ತು ಅದರ ಮಿತ್ರರಾಷ್ಟ್ರಗಳನ್ನು ಖಂಡಿಸುವ ಘೋಷಣೆಗಳನ್ನು ಕೂಗಿದೆ. ಶ್ರೀನಗರದಲ್ಲಿ, ಐತಿಹಾಸಿಕ ಲಾಲ್ ಚೌಕ್‌ನಲ್ಲಿ ಅಧಿಕ ಜನರು ಸೇರಿಕೊಂಡಿದ್ದಾರೆ. ಶ್ರೀನಗರದಾದ್ಯಂತದ ಅಲ್ಲಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಜಡಿಬಲ್, ರೈನವಾರಿ, ಬೆಮಿನಾ ಮತ್ತು ಡೌನ್‌ಟೌನ್‌ನ ಕೆಲವು ಭಾಗಗಳಲ್ಲಿ ಜನರು ಮೆರವಣಿಗೆ ನಡೆಸಿದ್ದು, ಇರಾನ್‌ನೊಂದಿಗೆ ನಿಲ್ಲುವುದಾಗಿ ಘೋಷಣೆ ಕೂಗಿದ್ದಾರೆ.
ಬಾರಾಮುಲ್ಲಾ, ಬುದ್ಗಾಮ್, ಅನಂತ್‌ನಾಗ್, ಪುಲ್ವಾಮಾ, ಶೋಪಿಯಾನ್ ಮತ್ತು ಕುಪ್ವಾರಾ ಸೇರಿದಂತೆ ಕಾಶ್ಮೀರ ಕಣಿವೆಯ ಸುಮಾರು ಹತ್ತು ಜಿಲ್ಲೆಗಳಿಂದ ಪ್ರತಿಭಟನೆಗಳು ಮತ್ತು ಶೋಕಾಚರಣೆ ನಡೆದಿದೆ. ಸ್ಥಳೀಯ ಇಮಾಂಬರಾಗಳು ಮತ್ತು ಸಮುದಾಯ ಕೇಂದ್ರಗಳು ನಿರಂತರ ಶೋಕಾಚರಣೆ ಸಭೆಗಳನ್ನು ನಡೆಸಲಾಗುತ್ತಿದೆ.
ಜಮ್ಮುವಿನ ಕಿಶ್ತ್ವಾರ್, ಭದೇರ್ವಾ ಮತ್ತು ಜಮ್ಮು ನಗರದ ಕೆಲವು ಭಾಗಗಳಲ್ಲಿ ಶಿಯಾ ಸಂಘಟನೆಗಳು, ಇತರೆ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದಿವೆ. ಶಿಯಾ ಜನಸಂಖ್ಯೆಯ ಭದ್ರಕೋಟೆಯಾದ ಲಡಾಖ್‌ನ ಕಾರ್ಗಿಲ್ ಜಿಲ್ಲೆಯಲ್ಲಿ ಅತಿ ಹೆಚ್ಚು ಜನರು ಬೀದಿಗಿಳಿದು ಪ್ರತಿಭಟಿಸಿದ್ದಾರೆ.
ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಬೃಹತ್ ಸೇನಾ ದಾಳಿ ನಡೆಸಿವೆ. ಈ ಕಾರ್ಯಾಚರಣೆಗೆ ಅಮೆರಿಕ ‘ಆಪರೇಷನ್ ಎಪಿಕ್ ಫ್ಯೂರಿ’ ಮತ್ತು ಇಸ್ರೇಲ್ ‘ರೋರಿಂಗ್ ಲಯನ್’ ಎಂದು ಹೆಸರಿಟ್ಟಿವೆ. ಈ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತರಾಗಿದ್ದಾರೆ. ಜತೆಗೆ ಅವರ ಕುಟುಂಬಸ್ಥರು ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ಖಚಿತಪಡಿಸಿವೆ.
ಇರಾನ್‌ನ ಅರೆಸೈನಿಕ ಕ್ರಾಂತಿಕಾರಿ ಗಾರ್ಡ್‌ನ ಮುಖ್ಯಸ್ಥ ಮತ್ತು ಭದ್ರತಾ ಸಲಹೆಗಾರ ಅಲಿ ಶಮ್ಖಾನಿ ಅವರೊಂದಿಗೆ ಸಭೆ ನಡೆಸುತ್ತಿದ್ದ ಜನರಲ್ ಅಬ್ದುಲ್ ರಹೀಮ್ ಮೌಸವಿ ಮತ್ತು ರಕ್ಷಣಾ ಸಚಿವ ಜನರಲ್ ಅಜೀಜ್ ನಾಸಿರ್ಜಾದೆ ಹತರಾಗಿದ್ದಾರೆ ಎಂದೂ ಇರಾನ್ ಮಾಧ್ಯಮಗಳು ವರದಿ ಮಾಡಿದೆ.
ಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಇಸ್ರೇಲ್‌ನ ಟೆಲ್ ಅವಿವ್ ಮತ್ತು ಮಧ್ಯಪ್ರಾಚ್ಯ ಕತಾರ್, ಯುಎಇ, ಬಹ್ರೇನ್, ಕುವೈತ್ ಮತ್ತು ಜೋರ್ಡಾನ್‌ನಲ್ಲಿರುವ ಅಮೆರಿಕದ ಮಿಲಿಟರಿ ಬೇಸ್‌ಗಳ ಮೇಲೆ ಕ್ಷಿಪಣಿ ದಾಳಿ ನಡೆಸುತ್ತಿದೆ.





