ಪಶ್ಚಿಮ ಬಂಗಾಳ | ಹಿಂಸಾಚಾರಕ್ಕೆ ತಿರುಗಿದ ವಕ್ಫ್ ವಿರುದ್ಧದ ಪ್ರತಿಭಟನೆ; ಮೂವರ ಸಾವು

Date:

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಶನಿವಾರ ಮತ್ತೆ ವಕ್ಫ್ ಕಾಯ್ದೆ ವಿರುದ್ಧವಾಗಿ ಪ್ರತಿಭಟನೆ ನಡೆದಿದ್ದು ಹಿಂಸಾಚಾರ ಉಂಟಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಶುಕ್ರವಾರವಷ್ಟೇ ಹಿಂಸಾಚಾರ ನಡೆದಿದ್ದು ಯಾವುದೇ ಪ್ರಾಣಾಪಾಯವಾಗಿರಲಿಲ್ಲ. ಆದರೆ ನೂರಾರು ಮಂದಿಯನ್ನು ಬಂಧಿಸಲಾಗಿದೆ.

ಇದೀಗ ಶನಿವಾರ ಮತ್ತೆ ಹಿಂಸಾಚಾರ ನಡೆದಿದೆ. ಬಿಎಸ್‌ಎಫ್‌ ನಡೆಸಿದ ಗುಂಡಿನ ದಾಳಿಯಿಂದಾಗಿ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ 118ಕ್ಕೂ ಅಧಿಕ ಮಂದಿ ಬಂಧನಕ್ಕೆ ಒಳಗಾಗಿದ್ದಾರೆ.

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | ವಕ್ಫ್ ಕಾಯ್ದೆ ವಿರುದ್ಧ ಪ್ರತಿಭಟನೆ ವೇಳೆ ಹಿಂಸಾಚಾರ; 110ಕ್ಕೂ ಹೆಚ್ಚು ಮಂದಿ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವೆಲ್ಲವುದರ ನಡುವೆ ರಾಜ್ಯದಲ್ಲಿ ಈ ವಿವಾದಿತ ಕಾಯ್ದೆಯನ್ನು ಜಾರಿಗೊಳಿಸುವುದಿಲ್ಲ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೆ ಭರವಸೆ ನೀಡಿದ್ದಾರೆ. “ನಾವು ಈ ಕಾಯ್ದೆಯನ್ನು ರಚಿಸಿರುವುದಲ್ಲ, ಕೇಂದ್ರ ಸರ್ಕಾರ ರಚಿಸಿರುವುದು ಎಂಬುದು ನನೆಪಿರಲಿ. ಆದ್ದರಿಂದ ನಿಮ್ಮಲಿರುವ ಪ್ರಶ್ನೆಯನ್ನು ನೀವು ಕೇಂದ್ರ ಸರ್ಕಾರದ ಬಳಿಯೇ ಕೇಳಬೇಕು. ನಾವು ಈಗಾಗಲೇ ಈ ವಿಚಾರದಲ್ಲಿ ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ. ನಾನು ವಕ್ಫ್ ಕಾಯ್ದೆಯನ್ನು ಬೆಂಬಲಿಸಲ್ಲ, ಕಾಯ್ದೆಯನ್ನು ನಮ್ಮ ರಾಜ್ಯದಲ್ಲಿ ಜಾರಿಗೊಳಿಸಲ್ಲ. ಹಾಗಿರುವಾಗ ಈ ಗಲಭೆ ಯಾಕಾಗಿ” ಎಂದು ಪಶ್ಚಿಮ ಬಂಗಾಳ ಸಿಎಂ ಪ್ರಶ್ನಿಸಿದ್ದಾರೆ.

ಶುಕ್ರವಾರ ನಡೆದ ಹಿಂಸಾಚಾರದಲ್ಲಿ 15 ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಡಿಜಿಪಿ ರಾಜೀವ್ ಕುಮಾರ್, “ನಾವು ಇಂತಹ ಗೂಂಡಾಗಿರಿಯನ್ನು ಸಹಿಸಲಾರೆವು. ನಾವು ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಪ್ರತಿಭಟನೆ ಆರಂಭಿಸಿ ಬಳಿಕ ಸಾರ್ವಜನಿಕ ಆಸ್ತಿಗೆ ಹಾನಿಯುಂಟು ಮಾಡಲಾಗಿದೆ. ಬಳಿಕ ಕೋಮು ಬಣ್ಣ ಪಡೆದುಕೊಂಡಿದೆ. ಮತ್ತೆ ಹಿಂಸಾಚಾರ ನಡೆದಿದೆ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...